HAL ಏರ್ಪೋರ್ಟ್ ನಲ್ಲಿ ಪ್ರಧಾನಿ ಮೋದಿಯೊಂದಿಗೆ ನಟ ಪುನೀತ್ ರಾಜ್ ಕುಮಾರ್
ಡಾ. ರಾಜ್ ಚರಿತ್ರೆಯನ್ನು ಪ್ರಧಾನಿ ನರೇಂದ್ರ ಮೋದಿಗೆ ಉಡುಗೊರೆಯಾಗಿ ನೀಡಿದ ಪವರ್ ಸ್ಟಾರ್.
ಬೆಂಗಳೂರು: ಕಳೆದ ರಾತ್ರಿ ನಗರದ HAL ವಿಮಾನನಿಲ್ದಾಣದಲ್ಲಿ ಕನ್ನಡ ಚಿತ್ರರಂಗದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ತಮ್ಮ ಪತ್ನಿ ಅಶ್ವಿನಿ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ Dr. Rajkumar: The person behind the personality ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು.
ನನ್ನ ಪತ್ನಿ ಅಶ್ವಿನಿ ಅವರೊಂದಿಗೆ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಿದ್ದು ಒಂದು ಅದ್ಭುತ ಅವಕಾಶ ಎಂದು ಪುನೀತ್ ತಮ್ಮ ಫೇಸ್ ಬುಕ್ ಖಾತೆ ಮೂಲಕ ತಿಳಿಸಿದ್ದಾರೆ.