ಬೆಂಗಳೂರು: ಖ್ಯಾತ ಟಾಲಿವುಡ್ ನಿರ್ದೇಶಕ ಎಸ್.ಎಸ್.ರಾಜಮೌಳಿ(SS Rajamouli) ಆಕ್ಷನ್ ಕಟ್ ಹೇಳಿರುವ ಬಹುನಿರೀಕ್ಷಿತ ‘ಆರ್‌ಆರ್‌ಆರ್‌’ ಸಿನಿಮಾ(RRR Movie) ಈಗಾಗಲೇ ಹಲವು ವಿಚಾರಗಳಿಂದ ಸಿನಿಪ್ರಿಯರ ಕಾತುರಕ್ಕೆ ಕಾರಣವಾಗಿದೆ. ಮುಂದಿನ ವರ್ಷ ಜನವರಿ 7ರಂದು ತೆರೆಗೆ ಅಪ್ಪಳಿಸಲು ಬಿಗ್ ಬಜೆಟ್ ನ ಈ ಸಿನಿಮಾ ಸಜ್ಜಾಗಿದೆ. ಈಗಾಗಲೇ ಪೋಸ್ಟರ್, ಟೀಸರ್(RRR Triler) ಗಳಿಂದ ಗಮನ ಸೆಳೆದಿರುವ ಈ ಸಿನಿಮಾವನ್ನು ವೀಕ್ಷಿಸಲು ಕೋಟ್ಯಂತರ ಅಭಿಮಾನಿಗಳು ತುದಿಗಾಲ ಮೇಲೆ ನಿಂತು ಕಾಯುತ್ತಿದ್ದಾರೆ.


COMMERCIAL BREAK
SCROLL TO CONTINUE READING

ರಾಜಮೌಳಿಗೂ ಕರ್ನಾಟಕಕ್ಕೂ ವಿಶೇಷ ನಂಟಿದೆ. ಏಕೆಂದರೆ ರಾಯಚೂರಿನಲ್ಲಿ ಜನಿಸಿರುವ ರಾಜಮೌಳಿ(SS Rajamouli) ತೆಲುಗು ಚಿತ್ರರಂಗಕ್ಕೆ ಹೋಗಿ ಇಡೀ ವಿಶ್ವವೇ ಗಮನ ಸೆಳೆಯುವ ಅದ್ಭುತ ಸಿನಿಮಾಗಳನ್ನು ನಿರ್ದೇಶಿಸಿದ್ದಾರೆ. ಇವರ ನಿರ್ದೇಶನದ ‘ಈಗ’ ಸಿನಿಮಾದಲ್ಲಿ ಕಿಚ್ಚ ಸುದೀಪ್ ನಟಿಸಿ ಮಿಂಚಿದ್ದರು. ಬಳಿಕ ‘ಬಾಹುಬಲಿ-1’ರಲ್ಲಿಯೂ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡು ಸುದೀಪ್ ಗಮನ ಸೆಳೆದಿದ್ದರು. ಇದೀಗ ರಾಜಮೌಳಿಯವರ ಸಿನಿಮಾದಲ್ಲಿ ಮತ್ತೋರ್ವ ಕನ್ನಡದ ನಟ ಬಣ್ಣ ಹಚ್ಚಿದ್ದಾರೆ.


ಇದನ್ನೂ ಓದಿ: Prabhas Car Collection : ಬಾಹುಬಲಿ ಪ್ರಭಾಸ್ ಬಳಿ ಇವೆ ಎರಡು ದುಬಾರಿ ಕಾರು! ಅವು ಯಾವವು? ಇಲ್ಲಿದೆ


ಹೌದು, ರಾಜಮೌಳಿಯವರ ‘ಆರ್‌ಆರ್‌ಆರ್‌’ ಸಿನಿಮಾದಲ್ಲಿ ಕನ್ನಡದ ಖ್ಯಾತ ನಟ, ಕಲಾ ನಿರ್ದೇಶಕ ಅರುಣ್‌ ಸಾಗರ್‌ (Arun Sagar) ಅವರು ವಿಶೇಷ ಪಾತ್ರವೊಂದರಲ್ಲಿ ನಟಿಸಿದ್ದಾರಂತೆ. ಭಾರತ ಮಾತ್ರವಲ್ಲದೇ ಇಡೀ ವಿಶ್ವದ ಗಮನ ಸೆಳೆದಿರುವ ಈ ಚಿತ್ರದಲ್ಲಿ ಜೂನಿಯರ್ NTR, ರಾಮ್ ಚರಣ್(Ram Charan), ಆಲಿಯಾ ಭಟ್ ಮತ್ತು ಅಜಯ್ ದೇವಗನ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇವರ ಜೊತೆಗೆ ಈಗ ಅರುಣ್ ಸಾಗರ್ ಅತಿಥಿ ಪಾತ್ರವನ್ನು ನಿರ್ವಹಿಸಲಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಇವರ ಪಾತ್ರದ ಬಗ್ಗೆ ಹೆಚ್ಚಿನ ವಿವರಗಳನ್ನು ಚಿತ್ರತಂಡ ಬಹಿರಂಗಪಡಿಸಿಲ್ಲ.


ಇಡೀ ಭಾರತವೇ ಎದುರು ನೋಡುತ್ತಿರುವ RRR ಸಿನಿಮಾ ಕನ್ನಡ, ತೆಲುಗು, ಮಲಯಾಳಂ ಮತ್ತು ತಮಿಳು ಹಾಗೂ ಹಿಂದಿಯಲ್ಲಿ ರಿಲೀಸ್ ಆಗಲಿದೆ. ಇದಲ್ಲದೆ ಇಂಗ್ಲಿಷ್, ಪೋರ್ಚುಗೀಸ್, ಕೊರಿಯನ್, ಟರ್ಕಿಷ್, ಸ್ಪ್ಯಾನಿಶ್‌ ಭಾಷೆಗಳಿಗೆ ಡಬ್ ಆಗಲಿದೆ ಎಂದು ವರದಿಯಾಗಿದೆ. ಡಿವಿವಿ ದಾನಯ್ಯ ಬಂಡವಾಳ ಹೂಡಿರುವ ಈ ಚಿತ್ರಕ್ಕೆ ಎಂ.ಎಂ.ಕೀರವಾಣಿ ಸಂಗೀತ ನೀಡಿದ್ದಾರೆ.


ಇದನ್ನೂ ಓದಿ: Antim The Final Truth : ಸಲ್ಲು ಅಭಿನಯದ 'ಅಂತಿಮ್​' ಚಿತ್ರದ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ?


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.