Abhishek Aviva marriage : ಮಂಡ್ಯದ ಗಂಡು, ಕರ್ಣ, ಅಂಬರೀಶ್‌ ಪುತ್ರ ಅಭಿಷೇಕ್‌ ಅಂಬರೀಶ್‌ ಇದೇ ಜೂನ್ 5 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಈಗಾಗಲೇ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿವೆ. ಅವಿವಾ  ಬಿದ್ದಪ್ಪ ಮತ್ತು ಜೂ.ಅಂಬಿ ಮೆಹೆಂದಿ ಫೋಟೋಸ್‌ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿವೆ. ಇದರ ಜೊತೆ ಅಭಿ ಅಂಬರೀಶ್‌ ಅವರ ಸ್ಟೈಲ್‌ನಲ್ಲಿ ಅವಿವಾ ಜೊತೆ ಹೆಜ್ಜೆ ಹಾಕಿರುವ ವಿಡಿಯೋ ಒಂದು ವೈರಲ್‌ ಆಗಿದೆ.


COMMERCIAL BREAK
SCROLL TO CONTINUE READING

ಯಂಗ್ ರೆಬಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಮತ್ತು ಅವಿವಾ  ಬಿದ್ದಪ್ಪ ಅವರ ಮದುವೆ ಪೂರ್ವ ಸಮಾರಂಭಗಳು ಅದ್ಧೂರಿಯಾಗಿ ನಡೆಯುತ್ತಿವೆ. ಜೂನ್‌ 5 ರಂದು ಈ ಜೋಡಿ ಹಸೆಮಣೆ ಏರಲಿದ್ದಾರೆ. ಸದ್ಯ ಅಭಿ ಪ್ರೀವೆಡ್ಡಿಂಗ್‌ ವಿಡಿಯೋ ಒಂದು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ, ಅಪ್ಪನ ಹಿಟ್‌ ಹಾಡುಗಳಿಗೆ ಬಾಳ ಸಂಗಾತಿ ಜೊತೆ ಹೆಜ್ಜೆ ಹಾಕಿದ್ದಾರೆ. ಕ್ಯೂಟ್ನೆಸ್ ಓವರ್ಲೋಡೆಡ್‌ ವಿಡಿಯೋ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ.


ಇದನ್ನೂ ಓದಿ: ತಮಿಳಿನ ‘ಜಂಟಲ್ ಮ್ಯಾನ್ 2’ ಚಿತ್ರಕ್ಕೆ ಆಸ್ಕರ್ ಪ್ರಶಸ್ತಿ ವಿಜೇತ ಕೀರವಾಣಿ ಸಂಗೀತ ನಿರ್ದೇಶನ


ಇನ್ನು ಅಂಬಿ ಮಗನ ಅದ್ಧೂರಿ ವಿವಾಹ ಮಹೋತ್ಸವಕ್ಕೆ ಮೆಗಾಸ್ಟಾರ್ ಚಿರಂಜೀವಿ, ರಜನಿಕಾಂತ್, ಕಮಲ್ ಹಾಸನ್, ಮೋಹನ್ ಬಾಬು, ಖುಷ್ಬೂ, ಸುಹಾಸಿನಿ ಸೇರಿದಂತೆ ಹಲವರಿಗೆ ಆಮಂತ್ರಣ ಪತ್ರಿಕೆಯನ್ನು ನೀಡಲಾಗಿದ್ದು, ಅನೇಕರು ಪಾಲ್ಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಸ್ಯಾಂಡಲ್‌ವುಡ್‌ನ ಬಹುತೇಕ ನಟ-ನಟಿಯರು ಹಾಗೂ ಸಿನಿ ತಂತ್ರಜ್ಞರು ಈ ಮದುವೆಗೆ ಸಾಕ್ಷಿಯಾಗಲಿದ್ದಾರೆ. ಅಲ್ಲದೆ ರಾಜಕಾರಣಿಗಳು ಕೂಡ ಭಾಗಿಯಾಗಲಿದ್ದಾರೆ.


 

 

 

 



 

 

 

 

 

 

 

 

 

 

 

A post shared by KRG Connects (@krg_connects)


ಇತ್ತೀಚಿಗೆ ಸಂಸದೆ ಸುಮಲತಾ ಮತ್ತು ಅಭಿಷೇಕ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಮದುವೆಗೆ ಬರುವಂತೆ ಆಹ್ವಾನ ನೀಡಿದ್ದರು. ಅಲ್ಲದೆ, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನೂ ಸುಮಲತಾ ಅಂಬರೀಶ್ ಆಹ್ವಾನಿಸಿದ್ದಾರೆ. ರಾಜ್ಯದ ಪ್ರಮುಖ ರಾಜಕೀಯ ಮುಖಂಡರು ಅಂಬಿ ಮದುವೆಗೆ ಆಗಮಿಸಲಿದ್ದಾರೆ. ತೆಲುಗು, ತಮಿಳು, ಸೇರಿದಂತೆ ಭಾರತೀಯ ಚಿತ್ರರಂಗದ ಸ್ಟಾರ್‌ ನಟರು ಸಹ ಬರುವ ಸಾಧ್ಯತೆ ಇದೆ.


ಇದನ್ನೂ ಓದಿ: ಅಮಿತಾಬ್‌ ಸಾವು-ಬದುಕಿನ ನಡುವೆ ಹೋರಾಡುವಾಗ, ಜಯಾ ಹನುಮಾನ್ ಚಾಲೀಸಾ ಪಠಿಸಿದಾಗ ನಡೀತು ಪವಾಡ!!


ನಿನ್ನೆಯಿಂದಲೇ ಅಂಬರೀಶ್ ಮನೆಯಲ್ಲಿ ಮದುವೆ ಕಾರ್ಯಕ್ರಮಗಳು ಶುರುವಾಗಿದ್ದು, ನಿನ್ನೆ ಮೆಹಂದಿ ಕಾರ್ಯಕ್ರಮ ನಡೆದಿದೆ ಈ ಕುರಿತು ಫೋಟೋ ಮತ್ತು ವಿಡಿಯೋಗಳು ವೈರಲ್‌ ಆಗಿವೆ. ಸಂಗೀತ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳಿಗೆ ಅಂಬಿ ಮನೆ ಸಾಕ್ಷಿಯಾಗಿದೆ. ಜೂನ್ 5ಕ್ಕೆ ಅಭಿಷೇಕ್ ಮತ್ತು ಅವಿವಾ ಹೊಸ ಜೀವನಕ್ಕೆ ಕಾಲಿಟ್ಟರೆ, ಜೂನ್ 7 ರಂದು ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