ಆಶ್ರಯವಿಲ್ಲದೇ ಆಶ್ರಮದ ಪಾಲಾದ ಹಿರಿಯ ನಟಿ ಶೈಲಶ್ರೀ ಸುದರ್ಶನ್ ಬದುಕಲ್ಲಿ ಬೆಳಕಾದ ನಟ ದರ್ಶನ್!

Actor Darshan: ಸ್ಯಾಂಡಲ್‌ವುಡ್‌ ಸ್ಟಾರ್‌ ದರ್ಶನ್‌ ಈಗಾಗಲೇ ಹಲವು ಹಿರಿಯ ಕಲಾವಿದರಿಗೆ ಸಹಾಯ ನೀಡಿರುವುದು ಎಲ್ಲರಿಗೂ ಗೊತ್ತು.. ಆದರೆ ಒಂದು ಕೈಯಿಂದ ಮಾಡಿದ ಸಹಾಯ ಮತ್ತೊಂದು ಕೈಗೆ ತಿಳಿಯಬಾರದೆನ್ನುವ ಮಾತಿನ ಮೇಲೆ ನಟ ದರ್ಶನ್‌ ನಡೆದುಕೊಳ್ಳುತ್ತಾರೆ.. ತಮಗೆಷ್ಟೇ ಕಷ್ಟವಿದ್ದರೂ ಇತರರಿಗೆ ಸಹಾಯ ಮಾಡುವುದನ್ನು ದರ್ಶನ್‌ ತಪ್ಪಿಸಿಲ್ಲ..   

Written by - Savita M B | Last Updated : Apr 2, 2025, 12:40 PM IST
  • ಜೈಲು, ಜಾಮೀನು ಹೀಗೆ ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ನಟ ದರ್ಶನ್‌
  • ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್‌ ಅವರ ಪತ್ನಿ ನಟಿ ಶೈಲಶ್ರೀ ಅವರಿಗೆ ಸಹಾಯ ಹಸ್ತ ನೀಡಿದ್ದಾರೆ..
ಆಶ್ರಯವಿಲ್ಲದೇ ಆಶ್ರಮದ ಪಾಲಾದ ಹಿರಿಯ ನಟಿ ಶೈಲಶ್ರೀ ಸುದರ್ಶನ್ ಬದುಕಲ್ಲಿ ಬೆಳಕಾದ ನಟ ದರ್ಶನ್!

challenging star darshan: ಜೈಲು, ಜಾಮೀನು ಹೀಗೆ ಹಲವು ಸಂಕಷ್ಟಗಳನ್ನು ಎದುರಿಸುತ್ತಿರುವ ನಟ ದರ್ಶನ್‌ ಆಶ್ರಮದ ಪಾಲಾಗಿದ್ದ ಹಿರಿಯ ನಟ ಸುದರ್ಶನ್‌ ಅವರ ಪತ್ನಿ ನಟಿ ಶೈಲಶ್ರೀ ಅವರಿಗೆ ಸಹಾಯ ಹಸ್ತ ನೀಡಿದ್ದಾರೆ.. ನೆಲೆ ಇಲ್ಲದೇ ಆಶ್ರಮದ ಪಾಲಾಗಿದ್ದ ಅವರ ಎಲ್ಲ ಖರ್ಚು ವೆಚ್ಚಗಳನ್ನು ಇವರೇ ನೋಡಿಕೊಳ್ಳುತ್ತಿದ್ದಾರೆ.. ಈ ಬಗ್ಗೆ ನಿರ್ದೇಶಕ ಹಾಗೂ ಹಿರಿಯ ಪತ್ರಕರ್ತರಾದ ಗಣೇಶ್‌ ಕಾಸರಗೂಡು ತಮ್ಮ ಸೋಷಿಯಲ್‌ ಮಿಡಿಯಾದಲ್ಲಿ ಹಂಚಿಕೊಂಡಿದ್ದಾರೆ.. 

Add Zee News as a Preferred Source

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗವನ್ನಾಳಿದ ಕಲಾವಿದರ ಕುಟುಂಬದ ಕುಡಿಯೊಂದು ನೆಲೆ ಬೆಲೆಯಿಲ್ಲದೇ ಇದೇ ಬೆಂಗಳೂರಿನ ಆಶ್ರಮಕ್ಕೆ ಸೇರಿಕೊಂಡು ಆಶ್ರಯ ಪಡೆದಿರುವ ದುರಂತ ಸುದ್ದಿಯೊಂದರ ಹಿಂದೆ ಬಿದ್ದಿದ್ದೇನೆ. ಹೌದು, ಕನ್ನಡ ಚಿತ್ರರಂಗಕ್ಕೆ ಭದ್ರ ಬುನಾದಿ ಹಾಕಿಕೊಟ್ಟ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ಆರ್.ಎನ್. ನಾಗೇಂದ್ರರಾಯರ ಮುದ್ದಿನ ಸೊಸೆ ಇಲ್ಲೇ ಈ ಕಾಂಕ್ರೀಟ್ ಕಾಡಿನ ನಡುವೆ ಕಳೆದು ಹೋಗಿದ್ದಾರೆ! ಸುದರ್ಶನ್ ಅವರ ಸಾವಿನ ನಂತರ ದಿಕ್ಕಿಲ್ಲದ ಪರದೇಶಿಯಾಗಿ ಏಕಾಂಗಿ ಬದುಕು ಕಂಡುಕೊಂಡಿದ್ದ ಶೈಲಶ್ರೀ ಮೇಡಂ ಸೈಲೆಂಟ್ ಆಗಿ ಆಶ್ರಮ ಸೇರಿಕೊಂಡಿರುವ ಹೃದಯ ವಿದ್ರಾವಕ ಸುದ್ದಿಯೊಂದು ಬಂದಿದೆ..

