ಇಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಏಕೆ ಆಚರಿಸಲಾಗುತ್ತದೆ?

ನಿಮಗೆಲ್ಲರಿಗೂ ತಿಳಿದಿರುವಂತೆ ಶಿಕ್ಷಕರ ದಿನಾಚರಣೆಯನ್ನು ಸರ್ವಪಲ್ಲಿ ರಾಧಾಕೃಷ್ಣ ಅವರ ಹೆಸರಿನಲ್ಲಿ ಆಚರಿಸಲಾಗುತ್ತದೆ.ಅದರಂತೆ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ನವಂಬರ್ 11 ರಂದು ಭಾರತದ ಮೊದಲ ಶಿಕ್ಷಣ ಮಂತ್ರಿಗಳಾಗಿದ್ದ ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಅವರ ಹೆಸರಿನಲ್ಲಿ ಆಚರಿಸಲಾಗುತ್ತದೆ.

Last Updated : Nov 11, 2018, 01:20 PM IST
ಇಂದು ರಾಷ್ಟ್ರೀಯ ಶಿಕ್ಷಣ ದಿನವನ್ನು ಏಕೆ ಆಚರಿಸಲಾಗುತ್ತದೆ? title=
Photo:DNA

ನವದೆಹಲಿ: ನಿಮಗೆಲ್ಲರಿಗೂ ತಿಳಿದಿರುವಂತೆ ಶಿಕ್ಷಕರ ದಿನಾಚರಣೆಯನ್ನು ಸರ್ವಪಲ್ಲಿ ರಾಧಾಕೃಷ್ಣ ಅವರ ಹೆಸರಿನಲ್ಲಿ ಆಚರಿಸಲಾಗುತ್ತದೆ. ಅದರಂತೆ ರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ನವಂಬರ್ 11ರಂದು ಭಾರತದ ಮೊದಲ ಶಿಕ್ಷಣ ಮಂತ್ರಿಗಳಾಗಿದ್ದ ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಅವರ ಹೆಸರಿನಲ್ಲಿ ಆಚರಿಸಲಾಗುತ್ತದೆ.

ಮೌಲಾನಾ ಅಬ್ದುಲ್ ಕಲಾಮ್ ಆಜಾದ್ ಅವರು ನವಂಬರ್ 11,1888 ರಲ್ಲಿ ಆಗ ಒಟ್ಟೋಮನ್ ಸಾಮ್ರಾಜ್ಯದ ಭಾಗವಾಗಿದ್ದ ಮೆಕ್ಕಾದಲ್ಲಿ ಜನಿಸಿದರು. ಮುಂದೆ ಭಾರತದ ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರರಲ್ಲಿ ಒಬ್ಬರಾಗಿ 1912 ರಲ್ಲಿ ಉರ್ದು ಭಾಷೆಯಲ್ಲಿ ಅಲ್-ಹಿಲಾಲ್ ಎನ್ನುವ  ನಿಯತಕಾಲಿಕೆಯನ್ನು ಹೊರತಂದರು. ಆ ಮೂಲಕ ಸ್ವಾತಂತ್ರ ಹೋರಾಟದ ಚಿಂತನೆಗಳಿಗೆ ಅಡಿಪಾಯ ಹಾಕಿದರು. ಮುಂದೆ ಇವರ ಶಿಕ್ಷಣದ ಕೊಡುಗೆಗಾಗಿ ಅವರಿಗೆ 1992ರಲ್ಲಿ ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ಸಹ ನೀಡಲಾಯಿತು.

