ತಂದೆಯ ಹುಟ್ಟುಹಬ್ಬಕ್ಕೆ `ಮಹೀಂದ್ರಾ ಎಕ್ಸ್‌ಯುವಿ700` ಉಡೊಗೊರೆ ಕೊಟ್ಟ ಖ್ಯಾತ ನಟ
ಮರಾಠಿ ಕಿರುತೆರೆಯ ಜನಪ್ರಿಯ ನಟ ಹರ್ದೀಕ್ ಜೋಶಿ ಅಪ್ಪನಿಗೆ ಹುಟ್ಟುಹಬ್ಬದ ಪ್ರಯುಕ್ತ ಮಹೀಂದ್ರಾ ಎಕ್ಸ್‌ಯುವಿ700 ಕಾರನ್ನು ಉಡೊಗೊರೆಯಾಗಿ ನೀಡಿದ್ದಾರೆ. ಸದ್ಯ ಆ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಹರ್ದೀಕ್ ಜೋಶಿ ಮರಾಠಿ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ಖ್ಯಾತಿ ಗಳಿಸಿದ್ದು, ತಮ್ಮ ತಂದೆಗೆ ಹೊಚ್ಚ ಹೊಸ ಮಹೀಂದ್ರಾ ಎಕ್ಸ್‌ಯುವಿ700 (Mahindra XUV700) ಎಸ್‌ಯುವಿಯನ್ನು ಗಿಫ್ಟ್ ನೀಡಿದ್ದಾರೆ. ಈ ಬಗ್ಗೆ ಇನ್‌ಸ್ಟಾಗ್ರಾಮ್‌ನಲ್ಲಿ ಹೊಸ ಕಾರನ್ನು ಕುಟುಂಬದೊಂದಿಗೆ ವಿತರಣೆ ಪಡೆಯುತ್ತಿರುವ ಫೋಟೋವನ್ನು ಪೋಸ್ಟ್ ಮಾಡಿರುವ ಹರ್ದೀಕ್, 'ವಿಶೇಷವಾದವರಿಗೆ ಜನ್ಮದಿನದ ಉಡುಗೊರೆ. ಹುಟ್ಟುಹಬ್ಬದ ಶುಭಾಶಯಗಳು ಪಪ್ಪಾ' ಎಂದು ಶೀರ್ಷಿಕೆ ಬರೆದಿದ್ದಾರೆ.
ಇದನ್ನು ಓದಿ : ತಮಿಳು ಚಿತ್ರದಲ್ಲಿಯೂ ನಟಿಸ್ತೀನಿ, ನಿಮ್ಮ ಪ್ರೀತಿ ನೋಡಿ ಖುಷಿಯಾಗಿದೆ ಎಂದ ಕಿಸ್ ನಟಿ
ನಟ ಹರ್ದೀಕ್ ಜೋಶಿ ಮಹೀಂದ್ರಾ ಎಕ್ಸ್‌ಯುವಿ700 ಕಾರಿನ ಯಾವ ರೂಪಾಂತರವನ್ನು ಖರೀದಿಸಿದ್ದಾರೆ ಎನ್ನುವುದರ ಕುರಿತು ಮಾಹಿತಿಯಿಲ್ಲ. ಭಾರತದ ಮಾರುಕಟ್ಟೆಯಲ್ಲಿ ಈ ಕಾರು ರೂ.13.99 ಲಕ್ಷದಿಂದ ರೂ.26.99 ಲಕ್ಷ ಎಕ್ಸ್ ಶೋರೂಂ ದರದಲ್ಲಿ ದೊರೆಯುತ್ತದೆ. ಎಎಕ್ಸ್3, ಎಎಕ್ಸ್5, ಎಎಕ್ಸ್7 ಒಳಗೊಂಡಂತೆ ವಿವಿಧ ರೂಪಾಂತರ ಹಾಗೂ ಎವರೆಸ್ಟ್ ವೈಟ್, ಮಿಡ್ನೈಟ್ ಬ್ಲಾಕ್, ನಪೋಲಿ ಬ್ಲಾಕ್ ಸೇರಿದಂತೆ ಆಕರ್ಷಕ ಬಣ್ಣಗಳೊಂದಿಗೂ ಲಭ್ಯವಿದೆ. ಈ ಕಾರು ಎರಡು ಪವರ್ ಟ್ರೈನ್ ಆಯ್ಕೆಯಲ್ಲಿ ಲಭ್ಯವಿದೆ.
Aadujeevitham : ಎರಡೇ ದಿನದಲ್ಲಿ ಆಡು ಜೀವಿತಂ ಚಿತ್ರದ ಕಲೆಕ್ಷನ್ ಎಷ್ಟು ಗೊತ್ತೇ ?
ಮಹೀಂದ್ರಾ ಎಕ್ಸ್‌ಯುವಿ700 ಎಸ್‌ಯುವಿಯು ಸಾಕಷ್ಟು ಅತ್ಯಾಧುನಿಕ ವೈಶಿಷ್ಟ್ಯಗಳನ್ನು ಹೊಂದಿದೆ. ಪ್ರಮುಖವಾಗಿ 10.25-ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಮ್, 10.25-ಇಂಚಿನ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, 6-ವೇ ಪವರ್ ಡ್ರೈವರ್ ಸೀಟ್, 12 ಸ್ಪೀಕರ್, ದೊಡ್ಡದಾದ ಸನ್‌ರೂಫ್, ಡುಯಲ್ ಝೋನ್ ಕ್ಲೇಮೇಟ್ ಕಂಟ್ರೋಲ್, ವೆಂಟಿಲೇಟೆಡ್ ಫ್ರಂಟ್ ಸೀಟ್ಸ್, ಇನ್-ಬಿಲ್ಟ್ ಅಲೆಕ್ಸಾ ಕನೆಕ್ಟಿವಿಟಿಯನ್ನು ಪಡೆದಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.