Hi Nanna movie : ಟಾಲಿವುಡ್ ಸ್ಟಾರ್ ನಟ ನಾನಿ 30ನೇ ಚಿತ್ರಕ್ಕೆ 'ಹಾಯ್ ನಾನ್ನ' ಎಂಬ ಶೀರ್ಷಿಕೆಯನ್ನು ಇಡಲಾಗಿದೆ. ಹಾಯ್ ನಾನ್ನ ಎಂಬ ತೆಲುಗು ಸಾಲಿನ ಅರ್ಥ 'ಹಾಯ್ ಅಪ್ಪ' ಎಂಬುದಾಗಿದೆ. ಸೌತ್ ಭಾಷೆಯಲ್ಲಿ ಒಂದೇ ಟೈಟಲ್ ಇರಲಿ ಎಂಬ ಉದ್ದೇಶದಿಂದ ಚಿತ್ರತಂಡ ಕನ್ನಡ, ತಮಿಳು, ಮಲಯಾಳಂ ಭಾಷೆಯಲ್ಲಿಯೂ ʼಹಾಯ್ ನಾನ್ನʼ ಎಂದೇ ಶೀರ್ಷಿಕೆ ಫಿಕ್ಸ್ ಮಾಡಿದೆ.
ಮೆಗಾಸ್ಟಾರ್ ಚಿರಂಜೀವಿ ಆಶೀರ್ವಾದೊಂದಿಗೆ ಕಿಕ್ ಸ್ಟಾರ್ಟ್ ಸಿಕ್ಕಿರುವ ನಾನಿ 30ನೇ ಸಿನಿಮಾವನ್ನು, ಶೌರ್ಯುವ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ನಿರ್ದೇಶಕನಾಗಿ ಇದು ಇವರ ಮೊದಲ ಸಿನಿಮಾವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂದವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಇದನ್ನೂ ಓದಿ: ಶಾರುಖ್ ಖಾನ್ ʼಜವಾನ್ʼ ಅವತಾರ ನೋಡಿ ಶಾಕ್ ಆದ ಫ್ಯಾನ್ಸ್..! ಬೋಳು ತಲೆಯಲ್ಲಿ ಕಿಂಗ್ ಖಾನ್
ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ‘ಹೃದಯಂ’ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.