ನವದೆಹಲಿ: ಒಂದೆಡೆ ವಿಶ್ವದೆಲ್ಲೆಡೆ ಭರ್ಜರಿ ಪ್ರದರ್ಶನ ಕಾಣುತ್ತಿರುವ ಕನ್ನಡದ ಕಾಂತಾರ ಸಿನಿಮಾವನ್ನು ನಿರ್ದೇಶಕ ಅಭಿರೂಪ ಬಸು ಅವರು ನಗು ತರಿಸುವ ಹಾಗೂ ಬುದ್ದಿವಂತಿಕೆಯ ನಗೆಪಾಟಲು ಎಂದು ಅವರು ವ್ಯಂಗ್ಯವಾಡಿದ್ದಾರೆ.
ಈಗಾಗಲೇ ಚಿತ್ರದ ಕುರಿತಾಗಿ ದೇಶದೆಲ್ಲೆಡೆ ಸಕಾರಾತ್ಮಕ ಪ್ರತಿಕ್ರಿಯೆಗಳು ಬಂದಿವೆ, ಅಷ್ಟೇ ಅಲ್ಲದೆ ಬಾಕ್ಸ್ ಆಫೀಸ್ ನಲ್ಲಿಯೂ ಕೂಡ ಎಲ್ಲ ಚಿತ್ರಗಳನ್ನು ಹಿಂದಿಕ್ಕೆ ಕಾಂತರ ಹೊಸ ದಾಖಲೆಯನ್ನು ನಿರ್ಮಿಸುತ್ತಿದೆ. ಇಂತಹ ಸಂದರ್ಭದಲ್ಲಿ ಈಗ ನಿರ್ದೇಶಕ ಅಭಿರೂಪ ಬಸು ಈ ಚಿತ್ರವನ್ನು ವ್ಯಂಗವಾಡಿರುವುದು ಎಲ್ಲರ ಹುಬ್ಬೇರಿಸುವಂತೆ ಮಾಡಿದೆ.
ಇದನ್ನೂ ಓದಿ- ಪಂಚರತ್ನ ರಥಯಾತ್ರೆ; ಬೆಂಗಳೂರಿನಲ್ಲಿ ಚಾಲನೆ ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ
ಈ ವಿಚಾರವಾಗಿ ಮಾಧ್ಯಮಗಳ ಜೊತೆ ಮಾತನಾಡಿದ ಅಭಿರೂಪ್, “ಇದು ಬುದ್ಧಿವಂತಿಕೆಯ ಅಪಹಾಸ್ಯ ಎಂದು ನಾನು ಭಾವಿಸುತ್ತೇನೆ. ಕಳಪೆಯಾಗಿ ನಿರ್ಮಿಸಲಾಗಿದೆ, ಮೂಲ ಪಾತ್ರಕ್ಕೆ ಯಾವುದೇ ನೈಜತೆ ಇಲ್ಲ ಆದ್ದರಿಂದ ಕಥಾವಸ್ತುವಿನ ತಿರುವುಗಳು ಅಪ್ರಾಮಾಣಿಕವಾಗಿ ಕಾಣಿಸಿಕೊಳ್ಳುತ್ತವೆ ಮತ್ತು ಕೇವಲ ಗಿಮಿಕ್‌ಗಳಾಗಿ ಕಾರ್ಯನಿರ್ವಹಿಸುತ್ತವೆ, ನಾಯಕನ ವಿಮೋಚನೆಯ ಚಾಪವು ನಗು ತರಿಸುತ್ತದೆ ಮತ್ತು ಚಿತ್ರದ ಕ್ಲೈಮ್ಯಾಕ್ಸ್ ತಲುಪುವ ಹೊತ್ತಿಗೆ ನಾನು ಆಗಲೇ ಆಸಕ್ತಿಯನ್ನು ಕಳೆದುಕೊಂಡಿದ್ದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ- ಸಗಣಿ ಎರೆಚಾಟ-ಅಶ್ಲೀಲ ಬೈದಾಟ.. ತಮಿಳುನಾಡಲ್ಲಿ ಕನ್ನಡಿಗರ ಸಂಭ್ರಮ!!
ಇನ್ನು ಮುಂದುವರೆದು ಮಾತನಾಡಿದ ಅವರು ದೇಶವು ವೈಜ್ಞಾನಿಕವಾಗಿ ಮುನ್ನಡೆಯುತ್ತಿರುವ ಸಂದರ್ಭದಲ್ಲಿ ದೈವಿಕ ಹಸ್ತಕ್ಷೇಪವನ್ನು ಉಲ್ಲೇಖಿಸುವ ಚಿತ್ರವು ಅಘಾತಕಾರಿಯಾಗಬಾರದು ಎಂದು ನಾನು ಭಾವಿಸುತ್ತೇನೆ ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