Big Breaking - ನಟ ದರ್ಶನ್, ಪವಿತ್ರಾ ಸೇರಿ ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳಿಗೆ ಜಾಮೀನು..!
Darshan Pavithra gowda bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮದ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ಗೆ ಹೈಕೊರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಸುದ್ದಿ ತಿಳಿಯುತ್ತಲೇ ದಾಸನ ಅಭಿಮಾನಿಗಳು ಸಂತೋಷಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಪವಿತ್ರ ಗೌಡ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ..
Darshan got bail : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಮದ್ಯಂತರ ಜಾಮೀನಿನ ಮೇಲೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ನಟ ದರ್ಶನ್‌ಗೆ ಹೈಕೊರ್ಟ್ ಜಾಮೀನು ಮಂಜೂರು ಮಾಡಿದೆ. ಇನ್ನು ಈ ಸುದ್ದಿ ತಿಳಿಯುತ್ತಲೇ ದಾಸನ ಅಭಿಮಾನಿಗಳು ಸಂತೋಷಗೊಂಡಿದ್ದಾರೆ. ಅಷ್ಟೇ ಅಲ್ಲದೆ, ಪವಿತ್ರ ಗೌಡ ಸೇರಿದಂತೆ ರೇಣುಕಾಸ್ವಾಮಿ ಪ್ರಕರಣದ ಎಲ್ಲಾ ಆರೋಪಿಗಳಿಗೂ ಜಾಮೀನು ಸಿಕ್ಕಿದೆ..
ಹೌದು.. ಪವಿತ್ರಾ ಗೌಡಗೆ ( pavithra gowda ) ಅಶ್ಲೀಲ ಸಂದೇಶ ಕಳುಹಿಸಿದ್ದ ಎನ್ನುವ ಕಾರಣಕ್ಕೆ ಚಿತ್ರದುರ್ಗದ ರೇಣುಕಾಸ್ವಾಮಿ ( Renukaswamy case ) ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಎ2 ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ ಸೇರಿ ಜಾಮೀನು ಕೋರಿ ಇತರ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ. ವಿಸ್ತೃತ ಆದೇಶ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.
ಇದನ್ನೂ ಓದಿ: ಶೂಟಿಂಗ್ ವೇಳೆ ಅಕ್ಷಯ್‌ಗೆ ಅಪಘಾತ..! ಕಣ್ಣಿಗೆ ಬಲವಾದ ಪೆಟ್ಟು, ಆಸ್ಪತ್ರೆಗೆ ದಾಖಲು, ಹೇಗಿದೆ ಆರೋಗ್ಯ..?
ಬೆನ್ನು ನೋವಿನಿಂದ ಬಳಲುತ್ತಿರುವ ನಟ ದರ್ಶನ್ (Actor Darshan bail ) ಅವರು ಮಧ್ಯಂತರ ಜಾಮೀನಿನ ಮೇಲೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರೆಗ್ಯುಲರ್ ಜಾಮೀನು ಕೋರಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ದರ್ಶನ್ ಪರ ವಕೀಲರಾದ ಸಿವಿ ನಾಗೇಶ್ (CV Nagesh) ಅವರು ವಾದ ಮಂಡಿಸಿದ್ದು, ಎಸ್ ಪಿಪಿ ಪ್ರಸನ್ನ ಕುಮಾರ್ ಕೂಡ ಪ್ರತಿವಾದ ಮಂಡಿಸಿದ್ದಾರೆ.
ಸುದೀರ್ಘ ವಾದ, ಪ್ರತಿವಾದ ಆಲಿಸಿದ ನ್ಯಾಯಾಧೀಶರು ದಿನಾಂಕ ಘೋಷಿಸದೆ ತೀರ್ಪು ಕಾಯ್ದಿರಿಸಿದ್ದರು. ಜತೆಗೆ ಆದೇಶ ಬರುವವರೆಗೂ ನಟ ದರ್ಶನ್ ವೈದ್ಯಕೀಯ ಜಾಮೀನು ಅವಧಿ ವಿಸ್ತರಿಸಿದ್ದರು. ಇದೀಗ ಶುಕ್ರವಾರ ಹೈಕೋರ್ಟ್ ಜಾಮೀನು ಅರ್ಜಿಯ ತೀರ್ಪು ಪ್ರಕಟಿಸಿದೆ.
ಇದನ್ನೂ ಓದಿ:ಮಗು ಇದೆ ಅಂತ ಹೇಳಿದರೂ ಆ ಸ್ಟಾರ್ ನಟ ನನ್ನ ಬಿಡಲಿಲ್ಲ..! ʼಪುಟ್ನಂಜʼ ಚಿತ್ರ ನಟಿಯ ಶಾಕಿಂಗ್ ಹೇಳಿಕೆ..
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ರಾವ್ ಅವರಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡುವ ಮೂಲಕ ಮಹತ್ವದ ಆದೇಶ ಹೊರಡಿಸಿದೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.