ಶಿವಮೊಗ್ಗ : ಖ್ಯಾತ ನಟ ಸಾಯಿಕುಮಾರ್ ಅವರು ಇತ್ತೀಚಿಗೆ ರಾಷ್ಟ್ರಕವಿ ಕುವೆಂಪು ಅವರ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಭೇಟಿ ನೀಡಿದ್ದಾರೆ. ಆ ಸುಂದರ ಸ್ಥಳಕ್ಕೆ ಭೇಟಿ ನೀಡಿ ತಮ್ಮ ಸುಂದರ ಅನುಭವಗಳನ್ನು ಸಾಯಿಕುಮಾರ್ ಹಂಚಿಕೊಂಡಿದ್ದಾರೆ.


COMMERCIAL BREAK
SCROLL TO CONTINUE READING

ಇತ್ತೀಚಿಗೆ ತೀರ್ಥಹಳ್ಳಿಯಿಂದ ರಾಷ್ಟ್ರಕವಿ ಕುವೆಂಪು ಅವರ ಮನೆ ಹಾಗು ಕವಿಶೈಲಕ್ಕೆ ಭೇಟಿ ನೀಡಿದ್ದೆ. ಅಬ್ಬಾ ಆ ಸ್ಥಳವನ್ನು ಬಣ್ಣಿಸಲು ಪದಗಳು ಸಾಲದು. ನಾನು ನನ್ನ ಸಿನಿಮಾಗಳಲ್ಲಿ ಕುವೆಂಪು ಅವರ ʼಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರುʼ, ʼಕನ್ನಡಕ್ಕೆ ಹೋರಾಡು ಕನ್ನಡದ ಕಂದʼ, ʼಬಾರಿಸು ಕನ್ನಡ ಡಿಂಡಿಮವʼ ಮುಂತಾದ ಕವನಗಳನ್ನು ಹಾಗೂ ʼಜಯ ಭಾರತ ಜನನಿಯ ತನುಜಾತೆʼ ನಾಡಗೀತೆಯನ್ನು ಹಾಡುತ್ತಿರುತ್ತೇನೆ.


ಇದನ್ನೂ ಓದಿ: ಗಣರಾಜ್ಯೋತ್ಸವದಂದು ಓಟಿಟಿಗೆ ಲಗ್ಗೆಯಿಟ್ಟ ಸಪ್ತ ಸಾಗರದಾಚೆ ಎಲ್ಲೋ ಸೈಡ್‌-ಬಿ!


ಆದರೆ ಈವರೆಗೂ ಕುಪ್ಳಳ್ಳಿಗೆ ಹೋಗಿರಲಿಲ್ಲ. ಇತ್ತೀಚಿಗೆ ಕುಪ್ಪಳ್ಳಿಯ ಕವಿಮನೆ ಹಾಗೂ ಕವಿಶೈಲಕ್ಕೆ ಹೋಗಿದ್ದೆ. ಪ್ರಕೃತಿಯ ಮಡಿಲಲ್ಲಿರುವ ಆ ಪುಣ್ಯಸ್ಥಳವನ್ನು ನೋಡಿ ಪುಳಕಿತನಾದೆ. ಅವರು ಬಳಸುತ್ತಿದ್ದ ಲೇಖನಿ ಹಾಗೂ ಪುಸ್ತಕ ಮುಂತಾದವುಗಳನ್ನು ಕಂಡು ಧನ್ಯನಾದೆ. ನಾನು ಸುಮಾರು ಮೂವತ್ತು ವರ್ಷಗಳಿಂದ ಕರ್ನಾಟಕದಲ್ಲಿ ಕನ್ನಡ ಚಿತಗಳನ್ನು ಮಾಡುತ್ತಾ ಬಂದಿದ್ದರೂ ಕುಪ್ಪಳ್ಳಿಯನ್ನು ನೋಡುವ ಯೋಗ ಬಂದಿರಲಿಲ್ಲ. ಹಾಗಾಗಿ ವಿದ್ಯಾರ್ಥಿಗಳು ಹಾಗೂ ಯುವಕರು ಕುಪ್ಪಳ್ಳಿಗೆ ಭೇಟಿ ನೀಡಿ. ಅಲ್ಲಿನ ಸೊಬಗನ್ನ ಕಣ್ತುಂಬಿಕೊಳ್ಳ ಎನ್ನುತ್ತಾರೆ ನಟ ಸಾಯಿಕುಮಾರ್.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.