21 ದಿನಗಳ ಬಳಿಕ ಕೊನೆಗೂ ರಾಕೇಶ್ ಪೂಜಾರಿ ಮನೆಗೆ ಭೇಟಿ ನೀಡಿದ ರಿಷಬ್ ಶೆಟ್ಟಿ

ರಿಷಬ್ ಶೆಟ್ಟಿ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ನಟ ರಾಕೇಶ್ ಪೂಜಾರಿ ಅಭಿನಯಿಸುತ್ತಿದ್ದರು. ಆದರೆ ಹಠಾತ್ ಹೃದಯಾಘಾತದಿಂದ ನಿಧನರಾದ ರಾಕೇಶ್ ಅವರ ಅಂತಿಮ ದರ್ಶನಕ್ಕೆ ರಿಷಬ್ ಶೆಟ್ಟಿ ಬಂದಿರಲಿಲ್ಲ. 21 ದಿನಗಳು ಕಳೆದ ನಂತರ ರಿಷಬ್ ಶೆಟ್ಟಿ ಮತ್ತು ಪ್ರಗತಿ ಶೆಟ್ಟಿ ದಂಪತಿ ರಾಕೇಶ್ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

Written by - Puttaraj K Alur | Last Updated : Jun 2, 2025, 10:10 PM IST
  • ಕೊನೆಗೂ ರಾಕೇಶ್ ಪೂಜಾರಿ ಮನೆಗೆ ಭೇಟಿ ನೀಡಿದ ರಿಷಬ್ ಶೆಟ್ಟಿ
  • ರಾಕೇಶ್‌ ತಂಗಿ ಮತ್ತು ತಾಯಿಗೆ ಸಾಂತ್ವನ ಹೇಳಿದ ರಿಷಬ್‌ & ಪ್ರಗತಿ ಶೆಟ್ಟಿ
  • ʼಕಾಂತಾರ: ಚಾಪ್ಟರ್ 1ʼ ಸಿನಿಮಾದಲ್ಲಿ ರಾಕೇಶ್ ಪೂಜಾರಿ ನಟಿಸುತ್ತಿದ್ದರು
21 ದಿನಗಳ ಬಳಿಕ ಕೊನೆಗೂ ರಾಕೇಶ್ ಪೂಜಾರಿ ಮನೆಗೆ ಭೇಟಿ ನೀಡಿದ ರಿಷಬ್ ಶೆಟ್ಟಿ

Rishab Shetty: ಕಿರುತೆರೆ ರಿಯಾಲಿಟಿ ಶೋ ಮತ್ತು ಸಿನಿಮಾಗಳಲ್ಲಿ ಖ್ಯಾತಿ ಗಳಿಸಿದ್ದ ನಟ ರಾಕೇಶ್ ಪೂಜಾರಿ ನಿಧನರಾಗಿ 21 ದಿನಗಳು ಕಳೆದಿವೆ. ‘ಕಾಮಿಡಿ ಕಿಲಾಡಿಗಳು’ ಶೋ ಮೂಲಕ ಮನೆಮಾತಾಗಿದ್ದ ಅವರ ನಿಧನಕ್ಕೆ ಅಭಿಮಾನಿಗಳು, ಆಪ್ತರು ಮತ್ತು ಸ್ಯಾಂಡಲ್‌ವುಡ್‌ ಸೆಲೆಬ್ರಿಟಿಗಳು ಕಂಬನಿ ಮಿಡಿದಿದ್ದಾರೆ. ‘ಕಾಂತಾರ: ಚಾಪ್ಟರ್ 1’ಸಿನಿಮಾದಲ್ಲಿ ರಾಕೇಶ್ ನಟಿಸುತ್ತಿದ್ದರು. ಆದರೆ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅವರು ರಾಕೇಶ್ ಅಂತಿಮ ದರ್ಶನಕ್ಕೆ ಬಂದಿರಲಿಲ್ಲ. ಈ ಬಗ್ಗೆ ಸೋಷಿಯಲ್‌ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಕೂಡ ಆಗಿತ್ತು. ಅಲ್ಲದೇ ರಿಷಬ್‌ ವಿರುದ್ಧ ವ್ಯಾಪಕ ಟೀಕೆ ಕೂಡ ವ್ಯಕ್ತವಾಗಿತ್ತು. 

Add Zee News as a Preferred Source

ಇದೀಗ ಕೊನೆಗೂ 21 ದಿನಗಳ ಬಳಿಕ ರಾಕೇಶ್ ಪೂಜಾರಿ ಮನೆಗೆ ರಿಷಬ್ ಶೆಟ್ಟಿ ಭೇಟಿ ನೀಡಿದ್ದಾರೆ. ಉಡುಪಿಯ ಹೂಡೆಯಲ್ಲಿರುವ ರಾಕೇಶ್‌ ಮನೆಗೆ ಸೋಮವಾರ ಭೇಟಿ ನೀಡಿದ ರಿಷಬ್‌ ಮತ್ತು ಪ್ರಗತಿ ಶೆಟ್ಟಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ರಾಕೇಶ್‌ ತಂಗಿ ಮತ್ತು ತಾಯಿಗೆ ಧೈರ್ಯ ಹೇಳಿದ್ದಾರೆ. 

