`ನಾನೇನಾದರೂ ತಪ್ಪು ಮಾಡಿದ್ದರೆ ಕ್ಷಮಿಸಿ`..! ಜೈಲಿನಿಂದ ಬಂದ ಬಳಿಕ ದರ್ಶನ್ ಕ್ಷಮೆಯಾಚನೆ..!?
Actor Darshan : ನಟ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ ಆರು ವಾರಗಳ ಕಾಲ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ಕೆಲವು ಷರತ್ತುಗಳ ಮೇಲೆ ದರ್ಶನ್‌ಗೆ ಚಿಕಿತ್ಸೆ ಪಡೆಯಲು ನ್ಯಾಯಾಲಯ ಅನುಮತಿ ನೀಡಿದೆ. ಇನ್ನು ಜೈಲಿನಿಂದ ಹೊರಬಂದ ನಂತರ ನಟ ಕ್ಷಮೆಯಾಚನೆ ಮಾಡಿದ್ದಾರೆ.. ಈ ಕುರಿತ ಸುದ್ದಿ ಇಲ್ಲಿದೆ..
Darshan health update : ದರ್ಶನ್ ಬಳ್ಳಾರಿ ಜೈಲಿನಿಂದ ಬಿಡುಗಡೆಯಾಗಿದ್ದು ಗೊತ್ತೇ ಇದೆ. ಎರಡು ತಿಂಗಳಿಗೂ ಹೆಚ್ಚು ಕಾಲ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿದ್ದರು.. ಇದೀಗ ಆರೋಗ್ಯದ ಕಾರಣದಿಂದ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಬಂಧನಕ್ಕೊಳಗಾಗಿದ್ದರು.
ದರ್ಶನ್‌ಗೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿರುವ ದರ್ಶನ್ ಅವರಿಗೆ ವೈದ್ಯಕೀಯ ಚಿಕಿತ್ಸೆಗಾಗಿ 6 ವಾರಗಳ ಕಾಲ ಜಾಮೀನು ನೀಡಿ ಕರ್ನಾಟಕ ಹೈಕೋರ್ಟ್ ಆದೇಶ ಹೊರಡಿಸಿದೆ. ಇನ್ನು ದರ್ಶನ್ ಹೊರಬಂದ ನಂತರ ಕೆಲವರ ಬಳಿ ಕ್ಷಮೆ ಕೇಳಿದ್ದಾರೆ ಎಂಬ ಸುದ್ದಿ ಹಬ್ಬಿದೆ.
ಇದನ್ನೂ ಓದಿ:ದೀಪಾವಳಿಯಲ್ಲಿ ದರ್ಶನ್‌ಗೆ ಡಬಲ್ ಖುಷಿ... ಮಗನಿಗಾಗಿ ಹೊರಬಂದೇ ಬಿಟ್ಟ 'ಡಿ ಬಾಸ್'!
ಹೌದು.. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೂನ್ 11 ರಂದು ದರ್ಶನ್ ಅವರನ್ನು ಬಂಧಿಸಲಾಗಿತ್ತು. ಬೆಂಗಳೂರು ಕಾರಾಗೃಹದಲ್ಲಿ ಐಶಾರಾಮಿ ಜೀವನ ನಡೆಸುತ್ತಿದ್ದ ಕಾರಣ ಅವರನ್ನು ಬಳ್ಳಾರಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಯಿತು. ಈ ವೇಳೆ ಅವರು ಹಲವು ಸಂಕಷ್ಟಗಳನ್ನು ಎದುರಿಸಿದ್ದರು. ಅಲ್ಲದೆ, ಜೈಲಿನಲ್ಲಿ ಹಲವಾರು ವಸ್ತುಗಳಿಗೂ ಸಹ ಬೇಡಿಕೆ ಇಟ್ಟಿದ್ದರು.
ಅದಕ್ಕಾಗಿ ಬಿಡುಗಡೆ ವೇಳೆ.. ನಿಮಗೆ ಅದು ಬೇಕು, ಇದು ಬೇಕು ಅಂತ ತೊಂದರೆ ಕೊಟ್ಟಿದ್ದಕ್ಕೆ ಕ್ಷಮಿಸಿ.. ಎಂದು ದರ್ಶನ್ ಜೈಲು ಅಧಿಕಾರಿಗಳ ಬಳಿ ಕ್ಷಮೆ ಕೇಳಿದ್ದಾರೆ ಎಂಬ ಸುದ್ದಿ ಇದೆ. ಅಲ್ಲದೆ, ಜೈಲು ಸಿಬ್ಬಂದಿ ಕೂಡ ದರ್ಶನ್ ಅವರಿಗೆ ಉತ್ತಮ ಚಿಕಿತ್ಸೆ ಪಡೆದು ಆರೋಗ್ಯ ಕಾಪಾಡಿಕೊಳ್ಳಿ ಅಂತ ಸಲಹೆ ನೀಡಿದ್ದಾರೆ ಎನ್ನಲಾಗಿದೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