777 ಚಾರ್ಲಿ.. ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಪ್ರೀಮಿಯರ್‌ ಶೋ!

777 ಚಾರ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಟ್ರೈಲರ್‌ ರಿಲೀಸ್‌ ಆಗಿದೆ. ಕನ್ನಡದಲ್ಲಿ ಡಿಫರೆಂಟ್‌ ಕಥೆಗಳನ್ನ ಆಯ್ಕೆ ಮಾಡಿಕೊಂಡು, ಡಿಫರೆಂಟ್‌ ಡಿಫರೆಂಟ್‌ ಆಗಿ ಸಿನಿಮಾ ತೆಗೆಯೋದು ರಕ್ಷಿತ್‌ ಶೆಟ್ಟಿ & ಟೀಂಗೆ ಕರಗತವಾಗಿ ಹೋಗಿದೆ. 

Written by - Chetana Devarmani | Last Updated : Jun 7, 2022, 05:12 PM IST
  • ನಟ ರಕ್ಷಿತ್‌ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ 777 ಚಾರ್ಲಿ
  • ಸೋಮವಾರ ಚಿತ್ರದ ಸೆಲೆಬ್ರಿಟಿ ಪ್ರದರ್ಶನ ನಡೆದಿದ್ದು
  • ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಪ್ರೀಮಿಯರ್‌ ಶೋ
777 ಚಾರ್ಲಿ.. ಕರ್ನಾಟಕದಾದ್ಯಂತ 100ಕ್ಕೂ ಅಧಿಕ ಪ್ರೀಮಿಯರ್‌ ಶೋ! title=
ಚಾರ್ಲಿ

777 ಚಾರ್ಲಿ ಇನ್ನೇನು ಕೆಲವೇ ದಿನಗಳಲ್ಲಿ ಟ್ರೈಲರ್‌ ರಿಲೀಸ್‌ ಆಗಿದೆ. ಕನ್ನಡದಲ್ಲಿ ಡಿಫರೆಂಟ್‌ ಕಥೆಗಳನ್ನ ಆಯ್ಕೆ ಮಾಡಿಕೊಂಡು, ಡಿಫರೆಂಟ್‌ ಡಿಫರೆಂಟ್‌ ಆಗಿ ಸಿನಿಮಾ ತೆಗೆಯೋದು ರಕ್ಷಿತ್‌ ಶೆಟ್ಟಿ & ಟೀಂಗೆ ಕರಗತವಾಗಿ ಹೋಗಿದೆ. ಇದೀಗ 777 ಚಾರ್ಲಿ ಕೂಡ ಇದೇ ರೀತಿ ಹೊಸ ಪ್ರಯತ್ನವಾಗಿದ್ದು ದೇಶಾದ್ಯಂತ ಸಂಚಲನ ಸೃಷ್ಟಿಸುತ್ತಿದೆ. ಹೊಸ ಹೊಸ ದಾಖಲೆ ಬರೆಯಲು ‌'ಕೆಜಿಎಫ್-2' ಬಳಿಕ ಮತ್ತೊಂದು ಕನ್ನಡ ಸಿನಿಮಾ ಸಜ್ಜಾಗಿದೆ.

ಇದನ್ನೂ ಓದಿ: Samantha: ನಟಿ ಸಮಂತಾ ಫಿಟ್ನೆಸ್‌ ಸಿಕ್ರೇಟ್‌ ಇಲ್ಲಿದೆ ನೋಡಿ.. ನೀವೂ ಒಮ್ಮೆ ಟ್ರೈ ಮಾಡಿ

