Kishore on Wrestler Protest : ಸಮಾಜದಲ್ಲಿ ಜರುಗುವು ವಿದ್ಯಮಾನಗಳು ಕುರಿತು ನೇರವಾಗಿ ಮಾತನಾಡುವ ಮೂಲಕ ಮೆಚ್ಚುಗೆ ಮತ್ತು ವಿರೋಧಕ್ಕೆ ಗುರಿಯಾಗುವ ನಟ ಕಿಶೋರ್‌ ಸದ್ಯ ಹಿಜಾಬ್‌ ಮತ್ತು ಕುಸ್ತಿ ಪಟುಗಳ ಪ್ರತಿಭಟನೆ ಕುರಿತು ಮಾತನಾಡಿದ್ದಾರೆ. ʼಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು, ಭಯದ ಮತ್ತು ಬಹುಸಂಖ್ಯಾವಾದಿ ರಾಜಕಾರಣʼ ಎಂಬ ಶೀರ್ಷಿಕೆಯೊಂದಿಗೆ ಸುದೀರ್ಘ ಬರಹದ ಮೂಲಕ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಅಲ್ಲದೆ, ದೇಶದ ಹೆಮ್ಮೆಯ ಹೆಣ್ಣು ಮಕ್ಕಳನ್ನು ಜೈಲಿಗೆ ತಳ್ಳಿ ಪಟ್ಟಾಭಿಷೇಕ ಮಾಡಿಕೊಳ್ಳುತ್ತಿರುವ ರಾಜ ನರೇಂದ್ರ ಮೋದಿಗೆ ಬಹುಪರಾಕ್ ಬಹುಪರಾಕ್ ಎಂದು ಕಿಡಿಕಾರಿದ್ದಾರೆ.


COMMERCIAL BREAK
SCROLL TO CONTINUE READING

ಹೌದು... ನಟ ಕಿಶೋರ್‌ ಅವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಪ್ರತಿಭಟನಾ ನಿರತ ಕುಸ್ತಿ ಪಟುಗಳ ಫೋಟೋ ಹಂಚಿಕೊಂಡು, ಅದಕ್ಕೆ, ʼಹಿಜಾಬು ಮತ್ತು ಕುಸ್ತಿ ಅಖಾಡದಲ್ಲಿ ಮನುವಾದಿ ಮಸಲತ್ತು, ಭಯದ ಮತ್ತು ಬಹುಸಂಖ್ಯಾವಾದಿ ರಾಜಕಾರಣʼ ಎಂಬ ಶೀರ್ಷಿಕೆ ಕೊಟ್ಟು.... ಯಾವ ಮುಸಲ್ಮಾನ ಮಹಿಳೆ, ಪುರುಷ ಪ್ರಾಭಲ್ಯದ ಸಂಕೇತವಾದ ಹಿಜಾಬನ್ನು ವಿರೋಧಿಸಿಯೂ ವಿರೋಧಿಸದಂತೆ ಮೆಲ್ಲ ಮೆಲ್ಲನೆ ಅದರಿಂದ ಸ್ವತಂತ್ರಳಾಗಿ ಶಿಕ್ಷಿತಳೂ ಸಶಕ್ತಳೂ ಆಗುತ್ತಿದ್ದಳೊ ಅವಳನ್ನು ಅಡ್ಡಗಟ್ಟಿ ಅವಳಲ್ಲಿ ಭಯ ಹುಟ್ಟಿಸಿ, ಆಕೆ ತನ್ನ ಆತ್ಮರಕ್ಷಣೆಗಾಗಿ ತನ್ನ ಅಸ್ಮಿತೆಯ ಹುಡುಕಾಟದಲ್ಲಿ ತನ್ನನ್ನು ಬಂಧನದಲ್ಲಿಟ್ಟಿದ್ದ ಅದೇ ಹಿಜಾಬಿನ ಮೊರೆ ಹೋಗುವ ಹಾಗೆ ಮಾಡಿದ ಮನುವಾದಿಗಳ ಹಿಜಾಬು ಬ್ಯಾನ್ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಉರುಳಿಸಿತ್ತು.


