Aishwarya Rai Abhishek Bachchan: ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಮತ್ತೊಮ್ಮೆ ಭಿನ್ನಾಭಿಪ್ರಾಯ ಮತ್ತು ಡಿವೋರ್ಸ್ ವದಂತಿಗಳನ್ನು ತಮ್ಮದೇ ಶೈಲಿಯಲ್ಲಿ ತಳ್ಳಿ ಹಾಕಿದ್ದಾರೆ. ಕಳೆದ ಕೆಲ ದಿನಗಳಿಂದ ಅಭಿಷೇಕ್ ಮತ್ತು ಐಶ್ವರ್ಯ ವಿಚ್ಛೇದನ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದು ಇಬ್ಬರ ಅಭಿಮಾನಿಗಳಲ್ಲೂ ಬೇಸರ ತರಿಸಿತ್ತು. ಇದೀಗ ಇಬ್ಬರೂ ಮಂಗಳವಾರ ದಿ ಆರ್ಚೀಸ್ ಸ್ಕ್ರೀನಿಂಗ್ ಗೆ ಸ್ಟೈಲಿಶ್ ಲುಕ್ನಲ್ಲಿ ಒಟ್ಟಿಗೆ ಹಾಜರಾಗುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ.
ಅಮಿತಾಬ್ ಬಚ್ಚನ್ ಅವರ ಮೊಮ್ಮಗ ಅಗಸ್ತ್ಯ ನಂದಾ ಅವರು ಜೋಯಾ ಅಖ್ತರ್ ನಿರ್ದೇಶನದ ದಿ ಆರ್ಚೀಸ್ ಮೂಲಕ ಬಾಲಿವುಡ್ಗೆ ಪದಾರ್ಪಣೆ ಮಾಡಲಿದ್ದಾರೆ. ಇಡೀ ಬಚ್ಚನ್ ಕುಟುಂಬ ದಿ ಆರ್ಚೀಸ್ ವಿಶೇಷ ಪ್ರದರ್ಶನಕ್ಕೆ ಹಾಜರಾಗಿತ್ತು. ಐಶ್ವರ್ಯಾ ರೈ ಮತ್ತು ಅಭಿಷೇಕ್ ಬಚ್ಚನ್ ಈ ಈವೆಂಟ್ನಲ್ಲಿ ಎಲ್ಲರ ಗಮನ ಸೆಳೆದಿದ್ದಾರೆ.
ಇದನ್ನೂ ಓದಿ: Michaung: ನೆರೆ ಸಂತ್ರಸ್ತರಿಗೆ ತಮಿಳು ತಾರೆಯರ ನೆರವು.. 10 ಲಕ್ಷ ಧನಸಹಾಯ ಘೋಷಣೆ ಮಾಡಿದ ಸೂರ್ಯ ಬ್ರದರ್ಸ್.!
ಐಶ್ವರ್ಯಾ, ಅಭಿಷೇಕ್ ಮತ್ತು ಅವರ ಮಗಳು ಆರಾಧ್ಯ ಮೂವರೂ ಕಪ್ಪು ಬಟ್ಟೆ ಧರಿಸಿ ಆಗಮಿಸಿದರು. ದಿ ಆರ್ಚೀಸ್ ವಿಶೇಷ ಸ್ಕ್ರೀನಿಂಗ್ ಈವೆಂಟ್ನಿಂದ ಬಚ್ಚನ್ ಕುಟುಂಬದ ಅನೇಕ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಆರಾಧ್ಯ ಮತ್ತು ಅಭಿಷೇಕ್ ಪಾಪರಾಜಿಗಾಗಿ ಪೋಸ್ ನೀಡುತ್ತಿದ್ದಾಗ, ಐಶ್ ಅಗಸ್ತ್ಯನನ್ನು ಕರೆದು ಒಟ್ಟಿಗೆ ಫೋಟೋ ಕ್ಲಿಕ್ಕಿಸಲು ಕೇಳುತ್ತಾರೆ. ಈ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಅಭಿಷೇಕ್ ಬಚ್ಚನ್ ಕಪ್ಪು ಬಣ್ಣದ ಕೋಟ್ ಮತ್ತು ಪ್ಯಾಂಟ್ ಧರಿಸಿ ತಮ್ಮ ಸ್ಟೈಲಿಶ್ ಶೈಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಐಶ್ವರ್ಯಾ ರೈ ಕಪ್ಪು ಬಣ್ಣದ ಉದ್ದನೆಯ ಉಡುಪನ್ನು ಧರಿಸಿದ್ದರು. ಅದರ ಮೇಲೆ ಸಿಲ್ವರ್ ದಾರದ ಡಿಸೈನ್ ಮಾಡಲಾಗಿದೆ. ಐಶ್ವರ್ಯ-ಅಭಿಷೇಕ್ ಪುತ್ರಿ ಆರಾಧ್ಯ ಕೂಡ ಕಪ್ಪು ಬಣ್ಣದ ಸ್ಟೈಲಿಶ್ ಕೋಟ್-ಫ್ರಾಕ್ ಧರಿಸಿ ಕಾಣಿಸಿಕೊಂಡಿದ್ದರು. ಅಭಿಷೇಕ್, ಐಶ್ವರ್ಯಾ ಮತ್ತು ಆರಾಧ್ಯ ಅವರ ಲುಕ್ಗೆ ನೆಟಿಜನ್ಗಳು ಫಿದಾ ಆಗಿದ್ದಾರೆ.
ಇದನ್ನೂ ಓದಿ: ಅಂತು ಇಂತು ಓಟಿಟಿಗೆ ಬರ್ತಾಯಿದೆ ʻಟಗರು ಪಲ್ಯʼ: ಏನಂದ್ರು ಚಿತ್ರದ ನಿರ್ಮಾಪಕ?
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.