Rudra Garuda Purana: ರಿಷಿ ಅಭಿನಯದ ʼರುದ್ರ ಗರುಡ ಪುರಾಣʼ: ಶೀರ್ಷಿಕೆ ಅನಾವರಣ ನಟ ನೀನಾಸಂ ಸತೀಶ್

Rudra Garuda Purana: ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. "ರುದ್ರ ಗರುಡ ಪುರಾಣ" ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

Written by - Zee Kannada News Desk | Last Updated : Jun 3, 2023, 11:47 AM IST
  • ರುದ್ರ ಗರುಡ ಪುರಾಣ ದಲ್ಲಿ ಪೊಲೀಸ್ ಅಧಿಕಾರಿಯಾದ ರಿಷಿ
  • ನೂತನ ಚಿತ್ರದ ಶೀರ್ಷಿಕೆ ಅನಾವರಣ ಮಾಡಿ ಶುಭಕೋರಿದ ನೀನಾಸಂ ಸತೀಶ್

    ರುದ್ರ ಗರುಡ ಪುರಾಣ ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ
Rudra Garuda Purana: ರಿಷಿ ಅಭಿನಯದ ʼರುದ್ರ ಗರುಡ ಪುರಾಣʼ: ಶೀರ್ಷಿಕೆ ಅನಾವರಣ ನಟ ನೀನಾಸಂ ಸತೀಶ್  title=

ಬೆಂಗಳೂರು: ಆಪರೇಶನ್ ಅಲಮೇಲ್ಲಮ್ಮ, "ಕವಲುದಾರಿ" ಮುಂತಾದ ಚಿತ್ರಗಳ ಮೂಲಕ ಮನೆಮಾತಾಗಿರುವ ನಟ ರಿಷಿ ನಾಯಕರಾಗಿ ನಟಿಸುತ್ತಿರುವ,  ಕೆ.ಎಸ್ ನಂದೀಶ್ ನಿರ್ದೇಶನದ ನೂತನ ಚಿತ್ರದ ಮುಹೂರ್ತ ಸಮಾರಂಭ ಹಾಗೂ ಶೀರ್ಷಿಕೆ ಅನಾವರಣ ಕಾರಂಜಿ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು.

ನಟ ನೀನಾಸಂ ಸತೀಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು ಹಾಗೂ ಶೀರ್ಷಿಕೆ ಅನಾವರಣ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. "ರುದ್ರ ಗರುಡ ಪುರಾಣ" ಎಂದು ಚಿತ್ರಕ್ಕೆ ಹೆಸರಿಡಲಾಗಿದೆ.

ಇದನ್ನೂ ಓದಿ: Trending News: ಯುವ ರೈತನ ಮದುವೆ: ಎತ್ತಿನ ಬಂಡಿಯಲ್ಲಿ ನವ ವಧುವರನ ಮೆರವಣಿಗೆ!

"ಚಂಬಲ್", " ಡಿಯರ್ ವಿಕ್ರಮ್" ಚಿತ್ರಗಳು ಸೇರಿದಂತೆ ಕೆಲವು ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಸ್ ನಂದೀಶ್ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಹಾಗೂ ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಸಂಭಾಷಣೆ ರಘು ನಿಡುವಳ್ಳಿ ಅವರದು. ಉದ್ಯಮಿ ಲೋಹಿತ್ ನಿರ್ಮಾಣ ಮಾಡುತ್ತಿದ್ದಾರೆ. ರಿಷಿ ಅವರಿಗೆ ನಾಯಕಿಯಾಗಿ ಪ್ರಿಯಾಂಕ ಕುಮಾರ್ ಅಭಿನಯಿಸುತ್ತಿದ್ದಾರೆ.

"ರುದ್ರ ಗರುಡ ಪುರಾಣ" ವಿಭಿನ್ನ ಕಥಾಹಂದರ ಹೊಂದಿರುವ ಚಿತ್ರ. ಇಂದಿನಿಂದ ಚಿತ್ರೀಕರಣ ಆರಂಭವಾಗಲಿದೆ.  ಸಿನಿಮಾ ಜನರ ಮೇಲೆ ಉತ್ತಮ ಪ್ರಭಾವ ಬೀರಬೇಕು. ಅಂತಹ ಸಿನಿಮಾವನ್ನು ಜನರಿಗೆ ಕೊಡುವ ಆಸೆ ನನಗೆ.  
2022 UPSC ಪರೀಕ್ಷೆಯಲ್ಲಿ 265ನೇ ರ‍್ಯಾಂಕ್‌ ಪಡೆದಿರುವ ಮೈಸೂರು ಮೂಲದ ಕೆ‌.ಸೌರಭ್  ಅವರು ಸಂದರ್ಶನವೊಂದರಲ್ಲಿ ನನಗೆ ಪುನೀತ್ ರಾಜಕುಮಾರ್ ಅಭಿನಯದ "ಪೃಥ್ವಿ" ಚಿತ್ರ ಪ್ರೇರಣೆ ಎಂದಿದ್ದಾರೆ. 

