Darshan : ನಟ ದರ್ಶನ್‌ ಮಾಧ್ಯಮದವರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು ಎಂಬ ಸುದ್ದಿ ಸೋಷಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಅಲ್ಲದೆ, ಈ ಕುರಿತು ವಿಡಿಯೋ ಒಂದು ವೈರಲ್‌ ಆಗಿತ್ತು. ಇದರಿಂದಾಗಿ ಡಿಬಾಸ್‌ ಮತ್ತು ಮಾಧ್ಯಮದವರ ನಡುವೆ ಮುನಿಸು ಉಂಟಾಗಿತ್ತು. ಸದ್ಯ ಈ ಕುರಿತು ದರ್ಶನ್‌ ಮೌನ ಮುರಿದು ಮಾಧ್ಯಮದವರಿಗೆ ವರಮಹಾಲಕ್ಷ್ಮಿ ಹಬ್ಬದ ಶುಭ ಕೋರಿ, ಕ್ಷಮೆ ಕೇಳಿದ್ದಾರೆ.


COMMERCIAL BREAK
SCROLL TO CONTINUE READING

ಈ ಕುರಿತು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಸುದೀರ್ಘ ಬರಹ ಬರೆದುಕೊಂಡಿರು ದಾಸ, ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು. ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು, ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.


ರಾಷ್ಟ್ರ ಪ್ರಶಸ್ತಿ ಗೆದ್ದ ʼಮೊದಲ ತೆಲುಗು ಸ್ಟಾರ್ʼ ಅಲ್ಲು ಅರ್ಜುನ್..! ʼಬನ್ನಿʼಗೆ ಶುಭಾಶಯಗಳ ಮಹಾಪೂರ


ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ, ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ. 


ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮ ಇರಲಿ, ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪ್ರಚಾರದ ಪಾಲೂ ಸಾಕಷ್ಟಿದೆ. ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ, ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲೆಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ. ಪ್ರೀತಿಯಿಂದ ದರ್ಶನ್ ತೂಗೂದೀಪ.. ಎಂದು ಕೇಳಿಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.