ನಾಡದೇವತೆ ಸನ್ನಿಧಿಯಲ್ಲಿ ಧನ್ವೀರ್‌ 'ಹಯಗ್ರೀವ' ಚಿತ್ರಕ್ಕೆ ಚಾಲನೆ..!

Dhanveer Gowda Hayagreeva movie : ʼಹಯಗ್ರೀವʼ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ. ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..

Written by - YASHODHA POOJARI | Edited by - Krishna N K | Last Updated : Feb 3, 2024, 07:45 PM IST
  • ರಘುಕುಮಾರ್ ಓ.ಆರ್ ನಿರ್ದೇಶನದ ಹಯಗ್ರೀವ ಸಿನಿಮಾದ ಮಹೂರ್ತ
  • ನಟ ಧನ್ವೀರ್‌ ಗೌಡ್‌ ಅಭಿನಯದ ಮುಂಬರುವ ಸಿನಿಮಾ ʼಹಯಗ್ರೀವʼ
  • ʼಹಯಗ್ರೀವʼ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿದೆ
ನಾಡದೇವತೆ ಸನ್ನಿಧಿಯಲ್ಲಿ ಧನ್ವೀರ್‌ 'ಹಯಗ್ರೀವ' ಚಿತ್ರಕ್ಕೆ ಚಾಲನೆ..! title=

Hayagreeva movie : ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ ʼಹಯಗ್ರೀವʼ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. 

ʼಹಯಗ್ರೀವʼ ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ ಮಂಜುನಾಥ್, ನಾನು ಯೂಟ್ಯೂಬ್‍ನಲ್ಲಿ ‘ದಿ ಬೆಲ್‍’ ಎಂಬ ಕಿರುಚಿತ್ರ ನೋಡಿದೆ. ಆ ಕಿರುಚಿತ್ರ ಬಹಳ ಖುಷಿ ನೀಡಿತು. ಆ ಕಿರುಚಿತ್ರದ  ನಿರ್ದೇಶಕ ರಘುಕುಮಾರ್ ಅವರನ್ನು ಎಂಟು ತಿಂಗಳ ಹಿಂದೆ ಕರೆಸಿ ಮಾತನಾಡಿದೆ. ಒಂದು ಚಿತ್ರ ಮಾಡಿಕೊಡಿ ಎಂದು ಹೇಳಿದೆ. ಅವರು ತಮ್ಮ ತಂಡದೊಂದಿಗೆ ಒಂದೊಳ್ಳೆಯ ಕಥೆ ಮಾಡಿದ್ದಾರೆ. ಇದೊಂದು ಪಕ್ಕಾ ಕಮರ್ಷಿಯಲ್‍ ಚಿತ್ರ. ಕನ್ನಡದಲ್ಲಿ ಇಲ್ಲಿಯವರೆಗೂ ಈ ತರಹದ ಚಿತ್ರ ಬಂದಿಲ್ಲ ಎಂದು ಹೇಳಬಹುದು. ಧನ್ವೀರ್ ಹಾಗೂ ಸಂಜನಾ ಆನಂದ್ ನಾಯಕ-ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಈ ಚಿತ್ರದಲ್ಲಿ ಮತ್ತೊಬ್ಬ ನಾಯಕ ನಟಿಸುತ್ತಿದ್ದು, ಅವರು ಯಾರು ಎಂದು ಚಿತ್ರ ಬಿಡುಗಡೆಯವರೆಗೂ ಗೌಪ್ಯವಾಗಿಡಲಾಗುವುದು. ಒಂದೊಳ್ಳೆಯ ಕಥೆಗೆ ಪೂರಕವಾಗಿ ಶೀರ್ಷಿಕೆ ಸಿಕ್ಕಿದೆ. ಈ ಚಿತ್ರವನ್ನು ಎಲ್ಲರೂ ಒಪ್ಪುತ್ತಾರೆ ಎಂಬ ನಂಬಿಕೆ ಇದೆ ಎಂದರು.

