ಶೂಟಿಂಗ್ ವೇಳೆ ಭೀಕರ ಅಪಘಾತ..! ನಟ ಸೂರ್ಯ ತಲೆಗೆ ಗಾಯ... ವೈದ್ಯರು ಹೇಳಿದ್ದಿಷ್ಟು..
Suriya 44 : ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ ಸೂರ್ಯ 44 ಚಿತ್ರೀಕರಣದ ವೇಳೆ ನಡೆದ ಅಪಘಾತದಲ್ಲಿ, ನಟ ಸೂರ್ಯ ತಲೆಗೆ ಗಾಯವಾಗಿದ್ದು, ಶೂಟಿಂಗ್ ಮಧ್ಯದಲ್ಲಿ ಸ್ಥಗಿತಗೊಂಡಿದೆ.. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ..
Actor Surya injury : ಕಳೆದ ಎರಡು ವರ್ಷಗಳಿಂದ ತಮಿಳು ಸ್ಟಾರ್ ನಟ ಸೂರ್ಯ ಅಭಿಯನದ ಯಾವುದೇ ಚಿತ್ರ ಬಿಡುಗಡೆಯಾಗಿಲ್ಲ, ಹೀಗಾಗಿ ಅವರ ಮುಂದಿನ ಸಿನಿಮಾ ರಿಲೀಸ್‌ಗಾಗಿ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಸಿರುತೈ ಶಿವ ನಿರ್ದೇಶನದ 'ಕಂಗುವ' ಚಿತ್ರವು ಸ್ಟುಡಿಯೋ ಗ್ರೀನ್ ಮತ್ತು ಯುವಿ ಕ್ರಿಯೇಷನ್ಸ್‌ನ ಸಹಯೋಗದಲ್ಲಿ ಅದ್ಧೂರಿಯಾಗಿ ನಿರ್ಮಾಣವಾಗುತ್ತಿದೆ. ಬಿಗ್ ಬಜೆಟ್‌ನಲ್ಲಿ ತಯಾರಾಗಿರುವ ಈ ಚಿತ್ರ ಅಕ್ಟೋಬರ್ 10 ರಂದು ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.
'ಗಂಗುವಾ' ಚಿತ್ರದ ನಂತರ ನಟ ಸೂರ್ಯ ಅವರು ಕಾರ್ತಿಕ್ ಸುಬ್ಬರಾಜ್ ನಿರ್ದೇಶನದ 'ಸೂರ್ಯ 44' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಚಿತ್ರದ ಆರಂಭಿಕ ಚಿತ್ರೀಕರಣ ಮಾಲ್ಡೀವ್ಸ್‌ನಲ್ಲಿ ನಡೆಯುತ್ತಿದೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಟೀಸರ್ ವಿಡಿಯೋಗೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದನ್ನೂ ಓದಿ:ಮಾದುರಿ ದೀಕ್ಷಿತ್ ಹೃದಯ ಕದಿದ್ದ ಸ್ಟಾರ್ ಕ್ರಿಕೆಟಿಗ..! ನಂತರ ನಡೆದದ್ದೆಲ್ಲಾ ವಿದಿಯ ವಿಪರ್ಯಾಸ
ಸೂರ್ಯ ಸ್ಟೈಲಿಶ್ ಗ್ಯಾಂಗ್‌ಸ್ಟರ್ ಲುಕ್ ಅವರ ಅಭಿಮಾನಿಗಳಿಗೆ ತುಂಬಾ ಇಷ್ಟವಾಗಿದೆ. ಮಾಲ್ಡೀವ್ಸ್‌ನಲ್ಲಿ ಚಿತ್ರೀಕರಣ ಮುಗಿಸಿ ಇದೀಗ ಊಟಿಯಲ್ಲಿ ಎರಡನೇ ಹಂತದ ಚಿತ್ರೀಕರಣ ಪ್ರಾರಂಭವಾಗಿದೆ.. ಇದೇ ವೇಳೆ ಸಾಹಸ ದೃಶ್ಯಗಳ ಚಿತ್ರೀಕರಣದ ವೇಳೆ ನಡೆದ ಹಠಾತ್ ಅಪಘಾತದಲ್ಲಿ ನಟ ಸೂರ್ಯ ತಲೆಗೆ ಗಾಯ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ತಕ್ಷಣ ಶೂಟಿಂಗ್ ನಿಲ್ಲಿಸಿ ನಟನನ್ನು ಆಸ್ಪತ್ರೆಗೆ ಕರೆದೊಯ್ದಲಾಗಿದೆ. ಅವರಿಗೆ ಚಿಕಿತ್ಸೆ ನೀಡಿ ಪರೀಕ್ಷಿಸಿದ ವೈದ್ಯರು ಕೆಲ ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ಸೂಚಿಸಿದ್ದಾರೆ. ಈ ಸುದ್ದಿ ಸೂರ್ಯ ಅಭಿಮಾನಿಗಳಲ್ಲಿ ದೊಡ್ಡ ಆಘಾತ ಉಂಟುಮಾಡಿದೆ. ಅಲ್ಲದೆ, ಶೀಘ್ರವಾಗಿ ಚೇತರಿಸಿಕೊಳ್ಳುವಂತೆ ಹಾರೈಸುತ್ತಿದ್ದಾರೆ..
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.