ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ʼಸಿದ್ದರಾಮಯ್ಯʼ ವಿರುದ್ಧ ಚೇತನ್ ಆಕ್ರೋಶ..!
ದೇವರ ಹೆಸರಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಿದ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ನಟ ಚೇತನ್ ಅಹಿಂಸಾ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೆ, ಬುದ್ದ ಬಸವ ಅಂಬೇಡ್ಕರ್ ಅವರ ಹೆಸರಿನಲ್ಲಿ ಪದಗ್ರಹಣ ಮಾಡಿದ ಸತೀಶ್ ಜಾರಕಿಹೊಳಿಯವರನ್ನು ಪ್ರಶ್ನಿಸಿದ್ದಾರೆ.
ಬೆಂಗಳೂರು : ಸದಾ ಒಂದಲ್ಲ ಒಂದು ಹೇಳಿಕೆಯಿಂದ ವಿವಾದಕ್ಕೆ ಸಿಲುಕುತ್ತಿರುವ ನಟ, ಸಾಮಾಜಿಕ ಹೋರಾಟಗಾರ ಚೇತನ್ ಅವರು ಇದೀಗ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಗುಡುಗಿದ್ದಾರೆ. ಅಲ್ಲದೆ, ನೂತನ ಸಚಿವ ಸತೀಶ್ ಜಾರಕಿಹೊಳಿಯವರನ್ನೂ ಪ್ರಶ್ನೆ ಮಾಡಿದ್ದಾರೆ.
ಇಂದು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಕಂಠೀರವ ಸ್ಟೇಡಿಯಂನಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಸಿದ್ದರಾಮಯ್ಯ ರಾಜ್ಯದ 24ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಇವರ ಜೊತೆ 8 ಸಚಿವರು ಪದಗ್ರಹಣ ಮಾಡಿದರು. ಮುಖ್ಯಮಂತ್ರಿಗಳಿ ಮತ್ತು ಸಚಿವರಿಗೆ ರಾಜ್ಯಪಾಲ ಥಾವರ್ಚಂದ್ ಗೆಹ್ಲೋತ್ ಪ್ರತಿಜ್ಞಾವಿಧಿ ಬೋಧಿಸಿದರು.
ಇದನ್ನೂ ಓದಿ: Mia Khalifa: ಕಲ್ಲು ಮನಸ್ಸಿನವರ ಕಣ್ಣಲ್ಲೂ ನೀರು ತರಿಸುತ್ತೆ ಮಿಯಾ ಖಲೀಫಾ ಜೀವನ
ಈ ವೇಳೆ ಸಿದ್ದರಾಮಯ್ಯ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಕಳೆದ ಬಾರಿ ಸಿದ್ದರಾಮಯ್ಯ ಅವರು ಸತ್ಯದ ಹೆಸರಲ್ಲಿ ಅಧಿಕಾರ ಸ್ವೀಕಾರ ಮಾಡಿದ್ದರು. ಇದೀಗ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಇನ್ನು ಈ ಕುರಿತು ನಟ ಚೇತನ್ ಟ್ವೀಟ್ ಮಾಡಿ ಟೀಕಿಸಿದ್ದಾರೆ. ‘ವಿಚಾರವಾದಿ’ ಎಂದು ಕರೆಸಿಕೊಳ್ಳುವ ಸಿದ್ದರಾಮಯ್ಯ ಅವರು ಕರ್ನಾಟಕದ ಸಿಎಂ ಆಗಿ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರಾ? ಯಾವ/ಯಾರು ದೇವರು? ದೇವರು ಎಲ್ಲಿದ್ದಾನೆ/ಳೆ/ರೆ? ಇದು ನಿರ್ದಿಷ್ಟವಾದ ಸೈದ್ಧಾಂತಿಕ ಆರಂಭವಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಅಲ್ಲದೆ, ಶಾಸಕ ಸತೀಶ ಜಾರಕಿಹೊಳಿ, ಅವರು ‘ಬುದ್ಧ-ಬಸವ-ಅಂಬೇಡ್ಕರ್’ ಅಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ಪಕ್ಷವು ತನ್ನ ಸ್ವ-ಲಾಭದಾಯಕ ರಾಜಕೀಯ ಅಧಿಕಾರಕ್ಕಾಗಿ ನಮ್ಮ ಸಮಾನತೆಯ ಐಕಾನ್ಗಳನ್ನು ಯಾವಾಗಲೂ ಹೈಜಾಕ್ ಮಾಡಿದೆ. ಎಸ್ಟಿ ನಾಯಕ ಸಮುದಾಯದ ಸತೀಶ್ ಜಾರಕಿಹೊಳಿ ಶೋಷಿತ ಎಸ್ಟಿಗಳಿಗೆ ಒಳಮೀಸಲಾತಿಯನ್ನು ಬೆಂಬಲಿಸುತ್ತಾರೆಯೇ..? ಅಥವಾ ಬುದ್ಧ-ಬಸವ-ಅಂಬೇಡ್ಕರ್ ಕೇವಲ ಗಿಮಿಕ್ ಮಾತ್ರವೇ.? ಎಂದು ಚೇತನ್ ಪ್ರಶ್ನೆ ಮಾಡಿದ್ದಾರೆ.
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