ಇದನ್ನೂ ಓದಿ:ಸಿಸಿಎಲ್ ಗೆ ಕಿಕ್ ಸ್ಟಾರ್ಟ್.. ದುಬೈನ ಬುರ್ಜ್ ಖಲೀಫಾ ಮೇಲೆ ಪ್ರೋಮೋ ರಿಲೀಸ್

ನಿರ್ಮಾಪಕರು ಫೋನ್‍ ಮಾಡಿ ಸಿನಿಮಾ ಮಾಡಿಕೊಡಿ ಎಂದರು. ನನ್ನ ಹತ್ತಿರ ಒಂದು ಕಥೆ ಇತ್ತು. ಅದನ್ನು ಅವರಿಗೆ ಹೇಳಿದಾಗ, ಇಷ್ಟಪಟ್ಟು ಈ ಚಿತ್ರ ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಈ ಚಿತ್ರದಲ್ಲಿ ಮುಖ್ಯವಾಗಿ ಪೌರಾಣಿಕ ಅಂಶಗಳ ಜೊತೆಗೆ ಕ್ರೈಮ್‍ ಇದೆ. ಲವ್, ಸೆಂಟಿಮೆಂಟ್, ಸಸ್ಪೆನ್ಸ್ ಸೇರಿದಂತೆ ಕಮರ್ಷಿಯಲ್ ಚಿತ್ರಕ್ಕೆ ಬೇಕಾದ ಎಲ್ಲಾ ಅಂಶಗಳು "ಹಯಗ್ರೀವ" ಚಿತ್ರದಲ್ಲಿದೆ. ಕನ್ನಡದಲ್ಲಿ ಇದುವರೆಗೂ ಯಾರೂ ಈ ತರಹದ ಪ್ರಯತ್ನವನ್ನು ಮಾಡಿಲ್ಲ ಎಂಬುದು ನನ್ನ ಅನಿಸಿಕೆ. ಇಲ್ಲಿ "ಹಯಗ್ರೀವ" ಎಂಬ ಪೌರಾಣಿಕ ಪಾತ್ರದ ಸುತ್ತ ಚಿತ್ರ ಸುತ್ತುತ್ತದೆ.  ಬೆಂಗಳೂರಿನಲ್ಲಿ ಇಡೀ ಚಿತ್ರದ ಚಿತ್ರೀಕರಣ ನಡೆಯಲಿದೆ.  ರಂಗಾಯಣ ರಘು, ತಾರಾ, ಸಾಧು ಕೋಕಿಲ, ರವಿಶಂಕರ್ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ‍್ಳುತ್ತಿದ್ದಾರೆ. ಚಿತ್ರದಲ್ಲಿ ಮೂರು ಹಾಡುಗಳಿದ್ದು, ಜೂಡಾ ಸ್ಯಾಂಡಿ ಸಂಗೀತ ಸಂಯೋಜಿಸುತ್ತಿದ್ದಾರೆ.‌ ಕಾರ್ತಿಕ್, ಛಾಯಾಗ್ರಹಣ ಹಾಗೂ ಉಮೇಶ್ ಅವರ ಸಂಕಲನವಿರುವ ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಸಂಭಾಷಣೆಯನ್ನು ಶೈಲೇಶ್ ರಾಜ್ ಹಾಗೂ ಚೇತನ್ ಸಿದ್ ಬರೆದಿದ್ದಾರೆ ಎಂದು ನಿರ್ದೇಶಕ ರಘುಕುಮಾರ್ ಓ ಆರ್ ತಿಳಿಸಿದರು.

ಇದು ನನ್ನ ಐದನೇ ಚಿತ್ರ ಎಂದು ಮಾತು ಆರಂಭಿಸಿದ ನಾಯಕ ಧನ್ವೀರ್, ಒಳ್ಳೆಯ ತಂಡ ಮತ್ತು ಒಳ್ಳೆಯ ಶೀರ್ಷಿಕೆ ಸಿಕ್ಕಿದೆ. ಬಹಳ ದಿನಗಳಿಂದ ಪ್ಲಾನ್‍ ಮಾಡಿ, ಒಂದೊಳ್ಳೆಯ ಕಥೆ ಮಾಡಿ ಈ ಚಿತ್ರ ಮಾಡುತ್ತಿದ್ದೇವೆ. ಅಭಿಮಾನಿಗಳಿಗೆ ಖುಷಿಯಾಗುವಂತಹ ಕಥೆ ಇದೆ. ಈ ಚಿತ್ರದಲ್ಲಿ ನೀಗ್ರೋಗಳ ಜೊತೆಗೆ ಫೈಟ್‍ ಇದೆ. ‘ಬಜಾರ್’ ನಂತರ ಸಿಕ್ಸ್ ಪ್ಯಾಕ್ ‍ಮಾಡಿಕೊಳ್ಳುತ್ತಿದ್ದೇನೆ. ಒಂದೇ ಹಂತದಲ್ಲಿ ಚಿತ್ರೀಕರಣ ನಡೆಯಲಿದೆ. ಕಥೆ ಮತ್ತು ಪಾತ್ರ ವಿಭಿನ್ನವಾಗಿದೆ ಎಂದರು.  

ಇದನ್ನೂ ಓದಿ:ರಶ್ಮಿಕಾ, ಕತ್ರಿನಾ ನಂತರ ಅಕ್ಷಯ್ ಕುಮಾರ್ ಡೀಪ್‌ಫೇಕ್‌ ವಿಡಿಯೋ ವೈರಲ್

ತಮ್ಮ ಪಾತ್ರ ಕೂಡ ಚೆನ್ನಾಗಿದೆ ಎಂದು ನಾಯಕಿ ಸಂಜನಾ ಆನಂದ್ ತಿಳಿಸಿದರು. ಛಾಯಾಗ್ರಾಹಕ ಕಾರ್ತಿಕ್, ಸಂಗೀತ ನಿರ್ದೇಶಕ ಜೂಡಾ ಸ್ಯಾಂಡಿ ಹಾಗೂ ಸಾಹಸ ನಿರ್ದೇಶಕ ಅರ್ಜುನ್ ಮಾಸ್ಟರ್ ಸೇರಿದಂತೆ ಅನೇಕ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ನಿರ್ದೇಶಕ, ನಿರ್ಮಾಪಕ ಹಾಗೂ ವಿತರಕ ಗುರು ದೇಶಪಾಂಡೆ, ಯೋಗಾನಂದ್ ಮುಂತಾದವರು ಅತಿಥಿಗಳಾಗಿ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.

ಚಿತ್ರದ ಫಸ್ಟ್ ಲುಕ್ ಮೋಷನ್ ಪೋಸ್ಟರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News