Allu Arjun arrested : ಹೈದರಾಬಾದ್ ಥಿಯೇಟರ್ ನಲ್ಲಿ ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ನಟ ಅಲ್ಲು ಅರ್ಜುನ್‌ ಅವರನ್ನು ಚಿಕ್ಕಡಪಲ್ಲಿ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಪುಷ್ಪ 2 ಸಿನಿಮಾದ ಸಕ್ಸಸ್‌ ಖುಷಿಯಲ್ಲಿದ್ದ ನಟ ಅಲ್ಲು ಅರ್ಜುನ್‌ಗೆ ಪೊಲೀಸರು ಬಿಗ್‌ ಶಾಕ್‌ ನೀಡಿದ್ದಾರೆ. ಮಹಿಳೆಯೊಬ್ಬರ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್‌ ಅವರನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಡಿಸೆಂಬರ್‌ 4 ರಂದು ಪುಷ್ಪ 2 ಸಿನಿಮಾ ವಿಶ್ವಾದ್ಯಂತ ರಿಲೀಸ್‌ ಆಗಿತ್ತು. ರಿಲೀಸ್ ಆದ ದಿನವೇ ದುರ್ಘಟನೆಯೊಂದು ಸಂಭವಿಸಿತ್ತು. ಹೈದರಾಬಾದ್‌ ಸಂಧ್ಯ ಥಿಯೇಟರ್‌ನಲ್ಲಿ ಕಾಲ್ತುಳಿತ ನಡೆದು, 39 ವರ್ಷದ ರೇವತಿ ಎಂಬ ಮಹಿಳೆ ಮೃತಪಟ್ಟಿದ್ದರು ಮತ್ತು ಅವರ ಮಗ ಗಂಭೀರವಾಗಿ ಗಾಯಗೊಂಡಿದ್ದಾರೆ.


ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕೀರ್ತಿ ಸುರೇಶ್.. ಮದುವೆ ಫೋಟೋಸ್‌ ಇಲ್ಲಿವೆ ನೋಡಿ


ಈ ಕುರಿತು ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಹೈದರಾಬಾದ್ ಪೊಲೀಸ್ ಕೇಂದ್ರ ವಲಯದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಅಕ್ಷಾಂಶ್ ಯಾದವ್ ತಿಳಿಸಿದ್ದಾರೆ. 


ಸಂಧ್ಯಾ ಥಿಯೇಟರ್ ಆಡಳಿತ ಮಂಡಳಿ, ನಟ ಅಲ್ಲು ಅರ್ಜುನ್‌ ಮತ್ತು ಅವರ ಭದ್ರತಾ ತಂಡದ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಪುಷ್ಪಾ 2 ಚಿತ್ರತಂಡವು ಪ್ರಥಮ ಪ್ರದರ್ಶನಕ್ಕೆ ಬರಲಿದೆ ಎಂದು ಪೊಲೀಸರಿಗೆ ಯಾವುದೇ ಪೂರ್ವ ಸೂಚನೆ ಇರಲಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಿಕ್ಕಡಪಲ್ಲಿ ಠಾಣೆಯ ತಂಡ ಶುಕ್ರವಾರ ಅರ್ಜುನ್‌ನನ್ನು ಅರೆಸ್ಟ್‌ ಮಾಡಿದೆ.


ಎಫ್‌ಐಆರ್ ದಾಖಲಿಸುವ ಸಮಯದಲ್ಲಿ, ಹೈದರಾಬಾದ್ ಪೊಲೀಸ್‌ನ ಕೇಂದ್ರ ವಲಯದ ಉಪ ಪೊಲೀಸ್ ಆಯುಕ್ತ ಅಕ್ಷಾಂಶ್ ಯಾದವ್, ಬಿಎನ್‌ಎಸ್ ಸೆಕ್ಷನ್ 105 ಮತ್ತು 118 (118) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಕುಟುಂಬ ಸದಸ್ಯರ ದೂರಿನ ಆಧಾರದ ಮೇಲೆ ಚಿಕ್ಕಡಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಥಿಯೇಟರ್‌ನೊಳಗೆ ವ್ಯಕ್ತಿಯ ಸಾವು ಮತ್ತು ಇತರರಿಗೆ ಗಾಯಕ್ಕೆ ಕಾರಣವಾಗುವ ಪರಿಸ್ಥಿತಿಗೆ ಕಾರಣರಾದ ಎಲ್ಲ ವ್ಯಕ್ತಿಗಳ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದಿದ್ದರು.


ಇದನ್ನೂ ಓದಿ: ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನದ ಬಿರುಗಾಳಿ.. ಖ್ಯಾತ ನಟಿಯ ದಾಂಪತ್ಯದಲ್ಲಿ ಬಿರುಕು!ಡಿವೋರ್ಸ್‌ ನಿಜಾನಾ?


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.