ನಟ ರಕ್ಷಿತ್‌ ಶೆಟ್ಟಿ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ 777 ಚಾರ್ಲಿ ಜೂನ್‌ 10ಕ್ಕೆ ಬಿಡುಗಡೆಯಾಗುತ್ತಿದೆ. ಈಗಾಗಲೇ ಉತ್ತರ ಭಾರತದ ದೆಹಲಿ, ಅಹಮದಾಬಾದ್, ಕೋಲ್ಕತ್ತಾ ಸೇರಿದಂತೆ ವಿವಿಧ ಕಡೆ ಹಾಗೂ ವಿದೇಶದ ಕೆಲವೆಡೆ ಚಿತ್ರದ ಸೆಲೆಬ್ರಿಟಿ ಶೋಗಳು ನಡೆದಿವೆ. ರಾಜ್ಯದಲ್ಲೂ ಜೂನ್‌ 9ರಂದು ನೂರಕ್ಕೂ ಅಧಿಕ ಪ್ರೀಮಿಯರ್‌ ಪ್ರದರ್ಶನ ನಡೆಯಲಿವೆ. ಇದೇ ಮೊದಲ ಬಾರಿಗೆ ಬಿಡುಗಡೆಗೂ ಮುನ್ನವೇ ಇಷ್ಟೊಂದು ಪ್ರೀಮಿಯರ್‌ ಪ್ರದರ್ಶನ ಕಾಣುತ್ತಿರುವ ಸಿನಿಮಾ ಚಾರ್ಲಿ ಆಗಿದೆ. ಬೆಂಗಳೂರಿನಲ್ಲಿ 55 ಕಡೆ ಪ್ರದರ್ಶನ ನಡೆದರೆ, ಉಳಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಪ್ರದರ್ಶನವಿರಲಿದೆ. 

 

 

ಸೋಮವಾರ ಚಿತ್ರದ ಸೆಲೆಬ್ರಿಟಿ ಪ್ರದರ್ಶನ ನಡೆದಿದ್ದು, ನಟಿ ರಮ್ಯ, ನಿರ್ದೇಶಕ ಸಂತೋಷ್‌ ಆನಂದರಾಮ್‌ ಸೇರಿದಂತೆ ನೂರಾರು ಸೆಲೆಬ್ರಿಟಿಗಳು ಈಗಾಗಲೇ ಸಿನಿಮಾ ನೋಡಿ ಪ್ರತಿಕ್ರಿಯೆ ನೀಡಿದ್ದಾರೆ. ಚಾರ್ಲಿ ಕರ್ನಾಟಕದಲ್ಲಿ 300 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ ಕಾಣುತ್ತಿದೆ. 

ಮಲ್ಟಿಪ್ಲೆಕ್ಸ್ ಹಾಗೂ ಏಕಪರದೆ ಚಿತ್ರಮಂದಿರಗಳಲ್ಲೂ ಪ್ರೀಮಿಯರ್‌ ಶೋ ನಡೆಯಲಿದೆ ಎಂದು ಕೆಆರ್‌ಜಿ ಫಿಲಂಸ್‌ನ‌ ಕಾರ್ತಿಕ್ ಗೌಡ ಮಾಹಿತಿ ಹಂಚಿಕೊಂಡಿದ್ದಾರೆ. 

ಕನ್ನಡ ಸಿನಿ ಜಗತ್ತಲ್ಲಿ ಸಂಚಲನ ಸೃಷ್ಟಿಸುತ್ತಿರುವ ರಕ್ಷಿತ್‌ ಶೆಟ್ಟಿ, ಈ ಬಾರಿ ಒಂದು ಪಪ್ಪಿಯ ಕಥೆ ಹೇಳಲು ಹೊರಟಿದ್ದಾರೆ. ಪ್ರೀತಿ, ಕಂಬನಿ, ಭಾವನೆಗಳ ಬೆಸುಗೆಯೇ 777 ಚಾರ್ಲಿ ಎನ್ನಬಹುದು. ಒಟ್ಟಾರೆ ಹೇಳುವುದಾದ್ರೆ ಚಾರ್ಲಿ ಸ್ಯಾಂಡಲ್‌ವುಡ್‌ ಪಾಲಿಗೆ ಮತ್ತೊಂದು ಮರೆಯಲಾಗದ ಸಿನಿಮಾ ಆಗೋದು ಪಕ್ಕಾ. 

ಇದನ್ನೂ ಓದಿ: Megha Shetty: ಪ್ಯಾನ್​ ಇಂಡಿಯಾ ಸಿನಿಮಾದಲ್ಲಿ ಮೇಘಾ ಶೆಟ್ಟಿ!

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News