Prabhas Salaar movie update : ಪ್ಯಾನ್ ಇಂಡಿಯಾ ಸ್ಟಾರ್ ಪ್ರಭಾಸ್ ನಟನೆಯ ಕೆಜೆಎಫ್‌ ಖ್ಯಾತಿಯ ಪ್ರಶಾಂತ್ ನೀಲ್ ನಿರ್ದೇಶನದ ಚಿತ್ರ 'ಸಲಾರ್'. ಸಧ್ಯ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಪ್ರಿ-ಪ್ರೊಡಕ್ಷನ್ ವರ್ಕ್‌ನಲ್ಲಿ ಬ್ಯುಸಿಯಾಗಿದೆ. ಇತ್ತೀಚಿಗಷ್ಟೆ ಈ ಸಿನಿಮಾದ ಮೊದಲ ಭಾಗ 'ಸಾಲಾರ್ - ಸೀಜ್ ಫೈರ್' ಬಿಡುಗಡೆ ದಿನಾಂಕವನ್ನು ಅಧಿಕೃತವಾಗಿ ಘೋಷಿಸಲಾಯಿತು. ಈ ಅದ್ಧೂರಿ ಮಾಸ್ ಆಂಡ್‌ ಆಕ್ಷನ್ ಚಿತ್ರ ಡಿಸೆಂಬರ್ 22 ರಂದು ಥಿಯೇಟರ್‌ಗೆ ಬರಲಿದೆ. 


COMMERCIAL BREAK
SCROLL TO CONTINUE READING

ಹೌದು.. 'ಸಲಾರ್' ಟೀಸರ್ ಬಿಡುಗಡೆಯಾದಾಗಿನಿಂದಲೂ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿದೆ. 'ಸಲಾರ್‌' ಪ್ರಪಂಚವನ್ನು ಯಾವಾಗ ನೋಡುತ್ತೇವೆ ಅಂತ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಅಲ್ಲದೆ, ಸಿನಿಮಾದ ಮೇಲೆ ಡಾರ್ಲಿಂಗ್‌ ಅಭಿಮಾನಿಗಳು ಭಾರಿ ನಿರೀಕ್ಷೆ ಇಟ್ಟುಕೊಂಡಿದ್ದಾರೆ. 'ಬಾಹುಬಲಿ' ನಂತರ ಪ್ರಭಾಸ್‌ಗೆ ಆ ಮಟ್ಟದಲ್ಲಿ ಯಶಸ್ಸು ಪಡೆಯಲು ಸಾಧ್ಯವಾಗಿಲ್ಲ. ಸದ್ಯದಲ್ಲೇ ಬಿಡುಗಡೆಯಾಗಲಿರುವ 'ಸಲಾರ್' ಆ ಕೊರತೆಯನ್ನು ತುಂಬುವ ನಿರೀಕ್ಷೆಯಿದೆ.


ಇದನ್ನೂ ಓದಿ:  ಮದುವೆಗೆ ಬಂದಿದ್ದ ಅತಿಥಿಗಳಿಗೆ ಕರ್ಚೀಫ್ ನೀಡಿದ್ರಂತೆ ಪರಿಣಿತಿ..! ಕಾರಣ ಕೇಳಿದ್ರೆ ಬಿದ್ದು ಬಿದ್ದು ನಗ್ತೀರಾ..


ಅಭಿಮಾನಿಗಳ ನಿರೀಕ್ಷೆಯಂತೆ ನಿರ್ದೇಶಕ ಪ್ರಶಾಂತ್ ನೀಲ್ ಹೊಸ ಐಡಿಯಾ ಜೊತೆ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ಅಕ್ಟೋಬರ್ 23 ರಂದು 'ಸಾಲಾರ್' ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆಯಂತೆ. ಈ ಟ್ರೈಲರ್ ನಿಂದಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಾಗುವ ಸಾಧ್ಯತೆ ಇದೆ. ಅದಾದ ನಂತರ ಸಿನಿಮಾ ಬಿಡುಗಡೆಗೂ ಕೆಲವು ದಿನಗಳ ಮುನ್ನ ಮತ್ತೊಂದು ಟ್ರೈಲರ್‌ ಕೂಡ ಪ್ರೇಕ್ಷಕರ ಮುಂದೆ ಬರುವ ನಿರೀಕ್ಷೆ ಇದೆ. ಈ ಮೂಲಕ ಪ್ರಶಾಂತ್ ನೀಲ್ ಬಾಕ್ಸ್‌ ಆಫೀಸ್‌ನಲ್ಲಿ ದಾಖಲೆ ಸೃಷ್ಟಿಸಲು ಮಾಸ್ಟರ್‌ ಪ್ಲಾನ್‌ ಮಾಡುತ್ತಿದ್ದಾರೆ ಎನ್ನಲಾಗಿದೆ.


ಸಲಾರ್‌ ಸಿನಿಮಾದಲ್ಲಿ ಪ್ರಭಾಸ್‌ಗೆ ಜೊತೆಯಾಗಿ ಶ್ರುತಿ ಹಾಸನ್ ನಟಿಸಿದ್ದಾರೆ. ಹೊಂಬಾಳೆ ಫಿಲಂಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂಧೂರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ತೆಲುಗು ಅಲ್ಲದೆ ಹಿಂದಿ, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ರವಿ ಬಸ್ರೂರ್ ಸಂಗೀತ ನೀಡಿರುವ ಈ ಚಿತ್ರದಲ್ಲಿ ಹಿರಿಯ ನಟ ಜಗಪತಿ ಬಾಬು ಹಾಗೂ ಮಲಯಾಳಂ ಸೂಪರ್ ಹೀರೋ ಪೃಥ್ವಿರಾಜ್ ಕುಮಾರ್ ಖಳನಾಯಕನಾಗಿ ನಟಿಸುತ್ತಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.