Actor Jaggesh : ವಿಶೇಷ ಅಂತಂದ್ರೆ ಈ ಸ್ಟುಡಿಯೋ ತಮ್ಮ ಮಗ ಯತಿರಾಜ್ ಅವರ ಕನಸ್ಸು ಕೂಡ ಆಗಿದ್ದು, ಯತಿರಾಜ್ ನಟಿಸಿರುವ ಯಲಾಕುನ್ನಿ ಸಿನಿಮಾದ ಅಷ್ಟು ಕೆಲಸಗಳು ಇದೇ ಸ್ಟುಡಿಯೋದಲ್ಲಿ ಅಚ್ಚುಕ್ಕಟಾಗಿ ಆಗಿದೆ. ಅದಲ್ಲದೇ ಒಂದು ಹಿಂದಿ ಸಿನಿಮಾ ಹಾಗೂ ಮಲಯಾಳಂ ಸಿನಿಮಾದ ಕೆಲಸವೂ ಆಗಿದೆ. ದುಡ್ಡಿಗಾಗಿ ಈ ಸ್ಟುಡಿಯೋ ನಿರ್ಮಾಣ ಮಾಡಲಿಲ್ಲ, ಇಂಡಸ್ಟ್ರೀಗೆ, ಎಲ್ಲಾ ಸಿನಿಮಾಗಳಿಗೂ ಕೈಗೆಟುಕುವ ದರದಲ್ಲಿ ಈ ಮೂಲಕ ಸೇವೆಯಾಗಲಿ ಅನ್ನೋದು ಜಗ್ಗೇಶ್ ರವರ ಅಭಿಪ್ರಾಯ.


COMMERCIAL BREAK
SCROLL TO CONTINUE READING

ಜಗ್ಗೇಶ್ ಸ್ಟುಡಿಯೋಸ್ ಬಗ್ಗೆ ಜಗ್ಗೇಶ್ ಮನದಾಳದ ಮಾತು : 1980 ರಲ್ಲಿ ಇಂಡಸ್ಟ್ರೀಗೆ ಬಂದೆ. ಸ್ಟುಡಿಯೋ ಕಟ್ಟೋ ಕನಸು ಇಂದು ನಿನ್ನೆಯದಲ್ಲ, ಸುಮಾರು ನಲವತ್ತು ವರ್ಷದ ಹಿಂದಿನ ಕನಸು. ತಮ್ಮ ಕೋಮಲ್ ನಿರ್ಮಾಣದ ಯಲಾಕುನ್ನಿ ಕಂಪ್ಲೀಟ್ ಕೆಲ್ಸ ಎಲ್ಲವೂ ಜಗ್ಗೇಶ್ ಸ್ಟುಡಿಯೊಸ್ ನಲ್ಲೇ ಆಗಿದ್ದು ವಿಶೇಷ. ನನ್ನ ಧರ್ಮಪತ್ನಿ ಕೊಟ್ಟ ಸಲಹೆಯಂತೆ ಜಗ್ಗೇಶ್ ಸ್ಟುಡಿಯೊಸ್ ಅಂತಾ ಹೆಸರಿಟ್ಟಿದ್ದೇವೆ. ಚಿಕ್ಕ ಮಗ ಯತಿರಾಜನ ಕನಸಿನ ಪ್ರಾಜೆಕ್ಟ್ ಈ ಸ್ಟುಡಿಯೋ.


