close

News WrapGet Handpicked Stories from our editors directly to your mailbox

ಅಂತರರಾಷ್ಟ್ರೀಯ ಯೋಗ ದಿನ 2019: ಇತಿಹಾಸ, ಮಹತ್ವ ಮತ್ತು ಈ ವರ್ಷದ ಥೀಮ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಶಿಫಾರಸ್ಸಿನ ಮೇರೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್‌ಜಿಎ) 2014 ರಲ್ಲಿ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಘೋಷಿಸಿತ್ತು.

Updated: Jun 21, 2019 , 07:42 AM IST
ಅಂತರರಾಷ್ಟ್ರೀಯ ಯೋಗ ದಿನ 2019: ಇತಿಹಾಸ, ಮಹತ್ವ ಮತ್ತು ಈ ವರ್ಷದ ಥೀಮ್
Pic Courtesy: IANS

ನವದೆಹಲಿ: ಅಂತಾರಾಷ್ಟ್ರೀಯ ಯೋಗ ದಿನವನ್ನು ಜೂನ್ 21 ರಂದು ಆಚರಿಸಲಾಗುತ್ತದೆ. ವಿಶ್ವಸಂಸ್ಥೆಯ ಸಾಮಾನ್ಯ ಸಭೆ (ಯುಎನ್‌ಜಿಎ) ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗ ದಿನವೆಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದೆ. ಇದನ್ನು ಅನುಸರಿಸಿ, ಅನೇಕ ಆಧ್ಯಾತ್ಮಿಕ ನಾಯಕರು ಸಹ ಯೋಗ ದಿನಾಚರಣೆಗೆ ಬೆಂಬಲ ವ್ಯಕ್ತಪಡಿಸಿದರು.

ಪ್ರಧಾನಿ ಮೋದಿ ಅವರು ತಮ್ಮ ಭಾಷಣದಲ್ಲಿ ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಸೂಚಿಸಿದ್ದರು, ಏಕೆಂದರೆ ಜೂನ್ 21 ರಂದು ಉತ್ತರ ಗೋಳಾರ್ಧದ ದೀರ್ಘಕಾಲ ಹಗಲು ಹೊಂದಿರುವ ದಿನ. ಈ ದಿನವನ್ನು ಬೇಸಿಗೆ ಅಯನ ಸಂಕ್ರಾಂತಿ ದಿನವೆಂದು (ವರ್ಷದಲ್ಲಿನ ಅತ್ಯಂತ ಹೆಚ್ಚು ಹಗಲುಳ್ಳ ದಿನ) ಕರೆಯಲಾಗುತ್ತದೆ. ಯೋಗದ ದೃಷ್ಟಿಕೋನದಲ್ಲಿ ಇದು ಅತ್ಯಂತ ಹೆಚ್ಚು ಮಹತ್ವ ಪಡೆದಿದೆ.

ಈ ಕರಡನ್ನು ಯುಎನ್‌ಜಿಎದಲ್ಲಿ ಭಾರತದ ಖಾಯಂ ಪ್ರತಿನಿಧಿ ಅಶೋಕ್ ಮುಖರ್ಜಿ ಅವರು ಮೊದಲು ಪರಿಚಯಿಸಿದರು ಮತ್ತು 177 ರಾಷ್ಟ್ರಗಳು ಈ ನಿರ್ಣಯವನ್ನು ಸಹ-ಪ್ರಾಯೋಜಿಸಿದವು.

ಜೂನ್ 21, 2015, ಭಾರತದಾದ್ಯಂತ ಮೊದಲ ಬಾರಿಗೆ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ, ಹಲವಾರು ಪ್ರಮುಖ ಮುಖಂಡರು ಮತ್ತು ಗಣ್ಯರೊಂದಿಗೆ ನವದೆಹಲಿಯ ರಾಜ್‌ಪಾತ್‌ನಲ್ಲಿ ಯೋಗ ಪ್ರದರ್ಶನ ನೀಡಿದರು. ಅಂದಿನಿಂದ, ಸತತವಾಗಿ ಪ್ರತಿ ವರ್ಷಗಳು, ಭಾರತ ಮತ್ತು ವಿದೇಶಗಳಲ್ಲಿ ಯೋಗ ದಿನವನ್ನು ಪೂರ್ಣ ಉತ್ಸಾಹದಿಂದ ಆಚರಿಸಲಾಗುತ್ತದೆ.

ಈ ವರ್ಷದ ಯೋಗ ಥೀಮ್ 'ಹವಾಮಾನ ಕ್ರಿಯೆ'(Climate Action). ರಾಂಚಿಯಲ್ಲಿ ಮುಖ್ಯ ಕಾರ್ಯಕ್ರಮ ನಡೆಯಲಿದೆ.

ಪ್ರಭಾತ್ ತಾರಾ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್, ಸಚಿವರು ಮತ್ತು ರಾಜ್ಯದ ಹಿರಿಯ ಅಧಿಕಾರಿಗಳು ಸೇರಿದಂತೆ 18,000 ಜನರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಯೋಗದಲ್ಲಿ ಪಾಲ್ಗೊಂಡಿದ್ದಾರೆ.