ಇದನ್ನೂ ಓದಿ: ಈಗಾಗಲೇ ಮದುವೆಯಾಗಿರುವ ಖ್ಯಾತ ನಿರ್ದೇಶಕನ ಜೊತೆ ಸಮಂತಾ ಲಿವಿಂಗ್‌ ಟುಗೆದರ್‌! ಫೋಟೋ ಸಮೇತ ಸಾಕ್ಷಿ ಹರಿಬಿಟ್ಟ ʼಅನಾಮಿಕʼ

ಈ ಸುದ್ದಿಯ ಬೆನ್ನು ಹತ್ತಿ ಹೋದಾಗ ಸಿಕ್ಕ ವಿವರಗಳನ್ನು ನಿಮ್ಮ ಮುಂದೆ ಪ್ರಸ್ತುತ ಪಡಿಸುತ್ತಿದ್ದೇನೆ : ಖ್ಯಾತ ನಾಯಕ ನಟ ಸುದರ್ಶನ್ ಅವರ ಕಾಲಾನಂತರ ನಾಗರಬಾವಿಯ ಅಪಾರ್ಟ್ಮೆಂಟೊಂದರಲ್ಲಿ ಬದುಕು ನಡೆಸುತ್ತಿದ್ದರು ಶೈಲಶ್ರೀ. ಮಕ್ಕಳಿಗೆ ಸಂಗೀತ ಹೇಳಿಕೊಟ್ಟು ಅಷ್ಟೋ ಇಷ್ಟೋ ಸಂಪಾದಿಸುತ್ತಿದ್ದ ಈ ಕಲಾವಿದೆ ಹೇಗೋ ಜೀವನದ ದಾರಿ ಕಂಡುಕೊಂಡಿದ್ದರು. ಆದರೆ ಅಪಾರ್ಟ್ಮೆಂಟ್ ಓನರ್ ಆ ಬಿಲ್ಡಿಂಗನ್ನು ನೆಲಸಮ ಮಾಡಿ ಮತ್ತೊಂದು ಬೃಹತ್ ಅಪಾರ್ಟ್ಮೆಂಟ್ ಕಟ್ಟಲು ತಯಾರಿ ನಡೆಸಿದಾಗ ಶೈಲಶ್ರೀ ಮೇಡಂ ಜಾಗ ಖಾಲಿ ಮಾಡಬೇಕಾಯಿತು. ಒಂಟಿ ಜೀವ. ಎಲ್ಲಿಗೆ ಹೋಗುವುದೆಂದು ದಿಕ್ಕು ತೋಚದೇ ಕುಳಿತಿದ್ದಾಗ ಅವರಿಗೆ ದಿಕ್ಕಾದವರು ಕನ್ನಡದ ಮತ್ತೊಬ್ಬ ಹಿರಿಯ ನಟಿ...ಹೆಸರು ಬೇಡ ಬಿಡಿ, ಮುಂದೊಮ್ಮೆ ತಿಳಿಸುತ್ತೇನೆ. ಇವರ ಸಲಹೆಯಂತೆ ಶೈಲಶ್ರೀ ಆಶ್ರಮ ಸೇರಿಕೊಂಡರು. ಆಶ್ರಮದ ಖರ್ಚು ವೆಚ್ಚಗಳನ್ನು ಅದೇ ಹಿರಿಯ ನಟಿ ತಾತ್ಕಾಲಿಕವಾಗಿ ನೋಡಿಕೊಂಡರು. ಆದರೆ ದೀರ್ಘಕಾಲದ ತನಕ ಆರ್ಥಿಕವಾಗಿ ಸಹಾಯ ಮಾಡುವುದು ಅವರಿಗೂ ಕಷ್ಟವಾದಾಗ ದೊಡ್ಡ ನೆರವಿಗೆ ನಿಂತವರು ನಟ ದರ್ಶನ್ ತೂಗುದೀಪ! ತಮ್ಮ ಸೋದರ ದಿನಕರ್ ಮೂಲಕ ಶೈಲಶ್ರೀಯವರ ಕೊನೆಗಾಲದ ತನಕ ಈ ಸಹಾಯವನ್ನು ನೀಡಲು ದರ್ಶನ್ ತಾವಾಗಿಯೇ ಒಪ್ಪಿಕೊಂಡಿದ್ದಾರೆ ಎಂಬ ಸುದ್ದಿಯಿದೆ. ಬಲಗೈ ಕೊಟ್ಟದ್ದು ಎಡಗೈಗೆ ಗೊತ್ತಾಗಬಾರದು ಎಂಬ ನಿಲುವಿನ ದರ್ಶನ್ ಎಷ್ಟೇ ಗುಪ್ತವಾಗಿ ಈ ದೊಡ್ಡ ಸಹಾಯವನ್ನು ಮಾಡಿದರೂ ಸುದ್ದಿ ಹೊರಬಿದ್ದಿದೆ...