ಇದನ್ನೂ ಓದಿ:ಫಸ್ಟ್‌ ಟೈಮ್‌ ಇನ್‌ ಡಾರ್ಲಿಂಗ್‌ ಹಿಸ್ಟರಿ..! ವಿಶೇಷ ಗೆಟಪ್‌ನಲ್ಲಿ 'ದಿ ರಾಜಾ ಸಾಬ್' ಪ್ರಭಾಸ್‌


ಗಾಂಧಿನಗರದಲ್ಲಿ ಒಂದು ಸ್ಟುಡಿಯೋದಲ್ಲಿ ಎನ್ ಎಸ್ ರಾವ್ ಅವ್ರು ಡಬ್ಬಿಂಗ್ ಮಾಡ್ತಾ ಇದ್ದದ್ದು ನೋಡಿ ಇಂಪ್ರೆಸ್ ಆಗಿದ್ದೆ. ಆ ಸ್ಟುಡಿಯೋ ಗೆ ಆ ಸಮಯದಲ್ಲಿ 8.9 ಲಕ್ಷ ಖರ್ಚು ಆಗಿತ್ತು ಅನ್ನೋದೇ ಗ್ರೇಟ್. ಚಾಮುಂಡೇಶ್ವರಿ ಸ್ಟುಡಿಯೋ ನೆನಪಿಗೆ ಜಾರಿದ ಜಗ್ಗೇಶ್. ನನ್ನ ಸಿನಿ ಬದುಕಿನ ವರ್ಣ ರಂಜಿತ ಜರ್ನಿಗೆ ಚಾಮುಂಡೇಶ್ವರಿ ಸ್ಟುಡಿಯೋ ದೊಡ್ಡ ಪಾತ್ರ ವಹಿಸುತ್ತದೆ.


ಬಂಡ ನನ್ನ ಗಂಡ ಮೂಲಕ ಹೀರೋ ಆದೆ, ಆ ಸಮಯ ಶಂಕರನಾಗ್ ಅವ್ರ ಸಂಕೇತ್ ಸ್ಟುಡಿಯೋಗೆ ಹೋದಾಗ ಆಗ್ತಾ ಇದ್ದ ಫೀಲ್ ಸಖತ್. ಶಂಕರನಾಗ್ ಹಾಗೆ ಇದ್ದದ್ದು, ಅವರೊಬ್ಬ ವಿಜನರಿ ಮ್ಯಾನ್. ಸ್ಕ್ರೀನ್ ಮೇಲೆ ನಮ್ಮ ಪಾತ್ರ ನೋಡಿ ಡಬ್ ಮಾಡ್ತಾ ಇದ್ದ ದಿನಗಳು, ನಿಧಾನವಾಗಿ ಕಮ್ಮಿ ಆಗ್ತಾ ಆಗ್ತಾ ಚಿಕ್ಕ ಚಿಕ್ಕ ಸ್ಕ್ರೀನ್ ನೋಡಿ ಡಬ್ ಮಾಡೋ ಕಾಲ ಬಂತು,ಇದರಿಂದ ನನಗೆ ಬೇಜಾರ್ ಆಗ್ತಾ ಬಂತು.
ಬಹುತೇಕ ಸಂಗೀತ ನಿರ್ದೇಶಕರು ತಮ್ಮ ತಮ್ಮ ಮನೆಗಳಲ್ಲಿ ಸ್ಟುಡಿಯೋ ಮಾಡ್ಕೊಂಡು ಕೆಲಸಗಳನ್ನ ಮಾಡ್ತಾ ಇರ್ತಾರೆ. ವಿಶಾಲವಾದ ಜಾಗ ಇರೋದು ಕಮ್ಮಿ, ನನ್ನ ಡ್ರೀಮ್ ಬೇರೆ ಇತ್ತು, ಸ್ಟುಡಿಯೋ ವಿಶಾಲವಾಗಿ ಇರ್ಬೇಕು ಅನ್ನೋದು ನನ್ನ ಆಸೆಯಾಗಿತ್ತು, ಕಲಾವಿದರಿಗೆ ಸ್ವಲ್ಪ ಫೀಲ್ ಗುಡ್ ಅನುಭವ ಇದ್ರೆ ಒಳ್ಳೆದು ಅನ್ಸತ್ತೆ. 


