ನವದೆಹಲಿ: ಬಾಲಿವುಡ್‌ನ ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್ ಸೋಷಿಯಲ್ ಮೀಡಿಯಾದಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ. ಈ ದಿನಗಳಲ್ಲಿ ಅವರು ತಮ್ಮ ಮುಂಬರುವ ಚಿತ್ರ 'ಲಾಲ್ ಸಿಂಗ್ ಚಡ್ಡಾ' ಚಿತ್ರದ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಇದರ ಹೊರತಾಗಿಯೂ ಅವರು ದೇಶದ ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



COMMERCIAL BREAK
SCROLL TO CONTINUE READING

ಈ ಟ್ವೀಟ್‌ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ 'ದೇಶವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ' ನಿರ್ಧಾರವನ್ನು ಅಮೀರ್ ಖಾನ್ ಬೆಂಬಲಿಸಿದ್ದಾರೆ. 'ಸಿಂಗಲ್ ಯೂಸ್ ಪ್ಲಾಸ್ಟಿಕ್' ಬಳಕೆಯನ್ನು ಕೊನೆಗೊಳಿಸುವ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನಗಳನ್ನು ನಾವೆಲ್ಲರೂ ಮನಃಪೂರ್ವಕವಾಗಿ ಬೆಂಬಲಿಸಬೇಕು ಎಂದು ಬರೆದಿರುವ ಅಮೀರ್ ಖಾನ್ ಪ್ರಧಾನಿ ನರೇಂದ್ರ ಮೋದಿಯವರನ್ನು ಟ್ಯಾಗ್ ಮಾಡಿ 'ಸಿಂಗಲ್ ಯೂಸ್ ಪ್ಲಾಸ್ಟಿಕ್' ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ. 


ಈ ಟ್ವೀಟ್‌ಗೆ ಅಮೀರ್ ಖಾನ್ ಅವರ ಅನುಯಾಯಿಗಳು ಪ್ರತಿಕ್ರಿಯೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. ಇದಕ್ಕಾಗಿ ಕೆಲವರು ಅಮೀರ್‌ರನ್ನು ಬಹಿರಂಗವಾಗಿ ಹೊಗಳಿದ್ದಾರೆ, ಕೆಲವರು ಅವರ ಕಾಶ್ಮೀರ ವಿಷಯದಲ್ಲಿ ಮೌನ ವಹಿಸಿದ್ದಕ್ಕಾಗಿ ಅವರನ್ನು ಟ್ರೋಲ್ ಮಾಡುತ್ತಿದ್ದಾರೆ.