ಮೌಲಾನಾ ಆಜಾದ್ ವಿದ್ವಾಂಸರು ಮತ್ತು ಕವಿಗಳಾಗಿ ಅನೇಕ ಭಾಷೆಗಳಲ್ಲಿ ಪರಿಣತರಾಗಿದ್ದರು.14 ನೇ ವಯಸ್ಸಿನವರೆಗಿನ ಎಲ್ಲಾ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯ ಸಾರ್ವತ್ರಿಕ ಪ್ರಾಥಮಿಕ ಶಿಕ್ಷಣ ಅವರ ಮಹತ್ತರವಾದ ಕನಸಾಗಿತ್ತು, ವೃತ್ತಿ ತರಬೇತಿ ಮತ್ತು ತಾಂತ್ರಿಕ ಶಿಕ್ಷಣದ ಬಗ್ಗೆ ಅವರು ಹೆಚ್ಚಿನ ಒತ್ತನ್ನು ನೀಡಿದ್ದಲ್ಲದೆ ಮಹಿಳೆಯರ ಶಿಕ್ಷಣಕ್ಕಾಗಿಯೂ ಕೂಡ ಅವರು ಧ್ವನಿ ಎತ್ತಿದ್ದರು. ಮೌಲಾನಾ ಅಬ್ದುಲ್ ಕಲಾಮ್ ಆಜಾದ್ 1949ರಲ್ಲಿ ಕೇಂದ್ರ ಸದನದಲ್ಲಿ ಮಾತನಾಡುತ್ತಾ ಆಧುನಿಕ ವಿಜ್ಞಾನ ಮಹತ್ವವನ್ನು ಪ್ರತಿಪಾಧಿಸಿದ್ದರು. ಸಮಾಜದ ಅರ್ಧ ಭಾಗವಾಗಿರುವ ಮಹಿಳೆಯರಿಗೆ ಶಿಕ್ಷಣ ನೀಡದ ಹೊರತು ಯಾವುದೇ ರಾಷ್ಟ್ರೀಯ ಕಾರ್ಯಕ್ರಮವು ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದರು.

ಅಬ್ದುಲ್ ಕಲಾಂ ಅಜಾದ್ ಅವರ ಪ್ರಯತ್ನ ಮತ್ತು ದೃಷ್ಟಿಕೋನದಲ್ಲಿ ಸಂಗೀತ ನಾಟಕ್ ಅಕಾಡೆಮಿ, ಲಲಿತ್ ಕಲಾ ಅಕಾಡೆಮಿ, ಸಾಹಿತ್ಯ ಅಕಾಡೆಮಿ ಮತ್ತು ಭಾರತೀಯ ಕೌನ್ಸಿಲ್ ಫಾರ್ ಕಲ್ಚರಲ್ ರಿಲೇಶನ್ಸ್ ಸೇರಿದಂತೆ ಹಲವು ಪ್ರಮುಖ ಸಾಂಸ್ಕೃತಿಕ ಮತ್ತು ಸಾಹಿತ್ಯಿಕ ಅಕಾಡೆಮಿಗಳನ್ನು ಸ್ಥಾಪನೆಯಾದವು. ಅಲ್ಲದೆ ಈಗಿನ ಐಐಟಿ, ಐಐಎಸ್ಸಿ, ಸ್ಕೂಲ್ ಆಫ್ ಪ್ಲಾನಿಂಗ್ ಮತ್ತು ಆರ್ಕಿಟೆಕ್ಚರ್ ಮತ್ತು ಯುಜಿಸಿ ಅವರ ಅಧಿಕಾರಾವಧಿಯಲ್ಲಿ ಸ್ಥಾಪಿತಗೊಂಡ ಮಹತ್ತರ ಸಂಸ್ಥೆಗಳಾಗಿವೆ.ಮೌಲಾನಾ ಅವರು ಉರ್ದು, ಪರ್ಷಿಯನ್ ಮತ್ತು ಅರೇಬಿಕ್ ಭಾಷೆಗಳಲ್ಲಿ ಶ್ರೇಷ್ಠ ವಿದ್ವಾಂಸರಾಗಿದ್ದರು. ಶೈಕ್ಷಣಿಕದ ಅನುಕೂಲಕ್ಕಾಗಿ ಇಂಗ್ಲಿಷ್ ಭಾಷೆಯನ್ನು ಸಮರ್ಥಿಸಿಕೊಂಡಿದ್ದರು. ಅಲ್ಲದೆ ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕೆಂದು ಅವರು ನಂಬಿದ್ದರು.
 

Trending News