ಸರ್ಕಾರದ ಆದೇಶ ಉಲ್ಲಂಘಿಸಿದ ಗೋಲ್ಡನ್ ಸ್ಟಾರ್ ಗಣೇಶ್? ಕಟ್ಟಡ ಕಾಮಗಾರಿಗೆ ಬ್ರೇಕ್​?

Actor Ganesh violated rules : ನಟ ಗಣೇಶ್ ‌ಖರೀದಿಸಿರುವ ಜಮೀನಿನಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ವಾಸದ ಮನೆ ಬದಲು ಶಾಶ್ವತವಾದ ಬೃಹತ್ ಕಟ್ಟಡ ಕಟ್ಟುತ್ತಿರುವ ಆರೋಪ ಕೇಳಿ ಬಂದಿದೆ.    

Written by - Chetana Devarmani | Last Updated : Aug 12, 2023, 10:37 AM IST
  • ಸರ್ಕಾರದ ಆದೇಶವನ್ನು ಉಲ್ಲಂಘಿಸಿದ್ರ ನಟ ಗೋಲ್ಡನ್ ಸ್ಟಾರ್ ಗಣೇಶ್?
  • ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ ಅಕ್ರಮ ರೆಸಾರ್ಟ್ ನಿರ್ಮಾಣಕ್ಕೆ ಮುಂದಾದ್ರ ಗಣೇಶ್?
  • ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ 1 ಎಕರೆ 24 ಗುಂಟೆ ಭೂಮಿ ಹೊಂದಿರುವ ನಟ ಗಣೇಶ್
ಸರ್ಕಾರದ ಆದೇಶ ಉಲ್ಲಂಘಿಸಿದ ಗೋಲ್ಡನ್ ಸ್ಟಾರ್ ಗಣೇಶ್? ಕಟ್ಟಡ ಕಾಮಗಾರಿಗೆ ಬ್ರೇಕ್​?  title=
Actor Ganesh

Ganesh violated environmental rules : ಗಣೇಶ್ ‌ಖರೀದಿಸಿರುವ ಜಮೀನಿನಲ್ಲಿ ಕಾಮಗಾರಿ ಭರದಿಂದ ಸಾಗುತ್ತಿದೆ. ಆದರೆ ಇದೀಗ ಈ ಕಟ್ಟಡ ನಿರ್ಮಾಣಕ್ಕೆ ಸಂಕಷ್ಟ ಎದುರಾಗಿದೆ ಎಂದು ಹೇಳಲಾಗ್ತಿದೆ. ನಟ ಗಣೇಶ್ ‌ಖರೀದಿಸಿರುವ ಜಮೀನಿನಲ್ಲಿ ಕಾಮಗಾರಿ ಭರದಿಂದ ಸಾಗಿದ್ದು, ವಾಸದ ಮನೆ ಬದಲು ಶಾಶ್ವತವಾದ ಬೃಹತ್ ಕಟ್ಟಡ ಕಟ್ಟುತ್ತಿರುವ ಆರೋಪ ಕೇಳಿ ಬಂದಿದೆ.  

ಗುಂಡ್ಲುಪೇಟೆ ತಾಲೂಕಿನ ಜಕ್ಕಹಳ್ಳಿ ಗ್ರಾಮದ ಸರ್ವೆ ನಂಬರ್ 105 ರಲ್ಲಿ ನಟ ಗೋಲ್ಡನ್​ ಸ್ಟಾರ್​ ಗಣೇಶ್ ಜಮೀನು ಖರೀದಿಸಿದ್ದಾರೆ. ಸೂಕ್ಷ್ಮ ಪರಿಸರ ವಲಯದಲ್ಲಿ ಶಾಶ್ವತ ಕಟ್ಟಡ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಬಂಡೀಪುರ ಸೂಕ್ಷ್ಮ ಪರಿಸರ ವಲಯದಲ್ಲಿ 1 ಎಕರೆ 24 ಗುಂಟೆ ಭೂಮಿ ಹೊಂದಿರುವ ನಟ ಗಣೇಶ್, ಪರಿಸರ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.  

ಇದನ್ನೂ ಓದಿ: ರಶ್ಮಿಕಾಗೆ ಡಿಸೆಂಬರ್ ತಿಂಗಳು ತುಂಬಾ ಸ್ಪೆಷಲ್ ಅಂತೆ, ಕಾರಣ ಕೂಡ ಅವರೇ ಹೇಳಿದ್ದಾರೆ ಕೇಳಿ

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ಪರಿಸರ ವಲಯಕ್ಕೆ ಸೇರಿರುವ ಜಕ್ಕಹಳ್ಳಿ ಗ್ರಾಮದಲ್ಲಿ ಗಣೇಶ್‌ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಸದ್ಯ ಸೂಕ್ಷ್ಮ ಪರಿಸರ ವಲಯವಾಗಿರುವ ಜಕ್ಕಹಳ್ಳಿಯಲ್ಲಿ  ಕಟ್ಟಡ ನಿರ್ಮಾಣಕ್ಕೆ ನಟ ಗಣೇಶ್‌ ಮುಂದಾಗಿದ್ದರು. ತಾತ್ಕಾಲಿಕ ಮನೆ ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದಿದ್ದರು. ಆದ್ರೆ ಇಲ್ಲಿ ಜೆಸಿಬಿ ಯಿಂದ ಕೆಲಸ ನಡೆಯುತ್ತಿದ್ದು, ಬೃಹತ್ ಕಟ್ಟಡಕ್ಕೆ ನಿರ್ಮಾಣಕ್ಕೆ ಸಿದ್ದತೆ ಮಾಡುತ್ತಿದ್ದಾರೆ ಎಂದು ಆರೋಪ ಕೇಳಬಂದಿದೆ. 

ಕಾಮಗಾರಿ ಗಮನಿಸಿದರೆ ಬೃಹತ್ ಕಟ್ಟಡಕ್ಕೆ ಪಾಯ ಹಾಕುವಂತೆ ಕಾಣಿಸುತ್ತಿದೆ ಎಂದು ಆರೋಪಿಸಲಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್‌ ಅವರ ಈ ನಡೆಗೆ ಪರಿಸರವಾದಿಗಳಿಂದ ವಿರೋಧ ವ್ಯಕ್ತವಾಗುತ್ತಿದೆ. 

ಇದನ್ನೂ ಓದಿ: ಸ್ಕಾಟ್​ಲೆಂಡ್​ನಲ್ಲಿ ಮಹೇಶ್ ಬಾಬು ಪುತ್ರಿ ಸಿತಾರಾ..ಪೋಟೋಸ್‌ ನೋಡಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News