ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ನಟ ನಿಖಿಲ್ ಗೆ ಆಹ್ವಾನ

Nikhil Kumaraswamy Invited To Ayodhya: ಇಂದು ನಟ ನಿಖಿಲ್ ಕುಮಾರ್ ಅವರಿಗೆ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ.

Written by - Chetana Devarmani | Last Updated : Jan 10, 2024, 12:48 PM IST
  • ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ನಟ ನಿಖಿಲ್ ಗೆ ಆಹ್ವಾನ
  • ಹುಟ್ಟುಹಬ್ಬದಂದು ರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ನಿಖಿಲ್ ಭಾಗಿ
  • ರಾಮ ಮಂದಿರ ಉದ್ಘಾಟನೆಗೆ ನಿಖಿಲ್ ಗೆ ಅಧಿಕೃತ ಆಹ್ವಾನ
ಅಯೋಧ್ಯೆ ರಾಮ ಮಂದಿರ ಉದ್ಘಾಟನೆಗೆ ನಟ ನಿಖಿಲ್ ಗೆ ಆಹ್ವಾನ  title=

Nikhil Kumaraswamy: ಜನವರಿ 22 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರದ ಉದ್ಘಾಟನೆ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಗಣ್ಯರು, ರಾಜಕಾರಣಿಗಳು ಸೇರಿದಂತೆ ಚಿತ್ರರಂಗದವರು ಭಾಗಿಯಾಗಲಿದ್ದಾರೆ. 

ದಕ್ಷಿಣದ ಕೆಲವೇ ಕೆಲವು ನಟರಿಗೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಸಿಕ್ಕಿದೆ. ಈಗಾಗಗಲೇ ಸಾಕಷ್ಟು ನಟರಿಗೆ ಆಹ್ವಾನ ಸಿಕ್ಕಿದೆ ಅನ್ನೋ ಸುದ್ದಿ ಕೇಳಿ ಬರ್ತಿದೆ ಆದರೆ ಇಂದು ನಟ ನಿಖಿಲ್ ಕುಮಾರ್ ಅವರಿಗೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಅಧಿಕೃತ ಆಹ್ವಾನ ಸಿಕ್ಕಿದೆ.

ನಟ ನಿಖಿಲ್ ಕುಮಾರಸ್ವಾಮಿ ಹಾಗೂ ಇಡೀ ಕುಟುಂಬಕ್ಕೆ ರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಆಹ್ವಾನ ಪತ್ರಿಕೆ ನೀಡಿದ್ದು, ಜನವರಿ 22ರಂದು ನಡೆಯಲಿರುವ ಶ್ರೀರಾಮದೇವರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಕುಟುಂಬಸ್ಥರು ಭಾಗಿಯಾಗಲಿದ್ದಾರೆ.

ಇದನ್ನೂ ಓದಿ: ಸಲ್ಮಾನ್ ಖಾನ್ ಸುತ್ತಲೂ ಇರುತ್ತೆ ಇಷ್ಟೊಂದು ಬಿಗಿ ಭದ್ರತೆ, ಅವರನ್ನ ಮುಟ್ಟೋದು ಸಹ ಅಸಾಧ್ಯ! 

ಇನ್ನು ವಿಶೇಷ ಅಂದ್ರೆ ಜನವರಿ 22 ರಂದು ನಟ ನಿಖಿಲ್ ಕುಮಾರಸ್ವಾಮಿ ತಮ್ಮ ಹುಟ್ಟುಹಬ್ಬವನ್ನ ಆಚರಣೆ ಮಾಡಿಕೊಳ್ಳಲಿದ್ದಾರೆ, ಹಾಗಾಗಿ ಈ ಭಾರಿಯ ಹುಟ್ಟುಹಬ್ಬ ಮತ್ತಷ್ಟು ವಿಶೇಷವಾಗಲಿದ್ದು ಅಯೋದ್ಯೆಯ ಶ್ರೀ ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಮೂಲಕ ಹುಟ್ಟುಹಬ್ಬವನ್ನ ಅರ್ಥಪೂರ್ಣವಾಗಿ ಆಚರಣೆ ಮಾಡಿಕೊಳ್ಳಲಿದ್ದಾರೆ.

ಶ್ರೀ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಂದಿರೋ ವಿಚಾರವಾಗಿ ನಟ ನಿಖಿಲ್ ಕುಮಾರ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದು ರಾಮ ಜನ್ಮಭೂಮಿ ಟ್ರಸ್ಟ್ ಗೆ ಈ ಮೂಲಕ ಧನ್ಯವಾದ ತಿಳಿಸಿದ್ದಾರೆ. ರಾಮಮಂದಿರದ ಸೇವಾ ಕೈಂಕರ್ಯದಲ್ಲಿ ಭಾಗಿಯಾಗುವುದು ಖುಷಿಯ ವಿಚಾರ ಎಂದು ತಿಳಿಸಿದ್ದಾರೆ. 

ಇದನ್ನೂ ಓದಿ: ಚೇಫ್ ಆದ ದಿಯಾ ಪೃಥ್ವಿ ಅಂಬಾರ್.. ಬಂತು ‘ಜೂನಿ’ ಕ್ಯಾರೆಕ್ಟರ್ ಟೀಸರ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News