Shiva Rajkumar: ಹ್ಯಾಟ್ರಿಕ್‌ ಹಿರೋ ಶಿವಣ್ಣ ಅವರ ಆರೋಗ್ಯದ ಕುರಿತು ಅಮೆರಿಕಾ ವೈದ್ಯರು ವಿಡಿಯೋ ಕಾಲ್‌ ಮೂಲಕ ಸ್ಪಷ್ಟನೆ ನೀಡಿದ್ದಾರೆ.. ಈ ಬಗ್ಗೆ ಮಾತನಾಡಿದ ಅವರು "ದೇವರು ಹಾಗೂ ಎಲ್ಲರ ಹಾರೈಕೆಯಿಂದ ಶಸ್ತ್ರಚಿಕಿತ್ಸೆ ಯಸಸ್ವಿಯಾಗಿದೆ.. ಶಿವಣ್ಣ ಅವರಿಗೆ ಸರ್ಜರಿಗೆ ಉತ್ತಮವಾಗಿ ಸ್ಪಂಧಿಸಿದ್ದಾರೆ.. ಆಪರೇಷನ್‌ ನಂತರ ಅವರ ಆರೋಗ್ಯದಲ್ಲಿ ಯಾವುದೇ ಏರುಪೇರು ಉಂಟಾಗಿಲ್ಲ.. ಆರೋಗ್ಯ ಸ್ಥಿರವಾಗಿದೆ.. ಆದಷ್ಟು ಬೇಗ ಅವರು ಚೇತರಿಸಿಕೊಳ್ಳುವ ನಿರೀಕ್ಷೆಯಲ್ಲಿದ್ದೇವೆ" ಎಂದು ವೈದ್ಯರು ಅಧಿಕೃತ ಮಾಹಿತಿ ನೀಡಿದ್ದಾರೆ.. 
 
ಇತ್ತ ಶಿವಣ್ಣ ಅವರ ಶಸ್ತ್ರಚಿಕಿತ್ಸೆ ನಡೆಸಿದ ಈ ಕುರಿತಾಗಿ ಪತ್ರಿಕಾ ಪ್ರಕಟನೆಯನ್ನು ಬಿಡುಗಡೆ ಮಾಡಲಾಗಿದ್ದು, "ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ" 


COMMERCIAL BREAK
SCROLL TO CONTINUE READING

ಇದನ್ನೂ ಓದಿ-ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್; ಅಸ್ಪೃಶ್ಯತೆಯ ವಿರುದ್ಧ ಹೋರಾಡಿದ ಸಮಾನತೆಯ ಹರಿಕಾರ!!


ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿಗಳ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನವನ್ನು ಪಡೆಯುತ್ತಿದ್ದಾರೆ.  


ಇದನ್ನೂ ಓದಿ-ಹೇರ್‌ ಫಾಲ್‌ ಸಮಸ್ಯೆಗೆ ರಾಮಬಾಣ.. ಮನೆಯ ಮುಂದೆಯೇ ಸಿಗುವ ಈ ಹೂವನ್ನ ಹೀಗೆ ಬಳಸಿದ್ರೆ ಜನ್ಮದಲ್ಲೆ ಉದುರಲ್ಲ ಕೂದಲು! 


ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ.  ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು. ನಿಮ್ಮ ಬೆಂಬಲಕ್ಕೆ ಧನ್ಯವಾದಗಳು" ಎಂದು ಬರೆಯಲಾಗಿದೆ.. 


ಇನ್ನು ಸದ್ಯ ಶಸ್ತ್ರಚಿಕಿತ್ಸೆಗೆ ಒಳಗಾದ ಶಿವಣ್ಣ ಅವರು ಜನವರಿ 26ಕ್ಕೆ ಭಾರತಕ್ಕೆ ಹಿಂದಿರುಗಲಿದ್ದಾರೆ.. ಈ ವೇಳೆ ಅಭಿಮಾನಿಗಳೆಲ್ಲ ತಮ್ಮ ನೆಚ್ಚಿನ ನಟ ಬೇಗ ಗುಣಮುಖರಾಗಿ ಬರಲಿ ಎಂದು ರಾಜ್ಯದ ಹಲವೆಡೆ ಪೂಜೆ, ಹೋಮ ಹವನಗಳನ್ನೆಲ್ಲ ನಡೆಸಿದ್ದಾರೆ.. 
 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.