ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಸಡಗರ ಒಂದು ಕಡೆಯಾದರೆ, ಅಲ್ಲಿನ ವುಡ್ ಲ್ಯಾಂಡ್ಸ್ ಚಿತ್ರಮಂದಿರದಲ್ಲಿ "ಕೃಷ್ಣಂ ಪ್ರಣಯ ಸಖಿ" ಚಿತ್ರದ ಐವತ್ತನೇ ದಿನದ ಸಂಭಮ ಮನೆಮಾಡಿತ್ತು. ಈ ಸಂಭ್ರಮವನ್ನು ಸಂಭ್ರಮಿಸಲು ಸುಂದರ ಸಮಾರಂಭವನ್ನು ಆಯೋಜಿಸಿ, ಗೆಲುವಿಗೆ ಕಾರಣರಾದ ಚಿತ್ರತಂಡದವರನ್ನು ನಿರ್ಮಾಪಕರು ಸ್ಮರಣಿಕೆ ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಸೇರಿದಂತೆ ಚಿತ್ರತಂಡದ ಸದಸ್ಯರು ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಮಧುಮೇಹಕ್ಕೆ ಈ ʼಎಲೆʼ ರಾಮರಕ್ಷೆಯಿದ್ದಂತೆ: ನೀರಿನಲ್ಲಿ ನೆನೆಸಿಟ್ಟು ಊಟಕ್ಕೆ 10 ನಿಮಿಷ ಮೊದಲು ಕುಡಿದರೆ 30 ದಿನಗಳವರೆಗೆ ಬ್ಲಡ್ ಶುಗರ್ ನಾರ್ಮಲ್‌ ಆಗೇ ಉಳಿಯುತ್ತದೆ


ಚಿತ್ರಮಂದಿರಗಳು ದೇವಸ್ಥಾನ ಇದ್ದ ಹಾಗೆ. ಅಲ್ಲಿಗೆ ಬರುವ ಪ್ರೇಕ್ಷಕರು ದೇವರುಗಳು ಎಂದು ಮಾತನಾಡಿದ ಗೋಲ್ಡನ್ ಸ್ಟಾರ್ ಗಣೇಶ್, "ಪ್ರೇಕ್ಷಕರ ಮನ ಗೆದ್ದರೆ, ನಾವು ಗೆದ್ದ ಹಾಗೆ. ಐದು ದಿನ, ಏಳು ದಿನ ಅಂತ ಲೆಕ್ಕ ಹಾಕುತ್ತಿರುವ ಈ ಸಂದರ್ಭದಲ್ಲಿ ಚಿತ್ರವೊಂದು ಐವತ್ತು ದಿನಗಳು ಪೂರೈಸಿರುವುದು ಸುಲಭದ ಮಾತಲ್ಲ. ಈ ಗೆಲುವನ್ನು ನಾನು ಕನ್ನಡ ಕಲಾಭಿಮಾನಿಗಳಿಗೆ ಅರ್ಪಿಸುತ್ತೇನೆ. ನಿರ್ದೇಶಕರಿಗೆ, ನಿರ್ಮಾಪಕರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ. ಚಿತ್ರದ ಮೊದಲ ಹಾಡು ಮೈಸೂರಿನಲ್ಲೇ ಬಿಡುಗಡೆಯಾಗಿತ್ತು. ಆಗ ನಾನು ಹೇಳಿದ್ದೆ. ಐವತ್ತನೇ ದಿನದ ಸಮಾರಂಭವನ್ನು ಮೈಸೂರಿನಲ್ಲೇ ಮಾಡೋಣ ಅಂತ. ಆ ಮಾತು ನಿಜವಾಗಿರುವುದಕ್ಕೆ ಖುಷಿಯಾಗಿದೆ" ಎಂದರು.


ಸಿಂಗಲ್ ಥಿಯೇಟರ್ ಗೆ ಜನರು ಬರುತ್ತಿಲ್ಲ ಎಂಬ ಸಂದರ್ಭದಲ್ಲಿ ನಮ್ಮ "ಕೃಷ್ಣಂ ಪ್ರಣಯ ಸಖಿ" ಚಿತ್ರ ಸಿಂಗಲ್ ಥಿಯೇಟರ್ ನಲ್ಲೇ ಐವತ್ತು ದಿನ ಪೂರೈಸಿರುವುದು ಖುಷಿಯಾಗಿದೆ. ಹಾಗಾಗಿ ಸಮಾರಂಭವನ್ನು ಇಲ್ಲೇ ಆಯೋಜಿಸಿದ್ದೇವೆ. ಇನ್ನು ಈ ಚಿತ್ರ ಐವತ್ತು ದಿನ ಯಶಸ್ವಿಯಾಗಿ ಪೂರೈಸಲು ನಿರ್ಮಾಪಕ ಪ್ರಶಾಂತ್ ಜಿ ರುದ್ರಪ್ಪ, ನಾಯಕ ಗಣೇಶ್, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಛಾಯಾಗ್ರಾಹಕ ವೆಂಕಟ್ ರಾಮಪ್ರಸಾದ್ ಪ್ರಮುಖ ಕಾರಣ‌. ಅವರಿಗೆ ಹಾಗೂ ಇಡೀ ತಂಡಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಶ್ರೀನಿವಾಸರಾಜು.


ನಿರ್ಮಾಪಕನಿಗೆ ತನ್ನ ಚಿತ್ರ ಐವತ್ತು ದಿನಗಳನ್ನು ಪೂರೈಸಿದೆ ಎಂಬ ಖುಷಿಗಿಂತ ಮತ್ತೇನು ಬೇಕು. ಈ ಸಂದರ್ಭದಲ್ಲಿ ನನ್ನ ಇಡೀ ತಂಡಕ್ಕೆ ನಾನು ಧನ್ಯವಾದ ಹೇಳುತ್ತೇನೆ ಎಂದರು ಪ್ರಶಾಂತ್ ಜಿ ರುದ್ರಪ್ಪ.  


ಇದನ್ನೂ ಓದಿ:  24 ವರ್ಷಗಳ ನಂತರ ಮತ್ತೆ ಭಾರತ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಸಚಿನ್ ತೆಂಡೂಲ್ಕರ್!


ಹಿರಿಯ ನಟ ಶಶಿಕುಮಾರ್, ಗಿರಿ ಶಿವಣ್ಣ, ನಟಿ ಶರಣ್ಯ ಶೆಟ್ಟಿ, ಡಾ.ವಿ.ನಾಗೇಂದ್ರಪ್ರಸಾದ್, ಡಿಫರೆಂಟ್ ಡ್ಯಾನಿ , ಕಾರ್ಯಕಾರಿ ನಿರ್ಮಾಪಕ ಶರತ್ ಭೋಜರಾಜ್ ಮುಂತಾದವರು "ಕಷ್ಣಂ ಪ್ರಣಯ ಸಖಿ" ಚಿತ್ರದ ಯಶಸ್ಸನ್ನು ತಮ್ಮ ಮಾತುಗಳ ಮೂಲಕ ಹಂಚಿಕೊಂಡರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.