777 Charlie: ಶೀಘ್ರವೇ ‘777 ಚಾರ್ಲಿ’ ಸಿನಿಮಾದ ಬಿಡುಗಡೆ ದಿನಾಂಕ ಘೋಷಣೆ
ಪರಂವಃ ಸ್ಟುಡಿಯೋಸ್ ನಿರ್ಮಾಣದ ಈ ಪ್ಯಾನ್ ಇಂಡಿಯಾ ಸಿನಿಮಾ ಡಿ.31ಕ್ಕೆ ಬಿಡುಗಡೆಯಾಗಬೇಕಿತ್ತು. ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು.
ಬೆಂಗಳೂರು: ನಟ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಅಭಿನಯದ ‘777 ಚಾರ್ಲಿ’ ಸಿನಿಮಾ(777 Charlie Movie)ದ ಬಿಡುಗಡೆ ದಿನಾಂಕವು ಶೀಘ್ರದಲ್ಲೇ ಘೋಷಣೆಯಾಗಲಿದೆ. ಈ ಸಿನಿಮಾಗೆ ಸೆನ್ಸಾರ್ ಪೂರ್ಣಗೊಂಡಿದ್ದು, ಯು/ಎ ಪ್ರಮಾಣಪತ್ರ(U/A Certificate) ನೀಡಲಾಗಿದೆ. ಈ ಬಗ್ಗೆ ಸ್ವತಃ ರಕ್ಷಿತ್ ಶೆಟ್ಟಿ ಅವರೇ ತಮ್ಮ ಸೋಷಿಯಲ್ ಮೀಡಿಯಾ(Social Media) ಖಾತೆಗಳ ಮೂಲಕ ಮಾಹಿತಿ ನೀಡಿದ್ದಾರೆ.
ಟ್ವಿಟರ್ ಮತ್ತು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿರುವ ರಕ್ಷಿತ್ ಶೆಟ್ಟಿ(Rakshit Shetty), ‘ನಮ್ಮ 777 ಚಾರ್ಲಿ ಚಿತ್ರದ ಸೆನ್ಸಾರ್ ಪೂರ್ಣಗೊಂಡಿದ್ದು ಚಿತ್ರಕ್ಕೆ U/A ಸರ್ಟಿಫಿಕೇಟ್ ದೊರಕಿದೆ. ಶೀಘ್ರವೇ ಸಿನಿಮಾ ಬಿಡುಗಡೆ ದಿನಾಂಕವನ್ನು ಘೋಷಿಸಲಾಗುವುದು’ ಅಂತಾ ಹೇಳಿದ್ದಾರೆ.
ಪರಂವಃ ಸ್ಟುಡಿಯೋಸ್(Paramvah Studios)ನಿರ್ಮಾಣದ ಈ ಪ್ಯಾನ್ ಇಂಡಿಯಾ ಸಿನಿಮಾ ಡಿ.31ಕ್ಕೆ ಬಿಡುಗಡೆಯಾಗಬೇಕಿತ್ತು. ಕೊನೆ ಕ್ಷಣದಲ್ಲಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿತ್ತು. ಆದರೆ ಇದಕ್ಕೆ ನಿಖರ ಕಾರಣವನ್ನೂ ಚಿತ್ರತಂಡವು ನೀಡರಲಿಲ್ಲ. ಈ ಚಿತ್ರ ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ತೆರೆಕಾಣಲು ಸಿದ್ಧವಾಗಿದೆ.
Amazon Prime Offer: ಪವರ್ ಸ್ಟಾರ್ ಪುನೀತ್ ಸ್ಮರಣೆಗಾಗಿ ಉಚಿತ ಸಿನಿಮಾ ನೋಡುವ ಅವಕಾಶ
ಚಿತ್ರದ ನಿರ್ದೇಶಕ ಕಿರಣ್ ರಾಜ್ ಕೆ(Kiran Rak K) ಟ್ವೀಟ್ ಮಾಡಿದ್ದು, ‘ನಾವು ಈ ಚಿತ್ರಕ್ಕೆ ‘ಯು’ ಪ್ರಮಾಣಪತ್ರ ನಿರೀಕ್ಷಿಸಿದ್ದೇವು. ಆದರೆ ‘ಧರ್ಮ’ ಎಂಬ ಪಾತ್ರದ ಜೀವನಶೈಲಿಯನ್ನು ವಿವರಿಸಲು ಸಿಗರೇಟ್, ಬಿಯರ್ ಉಪಯೋಗಿಸುವುದು ಅನಿವಾರ್ಯವಾಗಿತ್ತು. ಇದೇ ಕಾರಣದಿಂದ ಸೆನ್ಸಾರ್ ಮಂಡಳಿ ನಮ್ಮ ಸಿನಿಮಾಗೆ ಯು/ಎ ಪ್ರಮಾಣಪತ್ರ ನೀಡಿದೆ’ ಅಂತಾ ಹೇಳಿದ್ದಾರೆ.
‘ಮಹಾಭಾರತದ ಆದಿಯಲ್ಲಿ ಒಂದು ನಾಯಿ. ಮಹಾಭಾರತದ ಅಂತ್ಯದಲ್ಲಿ ಒಂದು ನಾಯಿ. ಅಲ್ಲಿಂದ ನನ್ನ ಹಾಗೂ ಚಾರ್ಲಿಯ ಪಯಣ ಶುರು! ಇಲ್ಲಿದೆ ನಮ್ಮ ಚಿತ್ರದ ಟೀಸರ್. ದಯವಿಟ್ಟು ನೋಡಿ, ಹಂಚಿ ನಿಮ್ಮ ಅಭಿಪ್ರಾಯ ತಿಳಿಸಿ...’ ಅಂತಾ ಚಿತ್ರದ ಕಿರಣ್ ರಾಜ್ ಈ ಹಿಂದೆ ಟ್ವೀಟ್ ಮಾಡಿದ್ದರು.
Raj B.Shetty), ಡ್ಯಾನಿಶ್ ಸೇಠ್ ಸೇರಿದಂತೆ ಪ್ರಮುಖ ನಟ-ನಟಿಯರು ತಾರಾಗಣದಲ್ಲಿದ್ದಾರೆ. ಈ ಚಿತ್ರಕ್ಕೆ ಜಿ.ಎಸ್.ಗುಪ್ತ ಮತ್ತು ರಕ್ಷಿತ್ ಶೆಟ್ಟಿ ಜಂಟಿಯಾಗಿ ಬಂಡವಾಳ ಹೂಡಿದ್ದಾರೆ.
ಇದನ್ನೂ ಓದಿ: Puneeth Rajkumar : 'ಜೇಮ್ಸ್ ಸಿನಿಮಾ'ದ ಶೂಟಿಂಗ್ ಕಂಪ್ಲೀಟ್ ಮಾಡಿದ ಚಿತ್ರ ತಂಡ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.