Rajinikanth Upendra : ವೆಟ್ಟೈಯಾನ್ ಸಿನಿಮಾ ಅಲ್ಲದೆ ನಿರ್ದೇಶಕ ಲೋಕೇಶ್ ಕನಕರಾಜ್ ಅವರ ಕೂಲಿ ಸಿನಿಮಾಗಾಗಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ಇದರಲ್ಲಿ ಶ್ರುತಿ ಹಾಸನ್ ನಾಯಕಿಯಾಗಿ ನಟಿಸಿದ್ದಾರೆ. ಆದರೆ ಇದೀಗ ಈ ಚಿತ್ರಕ್ಕೆ ಸಂಬಂಧಿಸಿದ ಕುತೂಹಲಕಾರಿ ಅಪ್‌ಡೇಟ್‌ ಒಂದು ಸಿನಿಮಾ ವಲಯದಲ್ಲಿ ಹರಿದಾಡುತ್ತಿದೆ.


COMMERCIAL BREAK
SCROLL TO CONTINUE READING

ಹೌದು.. ಇತ್ತೀಚಿನ ಮಾಹಿತಿಯ ಪ್ರಕಾರ ಈ ಸಿನಿಮಾದಲ್ಲಿ ರಿಯಲ್ ಸ್ಟಾರ್ ಉಪೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಇದುವರೆಗೂ ಕೂಲಿ ಚಿತ್ರದಲ್ಲಿ ಉಪ್ಪಿ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಮಾತ್ರ ಇತ್ತು. ಆದರೆ ಇದೀಗ ಅಧಿಕೃತವಾಗಿ ಘೋಷಣೆಯಾಗಿದ್ದು, ಪೋಸ್ಟರ್‌ ಕೂಡ ಬಿಡುಗಡೆಯಾಗಿದೆ.


ಇದನ್ನೂ ಓದಿ:SIIMA ಸಮಾರಂಭಕ್ಕೆ ದಿನಗಣನೆ..! ನಿಮ್ಮ ನೆಚ್ಚಿನ ತಾರೆ, ಸಿನಿಮಾಗೆ VOTE ಮಾಡಲು ಹೀಗೆ ಮಾಡಿ..


ಪೋಸ್ಟರ್‌ನಲ್ಲಿ ಉಪೇಂದ್ರ ರಗಡ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದು, ಚಿತ್ರದ ಹೈಪ್ ಮತ್ತಷ್ಟು ಹೆಚ್ಚಿಸಿದೆ. ಉಪ್ಪಿ ತಮ್ಮ ಸಿನಿಮಾ ಜೀವನದಲ್ಲಿ ಮೊದಲ ಬಾರಿಗೆ ಸೂಪರ್ ಸ್ಟಾರ್ ರಜನಿಕಾಂತ್ ಜೊತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಉಪ್ಪಿಯ ಈ ಲುಕ್ ನೋಡಿದ್ರೆ ಸೂಪರ್‌ ಸ್ಟಾರ್‌ಗೆ ರಿಯಲ್‌ ಸ್ಟಾರ್‌ ವಿಲನ್‌ ಆಗ್ತಾರಾ ಎನ್ನುವ ಸಂಶಯ ಮೂಡಿಸುತ್ತಿದೆ.. 


ಕೂಲಿ ಚಿತ್ರದಲ್ಲಿ ಶ್ರುತಿ ಹಾಸನ್ ಮತ್ತು ಮಹೇಂದ್ರನ್ ಪ್ರಮುಖ ಪಾತ್ರಗಳಲ್ಲಿ ನಟಿಸುತ್ತಿದ್ದಾರೆ. ಚಿತ್ರಕ್ಕೆ ಮೊದಲು ತಲೈವಾ 171 ಅನ್ನೋ ಶೀರ್ಷಿಕೆ ಇಡಲಾಗಿತ್ತು. ಈ ಆಕ್ಷನ್ ಥ್ರಿಲ್ಲರ್ ಸಿನಿಮಾ ತಮಿಳಿನ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಲಿದೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜನೆ, ಗಿರೀಶ್ ಗಂಗಾಧರನ್ ಕ್ಯಾಮೆರಾ ವರ್ಕ್ ಚಿತ್ರಕ್ಕಿದೆ. ಸಧ್ಯ ರಿಯಲ್ ಸ್ಟಾರ್ ಉಪೇಂದ್ರ ಯುಐ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.