Rajamouli upcoming movie : ಸೂಪರ್ ಸ್ಟಾರ್ ಮಹೇಶ್ ಬಾಬು ಹಾಗೂ ಸ್ಟಾರ್ ಡೈರೆಕ್ಟರ್ ಎಸ್ ಎಸ್ ರಾಜಮೌಳಿ ಸಿನಿಮಾವೊಂದು ತೆರೆ ಮೇಲೆ ಬರಲು ಸಿದ್ದವಾಗುತ್ತಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಅತಿ 0 ಬಜೆಟ್‌ನಲ್ಲಿ ಈ ಚಿತ್ರ ನಿರ್ಮಾಣವಾಗಲಿದ್ದು, ಸದ್ಯ ಈ ಸಿನಿಮಾದ ಸ್ಕ್ರಿಪ್ಟ್ ಕೆಲಸ ನಡೆಯುತ್ತಿದೆ. 


COMMERCIAL BREAK
SCROLL TO CONTINUE READING

ಇದು ಮುಗಿದ ನಂತರ ಪ್ರಿ-ಪ್ರೊಡಕ್ಷನ್ ಕೆಲಸ ಶುರುವಾಗಲಿದೆ. ಈ ಸಿನಿಮಾ ಆರಂಭಕ್ಕೂ ಮುನ್ನ ತಮ್ಮ ಲುಕ್‌ಗಾಗಿ ಮಹೇಶ್ ಕಸರತ್ತು ನಡೆಸುತ್ತಿದ್ದಾರೆ. ಇದಕ್ಕೆ ಸಂಬಂಧಿಸಿದ ವಿಡಿಯೋಗಳು ಇತ್ತೀಚೆಗೆ ವೈರಲ್ ಆಗಿವೆ. ಇತ್ತೀಚೆಗಷ್ಟೇ ಈ ಸಿನಿಮಾದ ಬಗ್ಗೆ ಕುತೂಹಲಕಾರಿ ಸುದ್ದಿಯೊಂದು ಹರಿದಾಡುತ್ತಿದೆ. 


ಇದನ್ನೂ ಓದಿ: ʼಯುವರಾಜ್ ಸಿಂಗ್‌ʼ ಕಪಿಲ್‌ ದೇವ್‌ ಸೇರಿದಂತೆ ಸಿನಿಮಾಗಳಲ್ಲಿ ನಟಿಸಿದ ಸ್ಟಾರ್‌ ಕ್ರಿಕೆಟಿಗರು..! ಲಿಸ್ಟ್‌ ಇಲ್ಲಿದೆ


ಈ ಆಕ್ಷನ್‌ ಥ್ರಿಲ್ಲರ್‌ ಚಿತ್ರದಲ್ಲಿ ಮೂವರು ನಾಯಕಿಯರಿಗೆ ಅವಕಾಶವಿದೆ. ಆ ಪಾತ್ರಗಳಿಗೆ ಮೂವರು ಬಾಲಿವುಡ್ ಬೆಡಗಿಯರು ಆಯ್ಕೆಯಾಗಲಿದ್ದಾರೆಯಂತೆ. ಸಧ್ಯ ರಾಜಮೌಳಿ ತಂಡ ನಾಯಕಿಯರನ್ನು ಅಂತಿಮಗೊಳಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದೆ, ಜೊತೆಗೆ ತಾರಾಗಣ ಮತ್ತು ಸಿಬ್ಬಂದಿ ಆಯ್ಕೆ ಕೂಡ ನಡೆಸುತ್ತಿದೆ.


ಚಿತ್ರದ ಶೂಟಿಂಗ್ 2024 ರ ಮೊದಲ ತ್ರೈಮಾಸಿಕದಲ್ಲಿ ಪ್ರಾರಂಭವಾಗುವ ಸಾಧ್ಯತೆಯಿದೆ. ಕೆಲವು ಹಾಲಿವುಡ್ ಸ್ಟುಡಿಯೋಗಳು ಚಿತ್ರಕ್ಕೆ ಬಂಡವಾಳ ಹೂಡಲು ಮಾತುಕತೆ ನಡೆಸುತ್ತಿವೆ ಎಂದು ವರದಿಯಾಗಿದೆ. ಕೆಎಲ್ ನಾರಾಯಣ ಈ ಚಿತ್ರದ ನಿರ್ಮಾಪಕರು. ವಿಜಯೇಂದ್ರ ಪ್ರಸಾದ್ ಈ ಚಿತ್ರಕ್ಕೆ ಕಥೆ ಬರೆಯುತ್ತಿದ್ದಾರೆ. ಅಮೆಜಾನ್ ಅರಣ್ಯದಲ್ಲಿ ಈ ಸಿನಿಮಾ ಚಿತ್ರೀಕರಣ ನಡೆಯಲಿದೆಯಂತೆ.


ಇದನ್ನೂ ಓದಿ: 'ಜವಾನ್'ನಲ್ಲಿ ನಟನೆ ಮಾಡೋಕು ಮುಂಚೆ ಶಾರುಖ್ ಯಶ್ ಸಿನಿಮಾ ನೋಡಿದ್ರಂತೆ...! ಏಕೆ ಗೊತ್ತಾ..?


ಸದ್ಯ ಮಹೇಶ್‌ ಬಾಬು ‘ಗುಂಟೂರು ಕಾರಂ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ತ್ರಿವಿಕ್ರಮ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸುತ್ತಿದ್ದಾರೆ. ಈ ಚಿತ್ರವನ್ನು ಹರಿಕಾ & ಹಾಸಿನಿ ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಎಸ್. ರಾಧಾಕೃಷ್ಣ ನಿರ್ಮಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.