Dwarakish Death News: ಪತ್ನಿ ಅಗಲಿದ ದಿನದಂದೇ ಇಹಲೋಕ ತ್ಯಜಿಸಿದ ನಟ ದ್ವಾರಕೀಶ್ !
Actor Dwarakish Death News : ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ.
Dwarakish Death Reason: 'ಕರ್ನಾಟಕದ ಪ್ರಚಂಡ ಕುಳ್ಳ' ಎಂದೇ ಖ್ಯಾತರಾಗಿದ್ದ ನಟ ದ್ವಾರಕೀಶ್ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ 1942 ಆಗಸ್ಟ್ 19 ರಂದು ಜನಿಸಿದರು. ದ್ವಾರಕೀಶ್ ಅಂಬುಜಾ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ, ನಿರ್ಮಾಪಕ ದ್ವಾರಕೀಶ್ ಅವರ ಪತ್ನಿ ಅಂಬುಜಾ 2021 ರಲ್ಲಿ ಏಪ್ರಿಲ್ 16 ರಂದು ನಿಧನರಾಗಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು. ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಸ್ವಗೃಹದಲ್ಲೇ ದ್ವಾರಕೀಶ್ ಪತ್ನಿ ವಿಧಿವಶರಾಗಿದ್ದರು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಅಂಬುಜಾ ಕೊನೆಯುಸಿರೆಳೆದಿದ್ದರು.
ಇದೀಗ ಹಿರಿಯ ನಟ, ನಿರ್ಮಾಪಕ, ನಿರ್ದೇಶಕ ದ್ವಾರಕೀಶ್ ಸಹ ಏಪ್ರಿಲ್ 16 ರಂದೇ ಕೊನೆಯುಸಿರೆಳೆದಿದ್ದಾರೆ. ಪತ್ನಿ ಅಗಲಿದೆ ದಿನದಂದೇ ದ್ವಾರಕೀಶ್ ಇಹಲೋಕ ತ್ಯಜಿಸಿದ್ದಾರೆ. 81 ವರ್ಷದ ದ್ವಾರಕೀಶ್ ಅವರ ಅಗಲಿಕೆಗೆ ಚಿತ್ರರಂಗ ಕಂಬನಿ ಮಿಡಿದಿದೆ. ಹಿರಿಯ ನಟ ದ್ವಾರಕೀಶ್ ಹೃದಯಾಘಾತ ದಿಂದ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ನಿಧನ ಅವರ ಅಭಿಮಾನಿಗಳಿಗೆ ಶಾಕ್ ನೀಡಿದೆ. ದ್ವಾರಕೀಶ್ ಅಗಲಿಕೆ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ ಉಂಟು ಮಾಡಿದೆ.
ಇದನ್ನೂ ಓದಿ: Dwarakish Cine Journey: ದ್ವಾರಕೀಶ್ ನಿಜವಾದ ಹೆಸರೇನು? ಚಿತ್ರರಂಗಕ್ಕೆ ಕಾಲಿಡುವ ಮುನ್ನ ಮಾಡುತ್ತಿದ್ದ ಕೆಲಸ ಏನು ಗೊತ್ತಾ?
ದ್ವಾರಕೀಶ್ ಅವರಿಗೆ ನಿನ್ನೆ ರಾತ್ರಿ ಲೂಸ್ ಮೋಷನ್ ಸಮಸ್ಯೆ ಕಾಡಿತ್ತಂತೆ. ಇದರಿಂದಾಗಿ ನಿದ್ದೆ ಕೂಡ ಸರಿಯಾಗಿ ಮಾಡಿರಲಿಲ್ಲವಂತೆ. ಬೆಳಗ್ಗೆ 2 ಗಂಟೆ ಸುಮಾರಿಗೆ ಕಾಫಿ ಕುಡಿದು ಮಲಗಿದ ದ್ವಾರಕೀಶ್ ಮರಳಿ ಎದ್ದೇಳಲಿಲ್ಲ ಎಂದು ದ್ವಾರಕೀಶ್ ಪುತ್ರ ತಿಳಿಸಿದ್ದಾರೆ.
ನಟ ದ್ವಾರಕೀಶ್ 40ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ಮಿಸಿದ್ದಾರೆ. 15ಕ್ಕೂ ಹೆಚ್ಚು ಸಿನಿಮಾಗಳನ್ನು ನಿರ್ದೇಶನ ಮಾಡಿದ್ದಾರೆ. ಡಾ.ರಾಜ್‌ಕುಮಾರ್, ವಿಷ್ಣುವರ್ಧನ್ ಹೀಗೆ ದಿಗ್ಗಜ ನಟರ ಸಿನಿಮಾಗಳಿಗೆ ಬಂಡವಾಳ ಹೂಡಿದ ಖ್ಯಾತಿ ದ್ವಾರಕೀಶ್ ಅವರದ್ದಾಗಿದೆ. ಹಾಸ್ಯ ನಟನಾಗಿ ಜನರನ್ನು ರಂಜಿಸಿರುವ ದ್ವಾರಕೀಶ್ ಕನ್ನಡ ಮಾತ್ರವಲ್ಲ ತಮಿಳು, ಹಿಂದಿ ಸಿನಿಮಾಗಳನ್ನೂ ದ್ವಾರಕೀಶ್ ನಿರ್ಮಾಣ ಮಾಡಿದ್ದಾರೆ. ದ್ವಾರಕೀಶ್ ಚಿತ್ರ ನಿರ್ಮಾಣ ಸಂಸ್ಥೆ ಮೂಲಕ ಹಲವು ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. ಅಲ್ಲದೇ ಹಲವು ಹೊಸ ನಟ, ನಟಿಯರನ್ನು ಬಣ್ಣದ ಲೋಕಕ್ಕೆ ಪರಿಚಯಿಸಿದ್ದಾರೆ.
ಇದನ್ನೂ ಓದಿ: Dwarakish Passes Away: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್ ಇನ್ನಿಲ್ಲ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.