Nidra devi Next Door Cinema: ಸುರಮ್ ಮೂವೀಸ್ ನಿರ್ಮಾಣದ ಯುವ ನಟ ಪ್ರವೀರ್ ಶೆಟ್ಟಿ ನಾಯಕನಾಗಿ ನಟಿಸಿರುವ ನಿದ್ರಾದೇವಿ Next Door ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ರಾಜರಾಜೇಶ್ವರಿ ನಗರದಲ್ಲಿ ಕೊನೆಯ ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಈ ವೇಳೆ ಚಿತ್ರದ ಎಲ್ಲಾ ಕಲಾವಿದರು, ತಂತ್ರಜ್ಞರು ಹಾಗೂ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಕೂಡ ಭಾಗಿಯಾಗಿದ್ದರು.
ಇದನ್ನೂ ಓದಿ:ಭಾರತ-ಬಾಂಗ್ಲಾದೇಶ ಟಿ20 ಸರಣಿ ಈತನ ಕೊನೆ ಪಂದ್ಯ- ನಿವೃತ್ತಿ ಘೋಷಿಸಿದ 38ರ ಹರೆಯದ ಆಲ್‌ರೌಂಡರ್
ಚಿತ್ರದಲ್ಲಿ ಪ್ರವೀರ್ ಶೆಟ್ಟಿ, ರಿಷಿಕಾ ನಾಯಕ್ ನಾಯಕ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಹಾಗು ಶ್ರುತಿ ಹರಿಹರನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸುಧಾರಾಣಿ, ಶ್ರೀವತ್ಸ, ಐಶ್ವರ್ಯ ಗೌಡ, ಅನೂಪ್, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ.
ನಿರ್ಮಾಪಕರಾದ ಜಯರಾಮ್ ದೇವಸಮುದ್ರರವರು ತಮ್ಮ ಸುರಮ್ ಮೂವೀಸ್ ಬ್ಯಾನರ್ನಡಿಯಲ್ಲಿ ಈ ಚಿತ್ರ ನಿರ್ಮಿಸಿದ್ದು, ಈ ಹಿಂದೆ ಇದೇ ಸಂಸ್ಥೆಯಲ್ಲಿ "ರೇವ್ ಪಾರ್ಟಿ" ಮತ್ತು "ಎಂಗೇಜ್ಮೆಂಟ್" ಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ನಿದ್ರಾದೇವಿ Next Door ಚಿತ್ರವೂ, ಅವರ ಬ್ಯಾನರ್ನಲ್ಲಿ ಬರುತಿರುವ ಒಂದು ವಿಭಿನ್ನ ಚಿತ್ರ, ಅಂದುಕೊಂಡಂತೆ ಎಲ್ಲಾ ಶೆಡ್ಯೂಲ್ ಅದ್ಭುತವಾಗಿ ಮೂಡಿಬಂದಿದೆ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.
ಚಿತ್ರದ ನಿರ್ದೇಶಕ ಸುರಾಗ್ ಸಾಗರ್ ಮಾತನಾಡಿ, "ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ಶುರುವಾಗಿದೆ. ಬೆಂಗಳೂರಿನ HMT ನಲ್ಲಿ ಒಂದು ಪ್ರತ್ಯೇಕ ಸೆಟ್ ನಲ್ಲಿ ಚಿತ್ರದ ಒಂದು ಮುಖ್ಯ ಭಾಗವನ್ನು ಶೂಟ್ ಮಾಡಿದ್ದು ಅದ್ಭುತವಾಗಿ ಈ ಚಿತ್ರಕ್ಕೆ ಮೂಡಿ ಬಂದಿದೆ" ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.
ಚಿತ್ರ ತಂಡ ಕಳೆದ ಇದೇ ವರ್ಷ ಮಾರ್ಚ್ ತಿಂಗಳಲ್ಲಿ ಈ ವಿಭಿನ್ನ ಟೈಟಲ್‌ನೊಂದಿಗೆ, ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆಸಿದ್ದು, ಕ್ರೇಜಿಸ್ಟಾರ್ ರವಿಚಂದ್ರನ್ ನಾಯಕ ಪ್ರವೀರ್ ಶೆಟ್ಟಿಯ ಹೊಸ ಪ್ರಯತ್ನಕ್ಕೆ ಸಾಥ್ ಕೊಟ್ಟರು. ಚಿತ್ರಕ್ಕೆ ಕ್ಲಾಪ್ ಮಾಡಿದ ಕನಸುಗಾರ ಇಡೀ ತಂಡಕ್ಕೆ ಶುಭ ಹಾರೈಸಿದ್ದರು. ಈ ಚಿತ್ರಕ್ಕೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಊಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್ ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ (ಯುವ ಸಿನಿಮಾ ಖ್ಯಾತಿ) ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.