Entertainment: ಬೇಲೂರಿನ ಸಂತೋಷ್ ನಾಗೇನಹಳ್ಳಿ ಅವರು ಸಮನ್ವಿ ಕ್ರಿಯೇಷನ್ಸ್ ಬೇಲೂರು ಸಂಸ್ಥೆಯಡಿ ನಿರ್ಮಿಸಿರುವ ಪ್ರಥಮ ಚಿತ್ರ "1 RAಬರಿ ಕಥೆ". ಇತ್ತೀಚೆಗಷ್ಟೆ  ತನ್ನಚಿತ್ರೀಕರಣ ಮುಗಿಸಿಕೊಂಡು  ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿರುವ ಚಿತ್ರತಂಡ  ಶೀಘ್ರದಲ್ಲೇ  ಚಿತ್ರವನ್ನು ತೆರೆಗೆ ತರಲು  ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ.ಎಲ್ಲಾ ವರ್ಗದ ಪ್ರೇಕ್ಷಕರನ್ನು ಸೆಳೆಯುವಂಥ ಪಕ್ಕಾ ಮಾಸ್ ಕಮರ್ಷಿಯಲ್ ರೊಮ್ಯಾಂಟಿಕ್, ಕಾಮಿಡಿ, ಆಕ್ಷನ್, ಸಸ್ಪೆನ್ಸ್- ಥ್ರಿಲ್ಲರ್, ಸೆಂಟಿಮೆಂಟ್ ಕಥಾಹಂದರ ಒಳಗೊಂಡಿರುವ 'ಒನ್ ರಾಬರಿ ಕಥೆ' ಚಿತ್ರಕ್ಕೆ ಗೋಪಾಲ್ ಹಳ್ಳೇರ್ ಹೊನ್ನಾವರ ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನದ ಜವಾಬ್ದಾರಿ ನಿಭಾಯಿಸಿದ್ದಾರೆ.


COMMERCIAL BREAK
SCROLL TO CONTINUE READING

ಬಹುತಾರಾಗಣ ಒಳಗೊಂಡ  ಈ ಚಿತ್ರದಲ್ಲಿ ರಕ್ಕಂ ಖ್ಯಾತಿಯ ರಣಧೀರ್ ಗೌಡ ನಾಯಕನಾಗಿ ನಟಿಸಿದರೆ, ಹೊಸ ಪ್ರತಿಭೆ ರಿಷ್ವಿ ಭಟ್ ನಾಯಕಿಯ ಪಾತ್ರ ನಿರ್ವಹಿಸಿದ್ದಾರೆ.ನಿರ್ಮಾಪಕ ಬೇಲೂರಿನ ಸಂತೋಷ್  ನಾಗೇನಹಳ್ಳಿ  ಅವರು ನಿರ್ಮಾಣದ ಜೊತೆಗೆ ವಿಶೇಷ ಪಾತ್ರವೊಂದರಲ್ಲಿ ಕಾಣಿಸಿಕೊಂಡಿದ್ದಾರೆ.ಜೊತೆಗೆ ಸುಂದರ್ ರಾಜ್, ಕರಿಸುಬ್ಬು, ಕಡ್ಡಿಪುಡಿ ಚಂದ್ರು, ಶಿವರಾಜ್ ಕೆ.ಆರ್. ಪೇಟೆ, ತಬಲಾನಾಣಿ, ಜಹಾಂಗೀರ್, ಗಿರೀಶ್ ಶಿವಣ್ಣ, ಮೂಗ್ ಸುರೇಶ್, ಎಂ.ಕೆ. ಮಠ್, ನವೀನ್ ಪಡೀಲ್,ಸಂಜು ಬಸಯ್ಯ ಮತ್ತು ಕಿರುತೆರೆ ಹಾಗೂ ಮಜಾ ಟಾಕೀಸ್ ನ ಹಲವಾರು  ಕಲಾವಿದರು  ನಟಿಸಿದ್ದಾರೆ.


ಇದನ್ನೂ ಓದಿ:ಅಬ್ಬರಿಸಲು ಸಜ್ಜಾದ "ಕಬ್ಜ"....


ಬೇಲೂರು, ಚಿಕ್ಕಮಗಳೂರು, ಸಕಲೇಶಪುರ, ಹೊನ್ನಾವರ ಮತ್ತು ಸಿಂದನೂರಿನ ರವಕುಂದದಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಪ್ರಕಾಶ್ ಜಿ. ಅವರ ಸಂಭಾಷಣೆ, ಸಂತೋಷ್  ನಾಗೇನಹಳ್ಳಿ, ಪ್ರಕಾಶ್ ಅವರ ಸಾಹಿತ್ಯ, ಡಿರೆಂಟ್ ಡ್ಯಾನಿ ಅವರ ಸಾಹಸ, ಹರೀಶ್ ಜಿಂದೆ  ಅವರ ಛಾಯಾಗ್ರಹಣ, ಸಂಜಿವರೆಡ್ಡಿ ಅವರ ಸಂಕಲನ, ಶ್ರೀವತ್ಸ ಅವರ  ಸಂಗೀತ ಮತ್ತು ಚಾಮರಾಜ್, ರೋಹಿತ್ ಅರುಣ್ ಕೊರಿಯೋಗ್ರಫಿ ಈ ಚಿತ್ರಕ್ಕಿದೆ.


ಇದನ್ನೂ ಓದಿ:"ಲಂಕಾಸುರ" ಚಿತ್ರದ "ಮಾಡರ್ನ್ ಮಹಾಲಕ್ಷ್ಮಿ" ಸಾಂಗ್ ರಿಲೀಸ್ ಮಾಡಿದ ಮಾಲಾಶ್ರಿhttps://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.