ಇದನ್ನೂ ಓದಿ:ಅದ್ಭುತ ಮೈಕಟ್ಟು, ಅಪರೂದ ಸೌಂದರ್ಯ, ಮೇಲಾಗಿ ಸ್ಟಾರ್ ನಟನ ಮಗಳು.. ಆದ್ರೂ ಸಿನಿಮಾ ಆಫರ್‌ ಸಿಗ್ತಿಲ್ಲ ಈ ಸುಂದರಿಗೆ..!


ಚಿತ್ರೀಕರಣ ಮುಗಿದ ನಂತರ ಫೂಟೇಜ್ ತಂದು ಇಲ್ಲಿ ಕೊಟ್ಟರೆ CG ಒಂದು ಬಿಟ್ಟು ಮಿಕ್ಕ ಎಲ್ಲ ಕೆಲಸಗಳು ಇಲ್ಲಿ ಆಗುತ್ತೆ. ಈಗಾಗಲೇ ಒಂದು ಮಲಯಾಳಂ - ಒಂದು ಹಿಂದಿ ಚಿತ್ರದ ಕೆಲಸ ಇಲ್ಲಿ ಆಗಿದೆ. ಅವರೆಲ್ಲ ಫುಲ್ ಹ್ಯಾಪಿ. ಚಿಕ್ಕ ಬಜೆಟ್ - ದೊಡ್ಡ ಬಜೆಟ್ ಸಿನ್ಮಾ ಅಂತಾ ಡಿವೈಡ್ ಮಾಡ್ದೆ ಎಲ್ಲವೂ ಒಂದೇ ಅಂತಾ ಫೀಲ್ ಮಾಡ್ಬೇಕು, ನನ್ನ ಸ್ಟುಡಿಯೋದಲ್ಲಿ ಇರುವ ಎಲ್ಲ ಇಕ್ವಿಪ್ ಮೆಂಟ್ಸ್ ಲೇಟೆಸ್ಟ್ 2024, ಹಾಗೆ US ನಿಂದ ತರಿಸಿದ್ದು.


ಬೇರೆ ಸ್ಟುಡಿಯೋದವರು ಕೊಡೋ ಕ್ವಾಲಿಟಿಗಿಂತ ಒಳ್ಳೆ ಔಟ್ ಪುಟ್ ಕೊಟ್ಟು, ಬೆಲೆ ಕೂಡಾ ಸ್ವಲ್ಪ ಕಮ್ಮಿ ಇರತ್ತೆ. ಈಗಾಗಲೇ ನಮ್ಮಲ್ಲಿ ನಾಲ್ಕೈದು ಫಿಲ್ಮ್ಸ್ ಇವೆ, ಕೆಲ್ಸ ನಡೀತಾ ಇದೆ.‌ ನನ್ನ ಉದ್ಯಮದ ಜನಕ್ಕೆ ನನ್ನ ಸೇವೆ ತಲುಪಬೇಕು.. ನನಗೆ ಹಾಡು ಹೇಳೋ ಆಸಕ್ತಿ, ರಾಘವೇಂದ್ರ ಸ್ವಾಮಿಗಳ ಹಾಡುಗಳನ್ನು ಲಾವಣಿ ಶೈಲಿಯ, ಆಡು ಭಾಷೆಯ ಹಾಡುಗಳ ಬಗ್ಗೆ ಆಸಕ್ತಿ ಇದೆ. ರಾಯರು ನನ್ನಿಂದ ಶುರು ಮಾಡಿಸ್ತಾರೆ. ಅಣ್ಣಾವ್ರ ಬಾನಿಗೊಂದು ಎಲ್ಲೆ ಎಲ್ಲಿದೆ, ವೇದಾಂತಿ ಹೇಳಿದನು, ಎಂದೆಂದೂ ನಿನ್ನನು ಮರೆತು,‌ ಹಾಡುಗಳನ್ನು ನಾನೇ ಹಾಡಿ ಸಂಭ್ರಮ ಪಟ್ಟಿದ್ದೇನೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