Sonu Sood Viral video : ತಂತ್ರಜ್ಞಾನ ಪ್ರಗತಿಯಿಂದಾಗಿ ಸಾಮಾನ್ಯರಿಂದ ಹಿಡಿದು ಸಿನಿಮಾ ಸೆಲೆಬ್ರಿಟಿಗಳವರೆಗೆ ಅನೇಕರು ಅನೇಕ ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಇತ್ತೀಚಿಗೆ ಡೀಪ್ ಫೇಕ್ ವಿಡಿಯೋ ಎಂಬ ತಂತ್ರಜ್ಞಾನವೊಂದು ಸೆಲೆಬ್ರಿಟಿಗಳನ್ನು ಬೆಚ್ಚಿಬೀಳಿಸುತ್ತಿದೆ. ಈ ಡೀಪ್ ಫೇಕ್ ನಿಂದಾಗಿ ಇನ್ನೂ ಹಲವು ನಾಯಕಿಯರು ಸಮಸ್ಯೆ ಎದುರಿಸುತ್ತಿದ್ದಾರೆ. ಇತ್ತೀಚಿಗೆ ಆ ಪಟ್ಟಿಗೆ ಒಬ್ಬ ನಟ ಕೂಡ ಸೇರ್ಪಡೆಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಹೌದು.. ರಿಯಲ್‌ ಹೀರೋ ಸೋನು ಸೂದ್ ಡೀಪ್‌ ಫೇಕ್‌ಗೆ ಬಲಿಯಾಗಿದ್ದಾರೆ.. ಕಷ್ಟದಲ್ಲಿರುವವರಿಗೆ ಸಹಾಯ ಮಾಡಲು ಸೋನು ಸೂದ್ ಯಾವಾಗಲೂ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯರಾಗಿದ್ದಾರೆ. ಇಂತಹ ಒಳ್ಳೆಯತನವನ್ನು ದುರುಪಯೋಗ ಪಡಿಸಿಕೊಂಡಿರುವ ಕೆಲ ಕಿಡಿಗೇಡಿಗಳು ನಕಲಿ ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ. ಈ ವಿಷಯವನ್ನು ಸ್ವತಃ ಸೋನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ:ಫೆಬ್ರವರಿಯಲ್ಲಿ ರಶ್ಮಿಕಾ ಮಂದಣ್ಣ ಜೊತೆ ನಿಶ್ಚಿತಾರ್ಥ ಫಿಕ್ಸ್..? ಮದುವೆ ಸುದ್ದಿಗೆ ಪ್ರತಿಕ್ರಿಯಿಸಿದ ವಿಜಯ್‌ ದೇವರಕೊಂಡ!


ಇನ್ನು ವಿಡಿಯೋದಲ್ಲಿ ಚಾಟಿಂಗ್ ಮತ್ತು ವಿಡಿಯೋ ಕಾಲ್ ಮೂಲಕ ವ್ಯಕ್ತಿಯೊಬ್ಬ ಸೋನು ಸೂದ್ ಎಂದು ನಂಬಿಸಿ ಜನರಿಂದ ಹಣ ಪಡೆಯುತ್ತಿರುವ ದೃಶ್ಯವಿದೆ. ಅನೇಕ ಅಮಾಯಕರು ಈ ಬಲೆಯಲ್ಲಿ ಸಿಲುಕಿದ್ದಾರೆ.  ವಿಡಿಯೋ ಕಾಲ್‌ ಮಾಡಿ ಕಷ್ಟದಲ್ಲಿರುವ ಕುಟುಂಬಕ್ಕೆ ಸಹಾಯ ಮಾಡಲು ಜನರಿಂದ ಹಣ ಕೇಳಲಾಗುತ್ತಿದೆ. ಸಧ್ಯ ಸೋನು ಸೂದ್ ಟ್ವಿಟ್ಟರ್‌ನಲ್ಲಿ ಈ ವೀಡಿಯೊವನ್ನು ಹಂಚಿಕೊಂಡು ಅಭಿಮಾನಿಗಳನ್ನು ಎಚ್ಚರಿಸಿದ್ದಾರೆ. 


ಸೋನು ಸೂದ್ ಪೋಸ್ಟ್ ಮಾಡಿರುವ ಈ ವಿಡಿಯೋ ನೋಡಿದ ನೆಟ್ಟಿಗರು ಒಂದು ಕ್ಷಣ ಶಾಕ್‌ ಆಗಿದ್ದಾರೆ. ವಿಡಿಯೋದಲ್ಲಿ ಅವರಂತೆ ಕಾಣುವ ವ್ಯಕ್ತಿ ನೋಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸೋನು ಪೋಸ್ಟ್ ಮಾಡಿರುವ ಈ ವಿಡಿಯೋಗೆ ಕೆಲವು ನೆಟ್ಟಿಗರು ಕಾಮೆಂಟ್‌ ಮಾಡಿದ್ದು, ತಮಗೂ ಇಂತಹ ಕರೆಗಳು ಬಂದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಈ ಮಾಹಿತಿ ನೀಡಿ ಎಲ್ಲರನ್ನೂ ಎಚ್ಚರಿಸಿದ್ದಕ್ಕಾಗಿ ಅಭಿಮಾನಿಗಳು ಅವರಿಗೆ ಧನ್ಯವಾದ ತಿಳಿಸಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.