)
actor srikanth in drug case: ಮಾದಕ ದ್ರವ್ಯ ಮಾರಾಟಗಾರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಮೇಲೆ ಖ್ಯಾತ ನಟನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ವಿಚಾರಣೆಗಾಗಿ ಪೊಲೀಸರ ಮುಂದೆ ಹಾಜರಾಗುವಂತೆ ನಟನಿಗೆ ಸಮನ್ಸ್ ಜಾರಿ ಮಾಡಲಾಗಿತ್ತು. ನಂತರ ಅವರನ್ನು ವೈದ್ಯಕೀಯ ಪರೀಕ್ಷೆಗಳಿಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಚಲನಚಿತ್ರೋದ್ಯಮದಲ್ಲಿ ಮತ್ತೊಮ್ಮೆ ಡ್ರಗ್ಸ್ ಪ್ರಕರಣ ಸದ್ದು ಮಾಡಿದೆ. ತೆಲುಗು ಹಾಗೂ ತಮಿಳು ಚಿತ್ರಗಳಲ್ಲಿ ನಟಿಸುತ್ತಿರುವ ಪ್ರಸಿದ್ಧ ನಟನೊಬ್ಬ ಡ್ರಗ್ಸ್ ಡೀಲರ್ ಜೊತೆ ಸಂಪರ್ಕ ಹೊಂದಿದ್ದಾರೆ ಎಂಬ ಬಹುದೊಡ್ಡ ಆರೋಪ ಕೇಳಿಬಂದಿದೆ ಎನ್ನಲಾಗಿದೆ.
ಚೆನ್ನೈನಲ್ಲಿ ನೆಲೆಸಿರುವ ಈ ನಟನನ್ನು ಚೆನ್ನೈ ನಾರ್ಕೋಟಿಕ್ಸ್ ಇಂಟೆಲಿಜೆನ್ಸ್ ತಂಡ ಬಂಧಿಸಿದೆ. ಅವರ ರಕ್ತದ ಮಾದರಿಗಳನ್ನು ಸಂಗ್ರಹಿಸಿ ವರದಿಗಳಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆಯನ್ನು ತೀವ್ರಗೊಳಿಸಿದ್ದಾರೆ. ಈ ನಟ ಮಾದಕ ವಸ್ತುಗಳ ಖರೀದಿ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಮಾದಕ ವಸ್ತುಗಳ ಮಾರಾಟಗಾರ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ನಟನನ್ನು ವಿಚಾರಣೆ ನಡೆಸುತ್ತಿದ್ದಾರೆ.
ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಇಬ್ಬರನ್ನು ಬಂಧಿಸಿದ್ದಾರೆ. ಇತ್ತೀಚೆಗೆ ಚೆನ್ನೈನ ನುಂಗಂಬಕ್ಕಂನಲ್ಲಿ ನಡೆದ ಬಾರ್ ಗಲಾಟೆಗೆ ಸಂಬಂಧಿಸಿದಂತೆ ನುಂಗಂಬಕ್ಕಂ ಪೊಲೀಸರು ಮಾಜಿ ಎಐಎಡಿಎಂಕೆ ಕಾರ್ಯನಿರ್ವಾಹಕ ಪ್ರಸಾದ್ ಅಜಯ್ ವಂಡಾಯರ್ ಮತ್ತು ಇತರ 9 ಜನರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ವಿವಿಧ ವಿಭಾಗಗಳ ಅಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.
ಮಾಜಿ ಎಐಎಡಿಎಂಕೆ ಕಾರ್ಯನಿರ್ವಾಹಕ ಪ್ರಸಾದ್ ಅವರ ಸೆಲ್ ಫೋನ್ ಸಂಪರ್ಕಗಳನ್ನು ಪರಿಶೀಲಿಸಿದಾಗ, ಹಲವಾರು ವಿಷಯಗಳು ಬೆಳಕಿಗೆ ಬಂದವು. ಆತ ಮಾದಕ ವಸ್ತು ಕಳ್ಳಸಾಗಣೆದಾರನ ಸಂಪರ್ಕದಲ್ಲಿದ್ದಂತೆ ತೋರುತ್ತದೆ. ನಂತರ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸೇಲಂನಲ್ಲಿ ಪ್ರದೀಪ್ ಕುಮಾರ್ ಅವರನ್ನು ಬಂಧಿಸಲಾಯಿತು. ಆತನಿಂದ 11 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಯಿತು.
ತಮಿಳು ಮತ್ತು ತೆಲಗು ಸಿನಿಮಾಗಳಲ್ಲಿ ನಡಿಸಿ ಖ್ಯಾತರಾದ ನಟ ಶ್ರೀಕಾಂತ್ ಅವರನ್ನು ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. 'ರೋಜಾ ಪೂಲು' ಚಿತ್ರದ ಮೂಲಕ ನಾಯಕನಾಗಿ ಟಾಲಿವುಡ್ಗೆ ಎಂಟ್ರಿ ನೀಡಿದರು. ಅದರ ನಂತರ, ಅವರು ಹೆಚ್ಚಾಗಿ ತಮಿಳು ಚಲನಚಿತ್ರಗಳಲ್ಲಿ ಕಾಣಿಸಿಕೊಂಡರು. ದಾದಾ, ನಿಪ್ಪು, ಸುಪ್ರೀಂ, ರಾಗಲ 24 ಗನಲ್ಲೋ, ಲೈ, ಶ್ರೀನಿವಾಸ ಕಲ್ಯಾಣಂ, ಟೆನ್ತ್ ಕ್ಲಾಸ್ ಡೈರೀಸ್ ಮತ್ತು ಇತರ ಚಿತ್ರಗಳಲ್ಲಿ ನಟ ಶ್ರೀಕಾಂತ್ ನಟಿಸಿದ್ದಾರೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.