Actor Kishore : ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ
Odisha Train Accident : ಓಡಿಶಾದ ಬಾಲ್ಸೋರ್ ಬಳಿ ನಡೆದ ರೈಲು ದುರಂತದಿಂದ ಇಡೀ ದೇಶವೆ ಮೌನ ತಾಳಿದೆ. ಸಾಕಷ್ಟು ಸಾವು ನೋವುಗಳು ಸಂಭವಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಅನೇಕರು ಸಂತಾಪ ಸೂಚಿಸಿದ್ದಾರೆ.
Sandalwood : ಇದೀಗ ಬಹುಭಾಷಾ ನಟ ಕಿಶೋರ್ ಓಡಿಶಾ ರೈಲು ದುರಂತದಲ್ಲಿ ಮೃತ ಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಈ ಘಟನೆಗೆ ಸಂಭಂದಿಸಿದ ಪತ್ರಿಕಾ ವರದಿಯೊಂದನ್ನು ತಮ್ಮ ಇನ್‌ಸ್ಟಾಗ್ರಾಂನ ಖಾತೆಯಲ್ಲಿ ಹಂಚಿಕೊಂಡು ಪ್ರತಿಕ್ರಿಯಿಸಿದ್ದಾರೆ. ಘಟನೆಯ ಬಗ್ಗೆ ಮಾತನಾಡಿರುವ ಅವರು "ಆಡಳಿತಾರೂಢ ಸರ್ಕಾರಗಳು ಅಪಘಾತ, ದುರಂತಗಳನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿವೆ ಇದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಿ ಎಂದು ಬೇಸರ ವ್ಯಕ್ತಪಡಿದ್ದಾರೆ
Samantha: ಬಾತ್‌ರೂಮ್‌ನಲ್ಲಿ ಫೋಟೋ ಕ್ಲಿಕ್ಕಿಸಿಕೊಂಡ ಸಮಂತಾ! ಇವರ ಹಿಂದಿರುವ ಈ ವ್ಯಕ್ತಿ ಯಾರು?
ಕೋಟ್ಯಂತರ ರೂಪಾಯಿ ವ್ಯಯಿಸಿ ತಿಂಗಳಿಗೊಂದು ರೈಲಿಗೆ ಹಸಿರು ನಿಶಾನೆ ತೋರಿಸಿ ಫೋಟೋ ಕ್ಲಿಕ್ಕಿಸಿಕೊಳ್ಳುವ ಬದಲು, ‘ಕವಚ’ ತಂತ್ರಜ್ಞಾನಕ್ಕೆ ಪ್ರಾಮುಖ್ಯತೆ ಕೊಟ್ಟು ಎಲ್ಲೆಡೆ ಅಳವಡಿಸಬಹುದಿತ್ತೇ? ಹಾಗೆ ನೋಡಿದರೆ ಕಳೆದ 6-7 ವರ್ಷಗಳಲ್ಲಿ 1000 ಕ್ಕೂ ಹೆಚ್ಚು ರೈಲು ಗಳು ಹಳಿತಪ್ಪಿ ಅಪಘಾತಕ್ಕೀಡಾಗಿದ್ದರೂ, 2021ರ ಸಿಎಜಿ ರಿಪೋರ್ಟನ್ನು ಕಡೆಗಣಿಸಿ ಸುರಕ್ಷತೆಗಿಂತ ದೇಶದ ಸ್ವತ್ತನ್ನು ಮಾರಿ ದುಡ್ಡು ಮಾಡುವುದರಲ್ಲೇ ನಿರತವಾದ ಸರ್ಕಾರವೇ ಈ ದುರಂತಕ್ಕೆ ಕಾರಣವಲ್ಲವೇ?
ಅಪರಾಧಿ ಸರ್ಕಾರವೇ ಅಪರಾಧದ ತನಿಖೆ ಮಾಡಿ ಅಪರಾಧಿ ಯಾರೆಂದು ಕಂಡು ಹಿಡಿಯುತ್ತದಂತೆ… ಎಂಥ ವಿಪರ್ಯಾಸ! ಇಲ್ಲಿ ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ.. ನಮ್ಮ ಸರ್ಕಾರ… ಮೂರ್ಖ ಸರ್ಕಾರದ, ನಾಲಾಯಕ್ಕು ಮಂತ್ರಿಗಳ, ಪ್ರಜೆಗಳೆಲ್ಲ ಬರೀ ಮತಗಳಂತೆ ಕಾಣುವ ಪ್ರಚಾರಿ ಪ್ರಧಾನಿಯ ಸಂಕುಚಿತ ದೃಷ್ಟಿಯನ್ನು ಮುಚ್ಚಿ ಹಾಕಲು ಹೋಗಿ, ಆಡಳಿತ ಪಕ್ಷ ಮತ್ತದರ ಬೂಟು ನೆಕ್ಕುವ ಮಾಧ್ಯಮಗಳು ಇಮೇಜ್ ಮ್ಯಾನೇಜ್ಮೆಂಟ್ ಮಾಡುತ್ತಾ ತಪ್ಪನ್ನೂ ಸರಿಯೆಂದು ಸಾಧಿಸ ಹೊರಟರೆ ಕಳೆದು ಕೊಂಡ ಪ್ರಾಣಗಳಿಗೆ ನೊಂದು ಜರ್ಜರಿತವಾದ ಕುಟುಂಬಗಳ ಕಣ್ಣೀರಿಗೆ ಅರ್ಥವಿಲ್ಲದೇ ಹೋದೀತು….
ಇದನ್ನೂ ಓದಿ-Mouni Restaurant: ಹೇ ʼಬದ್ಮಾಶ್ʼ ನಾನು ಬೈಲಿಲ್ಲ ಕಂಡ್ರಿ ; ಇದು ಮೌನಿ ರಾಯ್ ರೆಸ್ಟೋರೆಂಟ್ !
ಮಡಿದ ನೂರಾರು ಅಮಾಯಕರ ಜೀವಗಳಿಗೆ ಅಶ್ರುತರ್ಪಣ ಇನ್ನಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಲಿ. ಅಪಘಾತಗಳನ್ನೂ ದುರಂತಗಳನ್ನೂ ತಮ್ಮ ಇಮೇಜು ಬೆಳೆಸಿಕೊಳ್ಳಲು ಬಳಸುವುದನ್ನು ಬಿಟ್ಟು ಚುನಾವಣೆಯಾಚೆಗಿನ ತಮ್ಮ ಕರ್ತವ್ಯವನ್ನು ಇನ್ನಾದರೂ ನಿಭಾಯಿಸಲಿ" ಎಂದಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