Neha Hiremath murder : ನೇಹಾ ಹತ್ಯೆ ಕುರಿತು ಮೌನ ಮುರಿದ ಡಿಬಾಸ್, ಶಿವಣ್ಣ..! ಹೇಳಿದ್ದೇನು ಗೊತ್ತೆ..?
Darshan on Neha Hiremath murder : ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ನೇಹಾ ಪ್ರಕರಣದ ಕುರಿತು ಧ್ವನಿ ಎತ್ತಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ ಎಂದು ಆಗ್ರಹಿಸಿದ್ದಾರೆ.
Neha Hiremath case : ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣ ದಿನದಿಂದ ದಿನಕ್ಕೆ ಕಾವು ಪಡೆದುಕೊಳ್ಳುತ್ತಿದೆ. ಆರೋಪಿಗೆ ತಕ್ಕ ಶಿಕ್ಷೆ ನೀಡುವಂತೆ ಒತ್ತಾಯ ಕೇಳಿ ಬರುತ್ತಿದೆ. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕರುನಾಡ ಚಕ್ರವರ್ತಿ ಡಾ. ಶಿವರಾಜ್‌ಕುಮಾರ್ ನೇಹಾ ಪ್ರಕರಣದ ಕುರಿತು ಧ್ವನಿ ಎತ್ತಿದ್ದಾರೆ.
ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿರುವ ದರ್ಶನ್ ಅವರು, ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ: ಧರ್ಮ ಧರ್ಮದ ನಡುವೆ ಜಗಳ ಹಚ್ಚಬೇಡ ರೀಲ್ಸ್ ರಾಣಿ..! ಪ್ರಿಯಾ ವಿರುದ್ಧ ಗುಡುಗಿದ ಮುಸ್ಲಿಂ ಯುವತಿ
ಇನ್ನು ಶಿವಣ್ಣ ತಮ್ಮ ಎಕ್ಸ್ ಖಾತೆಯಲ್ಲಿ ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ಬರೆದುಕೊಂಡಿದ್ದಾರೆ.
ಮನಸ್ಸಿನಲ್ಲಿ ಹೆಚ್ಚು ಆತಂಕ ಹೆಣ್ಣು ಮಕ್ಕಳಿಗೆ ಸುರಕ್ಷಿತೆ ಇದಿಯಾ, ನೇಹಾ ಹಿರೇಮಠ್ ರ ಹತ್ಯೆ ಪ್ರತಿಯೊಬ್ಬ ಹೆಣ್ಣು ಮಗಳಿಗೂ ಹಾಗು ಪೋಷಕರಿಗೆ ಆತಂಕವನ್ನುಂಟು ಮಾಡಿದೆ, ಈ ಹೀನ ಕೃತ್ಯವನ್ನು ಮಾಡಿರುವ ಪಾಪಿ ಫೆಯಾಜ್ ಗೆ ಅತ್ಯಂತ ಕ್ರೂರವಾದ ಶಿಕ್ಷೆಯಾಗಬೇಕು, ನೇಹಾ ರವರ ಆತ್ಮಕ್ಕೆ ಶಾಂತಿ ಸಿಗಲಿ, ಓಂ ಶಾಂತಿಃ ಎಂದು ನಟಿ ಕಾರುಣ್ಯ ರಾಮ್ ಪೋಸ್ಟ್ ಮಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.