`ನೆಲೆಸಿಗದ ನಾಯಿ ನರಿ ಬೊಗಳಿದರೆ ಇತಿಹಾಸ ಬದಲಾಗುತ್ತ?` ಚೇತನ್ ವಿರುದ್ದ ಗುಡುಗಿದ ಜಗ್ಗೇಶ್!
Jaggesh Reaction: ನಟ ಚೇತನ್ ಅಹಿಂಸಾ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದಕ್ಕೆ, ಈ ನಟನ ಮೇಲೆ ನವರಸ ನಾಯಕ ಜಗ್ಗೇಶ್ ಪರೋಕ್ಷವಾಗಿ ಹರಿಹಾಯ್ದಿದ್ದಾರೆ.
Jaggesh Reacts To Chethanʼs Post: ಸ್ಯಾಂಡಲ್ವುಡ್ ನಟ ಚೇತನ್ ಅಹಿಂಸಾ ಹಲವಾರು ವರ್ಷಗಳಿಂದ ಸಿನಿಮಾರಂಗದಿಂದ ದೂರವಿದ್ದು, ಸಾಮಾಜಿಕ ಕಳಕಳಿಯ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಸೋಷಿಯಲ್ ಹಂಚಿಕೊಳ್ಳುವುದರ ಮೂಲಕ ಸುದ್ದಿಯಾಗುತ್ತಿರುತ್ತಾರೆ. ಇತ್ತೀಚೆಗೆ ಈ ನಟ ಸೋಷಿಯಲ್ ಮೀಡಿಯಾ ಪೇಜ್ನಲ್ಲಿ ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಈ ಕುರಿತಂತೆ ನಟ ಜಗ್ಗೇಶ್ ಕೂಡ ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದು, ಪರೋಕ್ಷವಾಗಿ ಚೇತನ್ ಮೇಲೆ ಹರಿಹಾಯ್ದಿದ್ದಾರೆ.
ನಟ ಚೇತನ್ ಸೋಷಿಯಲ್ ಮಿಡಿಯಾ ಪೇಜ್ನಲ್ಲಿ "ಕೆಂಪೇಗೌಡ ಉಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ. ಟಿಪ್ಪು ಸುಲ್ತಾನ್ ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ. ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ. ದುರಾದೃಷ್ಟವಶಾತ್ ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ " ಎಂದು ಬರೆದಿದ್ದರು.
ಇದನ್ನೂ ಓದಿ: ನಾಡಪ್ರಭು ಕೆಂಪೇಗೌಡರಿಗೆ ಅವಮಾನ: ನಟ ಚೇತನ್ ಅಹಿಂಸಾ ವಿರುದ್ದ FIR ದಾಖಲು!
ಇದಕ್ಕೆ ಪ್ರತಿಕ್ರಿಯಿಸಿದ ನವರಸ ನಾಯಕ ಜಗ್ಗೇಶ್, "ಕೆಂಪೇಗೌಡ ವಿಜಯನಗರ ಸಾಮ್ರಾಜ್ಯದ ಒಡೆಯನ ತೊಡೆಯ ಮೇಲೆ ಕೂತು ಬೆಳೆದ ಮಗು.. ಮುಂದೆ ಸಾಮಾಜಿಕ ನ್ಯಾಯ ಎತ್ತಿ ಹಿಡಿದು ಬೆಂದಕಾಳೂರು ಬೆಳಗಿಸಿದ ಸಾರ್ವಭೌಮ.. ಇಂದಿನ ನಾಯಿ ನರಿ ಬೊಗಳಿದರೆ ಅವರ ಇತಿಹಾಸ ಬದಲಾಗುವುದೆ! ಚಿತ್ರರಂಗದಲ್ಲಿ ನೆಲೆಕಾಣದೆ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತ? ಕಾನೂನಿದೆ ಎಚ್ಚರ..!" ಎಂದು ಬರೆದುಕೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.