ಇದನ್ನೂ ಓದಿ: ಇಂಡಸ್ಟ್ರಿಯಲ್ಲಿ ಮತ್ತೊಂದು ಮದುವೆ ಸದ್ದು.. ಸ್ಟಾರ್‌ ನಟನ ಜೊತೆ ಡೇಟಿಂಗ್‌! ಕೊನೆಗೂ ಮದುವೆಯ ಕುರಿತು ಗುಟ್ಟು ಬಿಚ್ಚಿಟ್ಟ ನಟಿ ನಿಧಿ ಅಗರ್ವಾಲ್‌?!

ತಮ್ಮದೇ ನಿರ್ದೇಶನದ ‘ಕಾಂತಾರ: ಚಾಪ್ಟರ್ 1’ ಸಿನಿಮಾದಲ್ಲಿ ರಿಷಬ್‌ ಶೆಟ್ಟಿ ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ರಾಕೇಶ್‌ ಅವರಿಗೂ ಒಂದು ವಿಶೇಷ ಪಾತ್ರವನ್ನು ನೀಡಲಾಗಿತ್ತು. ಶೂಟಿಂಗ್‌ನಲ್ಲಿಯೂ ಅವರು ಪಾಲ್ಗೊಂಡಿದ್ದರು. ಈ ಸಿನಿಮಾದ ಮೇಲೆ ಅವರು ತುಂಬಾ ಭರವಸೆ ಇಟ್ಟುಕೊಂಡಿದ್ದರು. ಆದರೆ ಸಿನಿಮಾದ ಕೆಲಸಗಳು ಪೂರ್ಣಗೊಳ್ಳುವುದಕ್ಕೂ ಮುನ್ನ ರಾಕೇಶ್‌ ನಿಧನರಾಗಿದ್ದಾರೆ. 

ಆಪ್ತರ ಮದುವೆಯ ಮೆಹಂದಿ ಕಾರ್ಯಕ್ರಮದಲ್ಲಿ ರಾಕೇಶ್ ಪೂಜಾರಿ ಗೆಳೆಯರೊಂದಿಗೆ ಸಖತ್‌ ಡ್ಯಾನ್ಸ್‌ ಮಡಿದ್ದರು. ಖುಷಿಯಿಂದಲೇ ನೃತ್ಯ ಮಾಡಿದ್ದ ಅವರಿಗೆ ಹೃದಯಾಘಾತವಾಗಿತ್ತು. ಚಿಕ್ಕವಯಸ್ಸಿನಲ್ಲೇ ರಾಕೇಶ್‌ ಸಾವಿನ ಸುದ್ದಿ ಕೇಳಿ ಇಡೀ ಚಿತ್ರರಂಗಕ್ಕೆ ಶಾಕ್ ಉಂಟಾಗಿತ್ತು. ಹಾಸ್ಯ ಪಾತ್ರಗಳ ಮೂಲಕ ರಾಕೇಶ್ ಅವರು ಎಲ್ಲರ ಮನ ಗೆದ್ದಿದ್ದರು. ‘ಕಾಮಿಡಿ ಕಿಲಾಡಿಗಳು’ ಶೋನಿಂದ ಅವರಿಗೆ ಅಪಾರ ಜನಪ್ರಿಯತೆ ಸಿಕ್ಕಿತ್ತು. ಚಿತ್ರರಂಗದಲ್ಲಿ ರಾಕೇಶ್‌ ತಮ್ಮ ಉಜ್ವಲ ಭವಿಷ್ಯ ಕಟ್ಟಿಕೊಳ್ಳುವ ಕನಸು ಕಂಡಿದ್ದರು. ಆದರೆ ಅವರು ಹೃದಯಾಘಾತದಿಂದ ನಿಧನರಾಗಿದ್ದು ತೀವ್ರ ನೋವಿನ ಸಂಗತಿಯಾಗಿದೆ.

ಇದನ್ನೂ ಓದಿ: ಬಳಕುವ ಬಳ್ಳಿಯಂತಿದ್ದ ಈ ನಟಿ ಗುರುತೇ ಸಿಗದಷ್ಟು ಬದಲಾದ್ರಾ? ಒಂದು ಕಾಲದಲ್ಲಿ ಬೋಲ್ಡ್‌ನೆಸ್‌ನಿಂದ ಪಡ್ಡೆಹೈಕ್ಳ ನಿದ್ದೆ ಕದ್ದಿದ್ದ ಚೆಲುವೆ ಇವರು!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News