ರಾಷ್ಟ್ರ ಪ್ರಶಸ್ತಿ ವಿಜೇತ ನಟ ಆರ್. ಮಾಧವನ್ FTII ನೂತನ ಅಧ್ಯಕ್ಷರಾಗಿ ನೇಮಕ..!

FTII President R Madhavan : ಮಹಾರಾಷ್ಟ್ರದ ಪುಣೆಯಲ್ಲಿರುವ ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯನ್ನು 1960 ರಲ್ಲಿ ಸ್ಥಾಪಿಸಲಾಯಿತು. ನಟನೆ, ನಿರ್ದೇಶನ, ಸಿನಿಮಾಟೋಗ್ರಫಿ ಮತ್ತು ಎಡಿಟಿಂಗ್ ಕೋರ್ಸ್‌ಗಳನ್ನು ಇಲ್ಲಿ ಕಲಿಸಲಾಗುತ್ತದೆ. ಸದ್ಯ ಇದರ ಅಧ್ಯಕ್ಷರಾಗಿ ನಟ ಆರ್‌ ಮಾಧವನ್‌ ಆಯ್ಕೆಯಾಗಿದ್ದಾರೆ.

Written by - Krishna N K | Last Updated : Sep 2, 2023, 12:56 PM IST
  • ನಟ ಆರ್‌ ಮಾಧವನ್‌ FTII ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಾರೆ.
  • ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ ನೂತನ ಅಧ್ಯಕ್ಷ ಆರ್‌ ಮಾಧವನ್‌.
  • ಈ ಹಿಂದೆ ನಿರ್ದೇಶಕ ಶೇಖರ್ ಕಪೂರ್ ಅವರು FTII ಅಧ್ಯಕ್ಷರಾಗಿದ್ದರು.
ರಾಷ್ಟ್ರ ಪ್ರಶಸ್ತಿ ವಿಜೇತ ನಟ ಆರ್. ಮಾಧವನ್ FTII ನೂತನ ಅಧ್ಯಕ್ಷರಾಗಿ ನೇಮಕ..! title=

R Madhavan : ನಟ ಆರ್ ಮಾಧವನ್ ಅವರ ಚೊಚ್ಚಲ ನಿರ್ದೇಶನದ 'ರಾಕೆಟ್ರಿ: ದಿ ನಂಬಿ ಎಫೆಕ್ಟ್' ಅತ್ಯುತ್ತಮ ಚಲನಚಿತ್ರಕ್ಕಾಗಿ ರಾಷ್ಟ್ರಪ್ರಶಸ್ತಿಯನ್ನು ಪಡೆದುಕೊಂಡಿದೆ. ಇದೀಗ ಆರ್‌ ಮಾಧವನ್‌ ಅವರು ಭಾರತೀಯ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯ (FTII) ಮುಂದಿನ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಾರೆ. ಸೆಪ್ಟೆಂಬರ್ 30, 2020 ರಿಂದ ಇಂದಿನವರೆಗೆ ನಿರ್ದೇಶಕ ಶೇಖರ್ ಕಪೂರ್ ಅವರು FTII ಅಧ್ಯಕ್ಷರಾಗಿದ್ದರು.

ಈನ್ನು ಈ ಕುರಿತು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಅವರು ತಮ್ಮ ಎಕ್ಸ್ ಖಾತೆಯಲ್ಲಿ (ಹಿಂದಿನ ಟ್ವಿಟರ್) ಈ ಕುರಿತು ಮಾಹಿತಿ ನೀಡಿದ್ದಾರೆ. ಅಲ್ಲದೆ, ರಾಷ್ಟ್ರ ಪ್ರಶಸ್ತಿ ವಿಜೇತ ನಟನಿಗೆ ತಮ್ಮ ಶುಭಾಶಯಗಳನ್ನು ತಿಳಿಸಿದ್ದಾರೆ.

ಇದನ್ನೂ ಓದಿ: Kushi : ಕುಶಿ ಚಿತ್ರದ ಬೆಡ್‌ರೂಮ್ ಸೀನ್‌ ವೈರಲ್‌...ದೃಶ್ಯ ನೋಡಿದ ನೆಟ್ಟಿಗರು ಏನಂದ್ರು ಗೊತ್ತಾ..?