The Indian House: ರಾಮ್ ಚರಣ್ ನಿರ್ಮಾಣದ ʼದಿ ಇಂಡಿಯನ್ ಹೌಸ್’ ಪವರ್ ಪ್ಯಾಕ್ಡ್ ಮೋಷನ್ ವಿಡಿಯೋ ರಿಲೀಸ್


ಒಂದು ಹೆಣ್ಣು ಶಿಕ್ಷಣ ಪಡೆದರೆ ಅವಳ ಮುಂದಿನ ಇಡೀ ಪೀಳಿಗೆ ಶಿಕ್ಷಣ ಪಡೆಯುತ್ತದೆ. ಸರಕಾರಿ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿ ಇಂದೂ ಸಹ ನೂರರಲ್ಲಿ ಹದಿನಾಲ್ಕು ಮುಸ್ಲಿಂ ಹೆಣ್ಣು ಮಕ್ಕಳು ಮಾತ್ರ ಕಾಲೇಜು ಶಿಕ್ಷಣ ಪಡೆಯಲು ಸಾಧ್ಯವಾಗಿದೆ, ಇಂಥಾ ಕಾಲದಲ್ಲಿ ಅದನ್ನೂ ತಡೆದು ಬಿಟ್ಟರೆ .. ಮುಸಲ್ಮಾನರನ್ನು ಮುಖ್ಯವಾಹಿನಿಯಿಂದ ಹೊರಗಿಡುವ ಷಡ್ಯಂತ್ರ ಯಶಸ್ವಿಯಾದಂತೆಯೇ ಸರಿ.


Pavitra and Naresh: ಪವಿತ್ರಾ - ನರೇಶ್‌ ಇಬ್ಬರಲ್ಲಿ ಮೊದಲು ಪ್ರಪೋಸ್‌ ಮಾಡಿದ್ಯಾರು? ತುಂಬಾ ಸ್ಪೆಷಲ್‌ ಆಗಿತ್ತಂತೆ ಆ ಮೊಮೆಂಟ್‌!


ಜಂತರ್ ಮಂತರ್ ನಲ್ಲಿ ಲೈಂಗಿಕ ದೌರ್ಜನದ ವಿರುದ್ಧ ಧರಣಿ ಕುಳಿತ ಹೆಣ್ಣುಮಕ್ಕಳು, ಅತ್ಯಾಚಾರಿಯ ಹೂಂಕಾರ, ಆಗಾಗ ಆ ಹೆಣ್ಣುಮಕ್ಕಳ ಮೇಲೇ ತನ್ನ ಶಕ್ತಿ ತೋರಿಸುವ ನರಸತ್ತ ಪೊಲೀಸ್, ಕಮಕ್ ಕಿಮಕ್ ಅನ್ನದೇ ಅತ್ಯಾಚಾರಿಗೆ ಪರೋಕ್ಷ ಬೆಂಬಲ ಕೊಟ್ಟು ಕುಳಿತ ಏಕವ್ಯಕ್ತಿ ಸರ್ಕಾರವಾದ ಪ್ರಧಾನಿ…. ಆಗ ಹೊರಟದ್ದು …. ವಿಶ್ವಮಟ್ಟದ ತಾರೆಯರಿಗೇ ಹೀಗಾದರೆ ನಮ್ಮಂಥ ಸಾಮಾನ್ಯರಿಗಾದರೆ ಹೇಗೆ ಎಂಬ ಜನಸಾಮಾನ್ಯರ ಉದ್ಗಾರ… ಇಷ್ಟು ಸಾಲದೇ, ಶತಮಾನಗಳು ಹೋರಾಡಿ ವಿಶ್ವದ ಉತ್ತುಂಗಕ್ಕೇರಿದ ಹೆಣ್ಣು ಮಕ್ಕಳನ್ನು, ಅವರ ಬೆಂಗಾವಲಾಗಿ ನಿಂತ ದೇಶದ ತಾಯಿ ತಂದೆಯರೇ ಮತ್ತೆ ಮನುವಿನ ಕಲ್ಪನೆಯ ನಾಲ್ಕು ಗೋಡೆಗಳ ಕೂಪಕ್ಕೆ ತಳ್ಳಲು. ಭಾರತಾಂಬೆ ಅಂದು ಹಿಜಾಬಿನಲ್ಲಿ ಇಂದು ಜಂತರ್ ಮಂತರ್ ಅಖಾಡದಲ್ಲಿ ಮನುವಾದಿಗಳಿಗೆ ಸವಾಲೆಸೆಯುತ್ತಲೇ ಬಂದಿದ್ದಾಳೆ. ಜೈ ಭಾರತಾಂಬೆ ಎಂದು ಬರೆದುಕೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