   ಈ ನಡುವೆ ಯುಟ್ಯೂಬ್ ಓನರ್'ವೊಬ್ಬ ಶೈಲಶ್ರೀಯವರನ್ನು ಸಂದರ್ಶಿಸಿ ಏಳೆಂಟು ಎಪಿಸೋಡ್ ಮಾಡಿ ಹೋದವನು ಈ ಅಸಹಾಯಕ ನಟಿಯ ಹೆಸರು ಹೇಳಿಕೊಂಡು ನಾಲ್ಕಾರು ಲಕ್ಷ ಸಂಪಾದಿಸಿ, ಸ್ವಂತಕ್ಕೆ ಬ್ಯಾಂಕ್ ಬ್ಯಾಲೆನ್ಸ್ ಏರಿಸಿಕೊಂಡ ಸುದ್ದಿಯೂ ಹೊರಬಂದಿದೆ. ಇಂಥಾ ಅಮಾನುಷ ಕೃತ್ಯಕ್ಕೆ ಹೇಗಾದರೂ ಆತನಿಗೆ ಮನಸ್ಸು ಬಂತೋ ಗೊತ್ತಿಲ್ಲ. ಕಲೆಯ ಹೆಸರಿನಲ್ಲಿ ಮಾಧ್ಯಮವನ್ನು ಹೀಗೆ ದುರುಪಯೋಗ ಪಡಿಸಿಕೊಂಡರೆ ಕರ್ಮ ರಿಟರ್ನ್ಸ್ ಎನ್ನದೇ ವಿಧಿಯಿಲ್ಲ ಎಂದು ಗಣೇಶ್‌ ಕಾಸರಗೋಡು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಈಗಾಗಲೇ ಮದುವೆಯಾಗಿರುವ ಖ್ಯಾತ ನಿರ್ದೇಶಕನ ಜೊತೆ ಸಮಂತಾ ಲಿವಿಂಗ್‌ ಟುಗೆದರ್‌! ಫೋಟೋ ಸಮೇತ ಸಾಕ್ಷಿ ಹರಿಬಿಟ್ಟ ʼಅನಾಮಿಕʼ

 

ಇದನ್ನೂ ಓದಿ: ಈಗಾಗಲೇ ಮದುವೆಯಾಗಿರುವ ಖ್ಯಾತ ನಿರ್ದೇಶಕನ ಜೊತೆ ಸಮಂತಾ ಲಿವಿಂಗ್‌ ಟುಗೆದರ್‌! ಫೋಟೋ ಸಮೇತ ಸಾಕ್ಷಿ ಹರಿಬಿಟ್ಟ ʼಅನಾಮಿಕʼ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

 

About the Author

Savita M B

ಸವಿತಾ ಎಂ. ಬಿ. (Savita M.B.) ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಮಾಧ್ಯಮ ಕ್ಷೇತ್ರದಲ್ಲಿದ್ದು Zee ಕನ್ನಡ ನ್ಯೂಸ್‌ನಲ್ಲಿ ಪ್ರಸ್ತುತ ಸಬ್‌ ಎಡಿಟರ್‌ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಿನಿಮಾ ಲೇಖನಗಳನ್ನು ಬರೆಯುವಲ್ಲಿ ಪರಿಣಿತರಾಗಿರುವ ಇವರು ದೇಶ-ವಿದೇಶಗಳ ವಿದ್ಯಮಾನ, ಕ್ರೀಡೆ, ಆರೋಗ್ಯ, ಲೈಫ್‌ಸ್ಟೈಲ್‌ ಸಂಬಂಧಿತ ವಿಷಯಗಳಲ್ಲಿ ತಮ್ಮ ವಿಭಿನ್ನ ಬರವಣಿಗೆಯ ಮೂಲಕ ಓದುಗರನ್ನು ತಲುಪಲು ಬಯಸುತ್ತಾರೆ. ಇವರು ಸದಾ ಗುಣಮಟ್ಟದ ಮಾಹಿತಿ ಹಾಗೂ ಓದುಗರ ಅಭಿರುಚಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆ.  

...Read More

Trending News