Naveen Polishetty : ರಸ್ತೆ ಅಪಘಾತದಲ್ಲಿ ಖ್ಯಾತ ನಟ ನವೀನ್ ಪೋಲಿಶೆಟ್ಟಿಗೆ ಗಂಭೀರ ಗಾಯ..! ಆಸ್ಪತ್ರೆಗೆ ದಾಖಲು

Naveen Polishetty accident : ಅಮೆರಿಕದಲ್ಲಿರುವ ನಟ ನವೀನ್ ಎರಡು ದಿನಗಳ ಹಿಂದೆ ರಸ್ತೆ ಅಪಘಾತಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತ ಹೆಚ್ಚಿನ ಮಾಹಿತಿ ಇಲ್ಲಿದೆ..

Written by - Krishna N K | Last Updated : Mar 28, 2024, 02:51 PM IST
    • ನಟ ನವೀನ್ ಪೋಲಿಶೆಟ್ಟಿ ಅಪಘಾತಕ್ಕೀಡಾಗಿದ್ದಾರೆ.
    • ಅಮೇರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
    • ನವೀನ್ ಕೈಗೆ ತೀವ್ರ ಪೆಟ್ಟಾಗಿದ್ದು, ಕೈ ಮುರಿತವಾಗಿದೆ.
Naveen Polishetty : ರಸ್ತೆ ಅಪಘಾತದಲ್ಲಿ ಖ್ಯಾತ ನಟ ನವೀನ್ ಪೋಲಿಶೆಟ್ಟಿಗೆ ಗಂಭೀರ ಗಾಯ..! ಆಸ್ಪತ್ರೆಗೆ ದಾಖಲು title=
Naveen Polishetty

Naveen Polishetty : ತೆಲುಗು ʼಜಾತಿ ರತ್ನಾಲುʼ ಸಿನಿಮಾ ಖ್ಯಾತಿಯ ನವೀನ್ ಪೋಲಿಶೆಟ್ಟಿ ಅಪಘಾತಕ್ಕೀಡಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೇ ಅಮೆರಿಕಕ್ಕೆ ಹೋಗಿದ್ದ ನಟ ಬೈಕ್ ರೈಡ್‌ ಮಾಡುವಾಗ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ (Naveen Polishetty injured) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಸದ್ಯ ಅಮೆರಿಕದಲ್ಲಿರುವ ನವೀನ್ ಎರಡು ದಿನಗಳ ಹಿಂದೆ ರಸ್ತೆ ಅಪಘಾತಕ್ಕೀಡಾಗಿದ್ದಾರೆ ಎಂದು ತಿಳಿದು ಬಂದಿದೆ. ಬೈಕ್ ನಲ್ಲಿ ಹೋಗುತ್ತಿದ್ದಾಗ ಕಾಲು ಜಾರಿ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಅವಘಡದಲ್ಲಿ ನವೀನ್ ಕೈಗೆ ತೀವ್ರ ಪೆಟ್ಟಾಗಿದ್ದು, ಕೈ ಮುರಿತವಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ: ರಾಜಕೀಯಕ್ಕೆ ಕರಾವಳಿ ಬ್ಯೂಟಿ ನಟಿ ಅನುಷ್ಕಾ ಶೆಟ್ಟಿ ಎಂಟ್ರಿ..! ಪಕ್ಷ ಯಾವುದು ಗೊತ್ತೆ..?

ಆದರೆ ಈ ಬಗ್ಗೆ ಯಾವುದೇ ಅಧಿಕೃತ ಘೋಷಣೆಯಾಗಿಲ್ಲ. ಸದ್ಯ ನವೀನ್ ಅಮೆರಿಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿನಿ ವಲಯದ ಒಳಗಿನ ಮಾತು. ಮತ್ತೊಂದೆಡೆ, ನವೀನ್‌ಗೆ ಸುಮಾರು ಎರಡು ತಿಂಗಳು ವಿಶ್ರಾಂತಿ ಬೇಕು ಎಂದು ವೈದ್ಯರು ಸೂಚಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ನವೀನ್ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಲ್ಲದೆ, ಅಪಘಾತ ಹೇಗೆ ಸಂಭವಿಸಿತು, ಮತ್ತೆ ನಟ ಜೊತೆ ಇನ್ಯಾರಾದರೂ ಇದ್ರಾ ಎಂಬ ವಿಚಾರ ಇದುವರೆಗೂ ತಿಳಿದು ಬಂದಿಲ್ಲ. ಅಪಘಾತದ ಬಗ್ಗೆ ಹೆಚ್ಚಿನ ವಿವರಗಳು ಸಹ ತಿಳಿಯಬೇಕಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News