ಚಾಮರಾಜನಗರ: ಬಹುಭಾಷಾ ನಟ ಪ್ರಕಾಶ್ ರಾಜ್ ತಮ್ಮ ಪಿಆರ್ ಎಫ್ ಫೌಂಡೇಶನ್ ಮೂಲಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾಮಗೆರೆ ಹೋಲಿಕ್ರಾಸ್ ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಟ್ಟಿದ್ದಾರೆ.
ಇದನ್ನೂ ಓದಿ: "ಯಾರ್ಯಾರೋ ನಾನೇ ಸಿಎಂ ನಾನೇ ಸಿಎಂ ಎಂಬ ಭ್ರಮೆಯಲ್ಲಿದ್ದಾರೆ"
ಚಾಮರಾಜನಗರ ಜಿಲ್ಲೆಯಲ್ಲಿ ಕಿಚ್ಚಗುತ್ತಿ ಮಾರಮ್ಮನ ದೇವಾಲಯದಲ್ಲಿ ವಿಷ ಪ್ರಸಾದ ದುರಂತ ಸಮಯದಲ್ಲಿ ಗಣನೀಯ ಆರೋಗ್ಯ ಸೇವೆಯನ್ನು ಹೋಲಿಕ್ರಾಸ್ ಆಸ್ಪತ್ರೆ ಕೊಟ್ಟಿದೆ, ಗುಡ್ಡಗಾಡು ಪ್ರದೇಶಗಳಿಗೆ ಅನುಕೂಲವಾಗಲೆಂದು ಆಸ್ಪತ್ರೆಗೆ ಆ್ಯಂಬುಲೆನ್ಸ್ ಕೊಡಲಾಗುತ್ತಿದೆ ಎಂದು ಪ್ರಕಾಶ್ ರಾಜ್ ತಿಳಿಸಿದ್ದಾರೆ.
ಇದನ್ನೂ ಓದಿ: ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ 3 ಕಾರ್ಮಿಕರು ಸಾವು
ನಮ್ಮ ಆಸ್ಪತ್ರೆಯ ಸೇವೆ ಗುರುತಿಸಿ ಇಂದು ನೀಡಿರುವ ತುರ್ತು ವಾಹನದ ಸದುಪಯೋಗ ಕಾಡಂಚಿನ ಗುಡ್ಡ ಪ್ರದೇಶದ ಜನರಿಗೆ ಸಿಗಲಿದೆ ಜೊತೆಗೆ ಈ ತುರ್ತು ವಾಹನ ನೀಡಿದ ಪ್ರಕಾಶ್ ರೈ ಅವರಿಗೆ ಅಭಿನಂದನೆಗಳು ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಸಿಸ್ಟರ್ ಡೆಲಿನಾ ಅಭಿನಂದನೆ ಸಲ್ಲಿಸಿದ್ದಾರೆ.
ಆ್ಯಂಬುಲೆನ್ಸ್ ಹಸ್ತಾಂತರ ಬೆಂಗಳೂರಿನಲ್ಲಿ ನಡೆದಿದ್ದು ಅರಣ್ಯ ಪ್ರದೇಶಕ್ಕೆ ಅನೂಕುಲವಾಗಲೆಂದು 4×4 ಪೋರ್ಸ್ ವಾಹನ ಕೊಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.