ಅಭಿಮಾನಿಗಳಲ್ಲಿ ಲವ್ಲಿಸ್ಟಾರ್ ಪ್ರೇಮ್ ಕಳಕಳಿಯ ಮನವಿ! ಏನದು?
ಲವ್ಲಿಸ್ಟಾರ್ ಪ್ರೇಮ್ ಜನ್ಮದಿನ ಸಮೀಪಿಸುತ್ತಿದೆ. ಈ ವಿಚಾರವಾಗಿ ನೆನಪಿರಲಿ ಪ್ರೇಮ್ ಅಭಿಮಾನಿಗಳಿ ಪತ್ರದ ಮೂಲಕ ವಿಶೇಷ ಮನವಿ ಮಾಡಿದ್ದಾರೆ.
ಅಪ್ಪು ಅಂದ್ರೆನೆ ಹಾಗಲ್ವಾ? ಮರೆಯಾದರೂ ಮರೆಯಲಾಗದ ಮಾಣಿಕ್ಯ. ಪವರ್‌ಸ್ಟಾರ್ ಪುನೀತ್ ರಾಜ್‌ಕುಮಾರ್ ಕನ್ನಡ ಚಿತ್ರರಂಗದ ಆಸ್ತಿ. ಅಪ್ಪು ನಿಧನದಿಂದ ಇಡೀ ಚಿತ್ರರಂಗವೇ ದುಃಖದಲ್ಲಿ ಮುಳುಗಿದೆ. ಪುನೀತ್ ಅಗಲಿಕೆಯ ನೋವಿನಿಂದ ಚಿತ್ರರಂಗದ ಸ್ನೇಹಿತರು, ಕುಟುಂಬಸ್ಥರು, ನೋವಿನಲ್ಲಿದ್ದಾರೆ.
ಇದನ್ನೂ ಓದಿ: "ಚಂದ್ರಲೇಖ ರಿಟರ್ನ್ಸ್" ಅಂತಿದ್ದಾರೆ ಓಂಪ್ರಕಾಶ್ ರಾವ್...
ಇದೀಗ ನೆನಪಿರಲಿ ಪ್ರೇಮ್ ತಮ್ಮ ಅಭಿಮಾನಿಗಳಿಗೆ ಒಂದು ಮನವಿಯನ್ನು ಮಾಡಿದ್ದಾರೆ. ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲ ಎಂದು ಫ್ಯಾನ್ಸ್‌ಗೆ ತಿಳಿಸಿದ್ದಾರೆ. ಈ ಬಗ್ಗೆ ಪ್ರೇಮ್ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಪಡಿಸಿದ್ದಾರೆ.
ಏಪ್ರಿಲ್ 18 ರಂದು ಅಂದರೆ ನಾಳೆ ಸೋಮವಾರ ನಟ ಪ್ರೇಮ್ ಜನ್ಮದಿನ. ಪ್ರತಿವರ್ಷ ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದರು ಪ್ರೇಮ್. ಆದರೆ ಕೊರೊನಾ ಕಾರಣದಿಂದ ಕಳೆದ ಎರಡು ವರ್ಷಗಳಿಂದ ಅದ್ದೂರಿ ಹುಟ್ಟುಹಬ್ಬಕ್ಕೆ ಬ್ರೇಕ್ ಹಾಕಿದ್ದರು. ಆದರೆ ಈ ವರ್ಷ ಕೋವಿಡ್ ಕಾಟವಿಲ್ಲ ಆದರೂ ಪ್ರೇಮ್ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ.
ಕೇವಲ ಮೂರು ದಿನಗಳಲ್ಲಿ ಬಾಕ್ಸ್ ಆಫೀಸ್ ನಲ್ಲಿ 419 ಕೋಟಿ ರೂ.ಗಳಿಸಿದ ಕೆಜಿಎಫ್ 2..!
ಸ್ನೇಹಜೀವಿ ಪುನೀತ್ ರಾಜ್‌ಕುಮಾರ್ ಅವರನ್ನು ಕಳೆದುಕೊಂಡ ನೋವಿನಿಂದ ಇನ್ನು ಯಾರು ಹೊರಬಂದಿಲ್ಲ. ಹಾಗಾಗಿ ಇಂಥ ಸಮಯದಲ್ಲಿ ಹುಟ್ಟುಹಬ್ಬ ಆಚರಣೆ ಬೇಡ ಎಂದು ಪ್ರೇಮ್ ನಿರ್ಧರಿಸಿದ್ದಾರೆ.
ನೆನಪಿರಲಿ ಸಿನಿಮಾ ಮೂಲಕ ದೊಡ್ಡ ಮಟ್ಟದ ಖ್ಯಾತಿಗಳಿಸಿದ ಪ್ರೇಮ್ ಅನೇಕ ಸಿನಿಮಾಗಳಲ್ಲಿ ನಟಿಸಿ, ಜನರ ಮನ ಗೆದ್ದಿದ್ದಾರೆ. ಚಿತ್ರರಂಗದಲ್ಲಿ 20 ವರ್ಷಗಳನ್ನು ಪೂರೈಸಿರುವ ಪ್ರೇಮ್ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.