"ಪೃಥ್ವಿ" ಚಿತ್ರ ಸೌರಭ್ ಅವರಿಗಷ್ಟೆ ಅಲ್ಲ. ಸಾಕಷ್ಟು ಜನರಿಗೆ ಸ್ಪೂರ್ತಿಯಾಗಿದೆ‌.  ನಾನು ಆ ಚಿತ್ರದ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದೆ.‌ ನಾವು ಮಾಡುವ ಚಿತ್ರ, ಈ ರೀತಿ ಜನರಿಗೆ ತಲುಪಿದಾಗ ಮುಂದೆ ಇಂತಹ ಹೆಚ್ಚುಹೆಚ್ಚು ಚಿತ್ರಗಳನ್ನು ಮಾಡುವ ಹುಮ್ಮಸ್ಸು ನಿರ್ದೇಶಕನಿಗೆ ಹೆಚ್ಚಾಗುತ್ತದೆ  ಎಂದು ನಿರ್ದೇಶಕ ಕೆ.ಎಸ್ ನಂದೀಶ್ ತಿಳಿಸಿದರು.
ನಾನು ಈ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ಈ ಹಿಂದೆ "ಕವಲುದಾರಿ" ಚಿತ್ರದಲ್ಲೂ ಪೊಲೀಸ್ ಅಧಿಕಾರಿಯ ಪಾತ್ರ ಮಾಡಿದ್ದೆ. ಹಾಗಾಗಿ, ಅದೇ ಜಾನರ್ ನ ಇನ್ನೊಂದು ಚಿತ್ರ ಮಾಡುವುದಕ್ಕೆ ಇಷ್ಟವಿರಲಿಲ್ಲ.

ಇದನ್ನೂ ಓದಿ: Abhishek - Aviva: ಅಂಬರೀಷ್ ಮನೆಯಲ್ಲಿ ಅಭಿ ಮದುವೆ ಶಾಸ್ತ್ರಗಳು ಆರಂಭ ; ಮದುವೆ ಸಂಭ್ರಮ ಬಲು ಜೋರು..!

ಆದರೆ ನಂದೀಶ್ ಅವರು ಈ ಚಿತ್ರದ ಕಥೆ ಕೇಳಿದಾಗ ಬಹಳ ಇಷ್ಟವಾಯಿತು. ಎರಡೂ ಚಿತ್ರಗಳ ಮಧ್ಯೆ ಯಾವುದೇ ಹೋಲಿಕೆ ಇಲ್ಲ.  ಇದರಲ್ಲಿ ನಾನು ಪೊಲೀಸ್ ಅಧಿಕಾರಿಯಾದರೂ ಬಹಳ ವಿಭಿನ್ನವಾಗಿದೆ.  ಜೊತೆಗೆ ಕರ್ಮ, ಪಾಪ, ಪುಣ್ಯಕ್ಕೆ ಸಂಬಂಧಿಸಿದ ಗರುಡ ಪುರಾಣದ ಸಾಕಷ್ಟು ಅಂಶಗಳು ಈ ಚಿತ್ರದಲ್ಲಿದೆ.  ಈ ಚಿತ್ರಕ್ಕೆ "ಗರುಡ ಪುರಾಣ" ಎಂದು ಹೆಸರಿಡಲು ನಿರ್ಧರಿಸಿದ್ದೆವು. ಚಿತ್ರದಲ್ಲಿ ನನ್ನ ಪಾತ್ರದ ಹೆಸರು ರುದ್ರ. ಹಾಗಾಗಿ "ರುದ್ರ ಗರುಡ ಪುರಾಣ" ಅಂತ ಶೀರ್ಷಿಕೆ ಇಡಲಾಗಿದೆ. ಚಿತ್ರಕ್ಕೆ ಚಾಲನೆ ನೀಡಿದ ನೀನಾಸಂ ಸತೀಶ್ ಅವರಿಗೆ ಧನ್ಯವಾದ ಎಂದರು ನಾಯಕ ರಿಷಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News