FTII ನ ಅಧ್ಯಕ್ಷರಾಗಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ನಾಮನಿರ್ದೇಶನಗೊಂಡಿದ್ದಕ್ಕಾಗಿ ನಟ ಮಾಧವನ್ ಜೀ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ಅಪಾರ ಅನುಭವ ಮತ್ತು ಬಲವಾದ ನೈತಿಕತೆಯು ಈ ಸಂಸ್ಥೆಯನ್ನು ಶ್ರೀಮಂತಗೊಳಿಸುತ್ತದೆ, ಧನಾತ್ಮಕ ಬದಲಾವಣೆಗಳನ್ನು ತರುತ್ತದೆ ಮತ್ತು ಉನ್ನತ ಮಟ್ಟಕ್ಕೆ ಕೊಂಡೊಯ್ಯುತ್ತದೆ ಎಂದು ನನಗೆ ಖಾತ್ರಿಯಿದೆ. ನಿಮಗೆ ನನ್ನ ಶುಭಾಶಯಗಳು, ಎಂದು ಅನುರಾಗ್‌ ಠಾಕೂರ್‌ ಅವರು ಬರೆದುಕೊಂಡಿದ್ದಾರೆ.

ಇನ್ನು ನಟ ಮಾಧವನ್ ಅನುರಾಗ್ ಅವರ ಟ್ವೀಟ್ ಅನ್ನು ರೀ ಪೋಸ್ಟ್ ಮಾಡಿಕೊಂಡಿದ್ದು, ಶುಭ ಹಾರೈಕೆಗಳಿಗೆ ತುಂಬಾ ಧನ್ಯವಾದಗಳು, ಅನುರಾಗ್‌ ಠಾಕೂರ್‌ ಜೀ ನಿಮ್ಮ ಎಲ್ಲಾ ನಿರೀಕ್ಷೆಗಳನ್ನು ಪೂರೈಸಲು ನಾನು ನನ್ನ ಕೈಲಾದಷ್ಟು ಮಾಡುತ್ತೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ಇದನ್ನೂ ಓದಿ: ಕಿಚ್ಚ ಸುದೀಪ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಭಾರತೀಯ ಚಿತ್ರರಂಗದ ಪ್ರೇಕ್ಷಕರಿಗೆ ಗುಡ್ ನ್ಯೂಸ್..! 

ಮಹಾರಾಷ್ಟ್ರದ ಪುಣೆಯಲ್ಲಿರುವ FTII ಅನ್ನು 1960 ರಲ್ಲಿ ಸ್ಥಾಪಿಸಲಾಯಿತು. ನಟನೆ, ನಿರ್ದೇಶನ, ಸಿನಿಮಾಟೋಗ್ರಫಿ ಮತ್ತು ಎಡಿಟಿಂಗ್ ಕೋರ್ಸ್‌ಗಳನ್ನು ಇಲ್ಲಿ ಕಲಿಸಲಾಗುತ್ತದೆ. ಮಣಿರತ್ನಂ ನಿರ್ದೇಶನದ 2000 ರಲ್ಲಿ ಬಿಡುಗಡೆಯಾದ 'ಅಲೈಪಾಯುತೆ' ಸಿನಿಮಾದ ಮೂಲಕ ಮಾಧವನ್ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದರು. 'ರೆಹನಾ ಹೈ ತೇರ್ರೆ ದಿಲ್ ಮೇ' ಮೂಲಕ ಬಾಲಿವುಡ್‌ಗೆ ಕಾಲಿಟ್ಟರು. 'ರಾಕೆಟ್ರಿ: ದಿ ನಂಬಿ ಎಫೆಕ್ಟ್,' ಮಾಜಿ ಇಸ್ರೋ ವಿಜ್ಞಾನಿ ಎಸ್ ನಂಬಿ ನಾರಾಯಣನ್ ಅವರ ಜೀವನಾಧಾರಿತ ಸಿನಿಮಾವನ್ನು ನಿರ್ದೇಶಿಸಿದ್ದರು. ಈ ಚಿತ್ರ ಆಗಸ್ಟ್ 24 ರಂದು ನಡೆದ 69ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ದೊಡ್ಡ ಪ್ರಶಸ್ತಿಯನ್ನು ಗೆದ್ದುಕೊಂಡಿತು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News