`ಜೈಲರ್` ಆಡಿಯೋ ರಿಲೀಸ್ ಕಾರ್ಯಕ್ರಮ : ವಿದ್ಯುತ್ ಸ್ಪರ್ಶ, 15 ಅಡಿ ಎತ್ತರದಿಂದ ಬಿದ್ದ ಯುವಕ
Jailer Audio Launch Accident : ಸೂಪರ್ ಸ್ಟಾರ್ ರಜನಿಕಾಂತ್ ಮತ್ತು ಸ್ಯಾಂಡಲ್ವುಡ್ ಹ್ಯಾಟ್ರಿಕ್ ಹೀರೋ ಶಿವಣ್ಣ ನಟನೆಯ ಜೈಲರ್ ಸಿನಿಮಾದ ಸಂಗೀತ ಬಿಡುಗಡೆ ಕಾರ್ಯಕ್ರಮ ನಡೆಯಬೇಕಿದ್ದ ವೇದಿಕೆ ನಿರ್ಮಾಣದ ವೇಳೆ ನೌಕರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
Jailer Audio Launch event : ರಜನಿಕಾಂತ್ ಅಭಿನಯದ 'ಜೈಲರ್' ಚಿತ್ರ ಮುಂದಿನ ತಿಂಗಳು ತೆರೆಗೆ ಅಪ್ಪಳಿಸಲಿದೆ. ನಾಳೆ ಚೆನ್ನೈನ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಈ ಚಿತ್ರದ ಆಡಿಯೋ ಬಿಡುಗಡೆ ಕಾರ್ಯಕ್ರಮ ನಡೆಯಲಿದೆ. ಬೃಹತ್ ವೇದಿಕೆ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ಈ ಕೆಲಸದಲ್ಲಿ ನಿರತರಾಗಿದ್ದ ನೌಕರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜರುಗಿದೆ.
ಹೌದು.. ರಜನಿಕಾಂತ್ ನಟನೆಯ ಜೈಲರ್ ಚಿತ್ರವನ್ನು ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶಿಸಿದ್ದಾರೆ. ಇದಕ್ಕೆ ಖ್ಯಾತ ಸಂಗೀತ ಸಂಯೋಜಕ ಅನಿರುದ್ಧ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಈಗಾಗಲೇ ಈ ಚಿತ್ರದ ಮೂರು ಹಾಡುಗಳು ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅದರಂತೆ ನಾಳೆ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಚಿತ್ರದ ಸಂಗೀತ ಬಿಡುಗಡೆ ಸಮಾರಂಭ ನಡೆಯಲಿದೆ. ವೇದಿಕೆ ನಿರ್ಮಾಣದ ಕಾಮಗಾರಿಗಳು ನಡೆಯುತ್ತಿವೆ. ನಟರಾದ ರಜನಿಕಾಂತ್, ತಮನ್ನಾ, ನಿರ್ದೇಶಕ ನೆಲ್ಸನ್ ದಿಲೀಪ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿರಲಿದ್ದಾರೆ.
ಇದನ್ನೂ ಓದಿ : ಧಾರಾವಾಹಿ ನಟಿಯ ಹನಿಟ್ರ್ಯಾಪ್‌ಗೆ 11 ಲಕ್ಷ ರೂ. ಕಳೆದುಕೊಂಡ 75 ವರ್ಷ ವೃದ್ಧ..!
ಇನ್ನು ನಾಳೆ ಜೈಲರ್ ಮ್ಯೂಸಿಕ್ ರಿಲೀಸ್ ಇವೆಂಟ್ ನಡೆಯುತ್ತಿರುವ ಬೆನ್ನೆಲೆ ವೇದಿಕೆ ನಿರ್ಮಾಣವಾಗುತ್ತಿದೆ. ಸಾಕಷ್ಟು ಜನ ವೇದಿಕೆ ನಿರ್ಮಾಣದ ಕಾರ್ಯದಲ್ಲಿ ತೊಡಗಿದ್ದಾರೆ. ಇದಕ್ಕಾಗಿ ಅಲಂಕಾರಿಕ ವಿದ್ಯುತ್ ದ್ವೀಪಗಳನ್ನು ಅಳವಡಿಸಲಾಗುತ್ತಿದೆ. ಈ ವೇಳೆ ಅಸ್ಸಾಂ ಮೂಲದ ಶಂಕರ್ ಮಾಲಾ ಎಂಬ 26 ವರ್ಷದ ಯುವಕ ಕೆಲಸ ಮಾಡುತ್ತಿದ್ದಾಗ ವಿದ್ಯುತ್ ಸ್ಪರ್ಶವಾಗಿ ಸುಮಾರು 15 ಅಡಿ ಎತ್ತರದಿಂದ ಬಿದ್ದಿದ್ದಾನೆ. ಇದರಿಂದ ಅವರಿಗೆ ಗಂಭೀರ ಗಾಯವಾಗಿದೆ. ಆತನನ್ನು ರಾಜೀವ್ ಗಾಂಧಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಸೇರಿಸಲಾಗಿದೆ.
ಇತ್ತೀಚಿಗೆ ಜಾನಿ ಮಾಸ್ಟರ್ ನೃತ್ಯ ಸಂಯೋಜನೆಯ, ಕವಾಲಾ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ತಮನ್ನಾ ಅದ್ಭುತ ಡಾನ್ಸ್‌ಗೆ ಪ್ರೇಕ್ಷಕರು ಫಿದಾ ಆಗಿದ್ದಾರೆ. ಈ ಹಾಡು ಪ್ರಸ್ತುತ ಅಂತರ್ಜಾಲದಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಈ ಹಾಡನ್ನು ಶಿಲ್ಪಾ ರಾವ್ ಹಾಡಿದ್ದು, ಅನಿರುದ್ಧ್ ಮ್ಯೂಸಿಕ್ ಸಂಯೋಜನೆ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.