ಬೆಂಗಳೂರು: ಜಿಮ್ ಟ್ರೈನರ್ ಮಾರುತಿ ಗೌಡ ಮೇಲಿನ ಹಲ್ಲೆ ಮತ್ತು ಕಿಡ್ನಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನವಾಗಿರುವ ನಟ ದುನಿಯಾ ವಿಜಯ್ ಜಮೀನು ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 26ಕ್ಕೆ ನ್ಯಾಯಾಲಯ ಮುಂದೂಡಿದೆ.


COMMERCIAL BREAK
SCROLL TO CONTINUE READING

ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 8ನೇ ಎಸಿಎಂಎಂ ನ್ಯಾಯಾಲಯ ನ್ಯಾಯಮೂರ್ತಿ ಮಹೇಶ್ ಬಾಬು ಅವರು, ಜಾಮೀನು ಅರ್ಜಿ ಆದೇಶವನ್ನು ಸೆಪ್ಟೆಂಬರ್ 26ಕ್ಕೆ ಮುಂದೂಡಿದ್ದಾರೆ. ಇದರಿಂದಾಗಿ ಇನ್ನೂ ಎರಡು ದಿನ ದುನಿಯಾ ವಿಜಯ್ ಪರಪ್ಪನ ಅಗ್ರಹಾರ ಜೈಲಿನಲ್ಲಿಯೇ ಇರುವಂತಾಗಿದೆ. 


ಬೆಂಗಳೂರಿನ ಅಂಬೇಡ್ಕರ್‌ ಭವನದಲ್ಲಿ ಶನಿವಾರ ರಾತ್ರಿ ನಡೆದ ಜಗಳವೊಂದು ಘರ್ಷಣೆಗೆ ತಿರುಗಿತ್ತು. ಈ ಸಂಬಂಧ ಜಿಮ್‌ ಟ್ರೈನರ್‌ ಆಗಿರುವ ಪಾನಿಪುರಿ ಕಿಟ್ಟಿ ಅವರ ತಮ್ಮನ ಮಗ ಮಾರುತಿ ಗೌಡ ಎನ್ನುವ ಯುವಕನನ್ನು ದುನಿಯಾ ವಿಜಿ ಮತ್ತು ಮೂವರು ಅಪಹರಿಸಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಭಾನುವಾರ ಬೆಳಿಗ್ಗೆ ಹೈಗ್ರೌಂಡ್ಸ್‌ ಪೊಲೀಸ್ ಠಾಣೆಯಲ್ಲಿ ದುನಿಯಾ ವಿಜಯ್ ಮತ್ತು ಅವರ ಸ್ನೇಹಿತರ ವಿರುದ್ಧ ಪ್ರಕರಣವೊಂದು ದಾಖಲಾಗಿತ್ತು.


ಈ ಹಿನ್ನೆಲೆಯಲ್ಲಿ ಭಾನುವಾರ ಕೋರ್ಟಿಗೆ ರಜೆಯಿದ್ದ ಕಾರಣ ಕೋರಮಂಗಲ NGVನಲ್ಲಿರುವ ನ್ಯಾಯಮೂರ್ತಿ ಮಹೇಶ್ ಬಾಬು ಅವರ ಎದುರು ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಈ ಸಂದರ್ಭದಲ್ಲಿ ನ್ಯಾಯಾಧೀಶರು ವಿಜಯ್ ಮತ್ತು ಇನ್ನಿತರ ಮೂವರು ಆರೋಪಿಗಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದ್ದರು. ಈ ಬೆನ್ನಲೇ ಜಾಮೀನು ನೀಡುವಂತೆ ವಿಜಯ್ ಪರ ವಕೀಲರು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು.