ಬೆಂಗಳೂರು : ನಟ ಉಪೇಂದ್ರ ಆಡಿದ ಗಾದೆ ಮಾತು ಸೃಷ್ಟಿಸಿರುವ ವಿವಾದ ಅಷ್ಟಿಷ್ಟಲ್ಲ. ಸೋಷಿಯಲ್‌ ಮೀಡಿಯಾದಲ್ಲಿ ಲೈವ್‌ ನಟ ಉಪೇಂದ್ರ ಆಡಿದ ಒಂದು ಗಾದೆ ಸಿಕ್ಕಾಪಟ್ಟೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಪಕ್ಷ ಪ್ರಜಾಕೀಯ ಅಭಿಮಾನಿಗಳು ಮತ್ತು ಸದಸ್ಯರನ್ನು ಉದ್ದೇಶಿಸಿ ಮಾತನಾಡಿದ ನಟ, ಮಾತಿನ ಮಧ್ಯೆ ʻಊರಿದ್ದಲ್ಲಿ ಹೊಲಗೇರಿ ಇರುತ್ತೆʼ ಎಂದಿದ್ದರು. ಇದು ಅನೇಕ ದಲಿತ ಸಂಘಟನೆಗಳ ಅಸಮಾಧಾನಕ್ಕೆ ಕಾರಣವಾಗಿತ್ತು. ಅಲ್ಲದೇ ಉಪೇಂದ್ರ ವಿರುದ್ಧ ಅಟ್ರಾಸಿಟಿ ಕೇಸ್‌ ಕೂಡ ದಾಖಲಾಗಿತ್ತು. 


COMMERCIAL BREAK
SCROLL TO CONTINUE READING

ಚಿತ್ರನಟ ಉಪೇಂದ್ರ ವಿರುದ್ಧ ಜಾತಿ ನಿಂದನೆ ಪ್ರಕರಣಕ್ಕೆ ತಡೆ ಕೋರಿ ಉಪೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯಿತು. ಗಾದೆ ಮಾತು ಉಲ್ಲೇಖಿಸಿ ಉಪೇಂದ್ರ ಹೇಳಿಕೆ ಪರಿಶಿಷ್ಟ ಜಾತಿ, ಪಂಗಡ ದೌರ್ಜನ್ಯ ತಡೆ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ನಟ ಉಪೇಂದ್ರ ಪರ ಹಿರಿಯ ವಕೀಲ ಉದಯ್ ಹೊಳ್ಳ ವಾದ ಮಂಡನೆ ಮಾಡಿದರು.


ಇದನ್ನೂ ಓದಿ: ಹೈಕೋರ್ಟ್ ಮೆಟ್ಟಿಲೇರಿದ ನಟ ಉಪೇಂದ್ರ : ಎಫ್ಐಆರ್ ರದ್ದು ಕೋರಿ ಅರ್ಜಿ


ಇದೊಂದೇ ಪದವನ್ನು ಮಾತ್ರ ಉಪಯೋಗಿಸಿದರಾ ಎಂದು ನ್ಯಾ. ಹೇಮಂತ್ ಚಂದನ್ ಗೌಡರ್ ಪ್ರಶ್ನಿಸಿದರು. ಗಾದೆ ಬಳಸಿದ್ದಾರೆ ಅದಕ್ಕೇಕೆ ಇಷ್ಟೊಂದು ಎಫ್ಐಆರ್ ಎಂದು ನ್ಯಾಯಾಲಯ ಹೇಳಿದೆ. ಚಿತ್ರನಟ ಉಪೇಂದ್ರ ಗೆ ಹೈಕೋರ್ಟ್ ಬಿಗ್‌ ರಿಲೀಫ್ ನೀಡಿದೆ. ಉಪೇಂದ್ರ ವಿರುದ್ಧದ ಎಫ್‌ಐಆರ್‌ ಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. 


ಹೈಕೋರ್ಟ್ ಗೆ ಚಿತ್ರನಟ ಉಪೇಂದ್ರ ಸಲ್ಲಿಸಿದ ಅರ್ಜಿಯ ವಿವರ 


ಎಫ್‌ಐಆರ್ ರದ್ದು ಕೋರಿ ನಟ ಉಪೇಂದ್ರ ಹೈಕೋರ್ಟ್‌ಗೆ  ಅರ್ಜಿ ಸಲ್ಲಿಸಿದ್ದರು. ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ಮಾತ್ರವೇ ಊರೆಂದರೆ ಹೊಲಗೇರಿ ಇರುತ್ತೆ ಎಂಬ ಗಾದೆ ಬಳಸಲಾಗಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಲಾಗಿದೆ. ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ಉಪೇಂದ್ರ ಹೋರಾಡುತ್ತಿದ್ದಾರೆ. ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ವಾಟ್ಸ್ ಆಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಪೊಲೀಸರು ಉಪೇಂದ್ರಗೆ ಕಿರುಕುಳ ನೀಡಲು ಬಯಸಿದ್ದಾರೆ. ಹೀಗಾಗಿ ಎಫ್‌ಐಆರ್ ಗಳಿಗೆ ತಡೆಯಾಜ್ಞೆ ನೀಡಲು ಮನವಿ ಮಾಡಲಾಗಿದೆ ಎಂದು ನಟ ಉಪೇಂದ್ರ ಪರ ವಕೀಲರು ನ್ಯಾಯಾಲಯಕ್ಕೆ ಮನವಿ ಸಲ್ಲಿಸಿದ್ದರು. 


ಇದನ್ನೂ ಓದಿ: ನಟ ಉಪೇಂದ್ರಗೆ ಬಂಧನ ಭೀತಿ! ರಿಯಲ್​ ಸ್ಟಾರ್‌ ಮನೆಗೆ ಬಂತು ಪೊಲೀಸ್ ನೋಟಿಸ್​?


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.