ಹೈಕೋರ್ಟ್ ಮೆಟ್ಟಿಲೇರಿದ ನಟ ಉಪೇಂದ್ರ : ಎಫ್‌ಐಆರ್ ರದ್ದು ಕೋರಿ ಅರ್ಜಿ
ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ. ಅರ್ಜಿದಾರರು ದಲಿತರು ಅಥವಾ ಎಸ್‌ಸಿ ಮತ್ತು ಎಸ್‌ಟಿಎಸ್‌ಗೆ ಸೇರಿದ ವ್ಯಕ್ತಿಗಳನ್ನು ಅವಮಾನಿಸಿಲ್ಲ ಎಂದು ನಟ ಉಪೇಂದ್ರ ಅವರು ತಮ್ಮ ವಿರುದ್ಧದ ಎಫ್‌ಐಆರ್ ರದ್ದತಿ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Upendra Atrocity Case : ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದು ಕೋರಿ ನಟ ಉಪೇಂದ್ರ ಅವರು ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯಾವುದೇ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಒಳ್ಳೆಯದನ್ನು ಮಾಡುವಾಗಲೂ ಟೀಕಿಸುವವರು ಇದ್ದೇ ಇರುತ್ತಾರೆ. ಈ ಮಾತಿಗೆ ಪೂರಕವಾಗಿ ನಾನು ಊರೆಂದರೆ ಹೊ--------- ಗಾದೆ ಬಳಸಿದೆ. ಆಕ್ಷೇಪ ವ್ಯಕ್ತವಾದ ಕೂಡಲೇ ಡಿಲೀಟ್ ಮಾಡಿ ಕ್ಷಮೆ ಕೋರಿದ್ದಾ ಅರ್ಜಿಯಲ್ಲಿ ನಟ ತಿಳಿಸಿದ್ದಾರೆ.
ಅಲ್ಲದೆ, ಹಳೆಯ ಗಾದೆ ಮಾತನ್ನು ಉಲ್ಲೇಖಿಸಿದ್ದು ಜಾತಿನಿಂದನೆಯಲ್ಲ. ಎಸ್‌ಸಿ, ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಅಪರಾಧ ಎಸಗಿಲ್ಲ. ಸಮಾಜದಲ್ಲಿನ ತಾರತಮ್ಯದ ವಿರುದ್ಧ ಉಪೇಂದ್ರ ಹೋರಾಡುತ್ತಿದ್ದಾರೆ. ಜಾತಿ, ಸಮುದಾಯಗಳ ನಡುವೆ ಸಾಮರಸ್ಯಕ್ಕೆ ಯತ್ನಿಸುತ್ತಿದ್ದಾರೆ. ಪ್ರಚಾರ ಪಡೆಯಲೆಂದು ತಮ್ಮ ವಿರುದ್ಧ ದೂರು ದಾಖಲಿಸಲಾಗಿದೆ. ವಾಟ್ಸ್ ಆಪ್ ಮೂಲಕ ಪೊಲೀಸರು ನೋಟಿಸ್ ಕಳುಹಿಸಿದ್ದಾರೆ. ಪೊಲೀಸರು ಉಪೇಂದ್ರಗೆ ಕಿರುಕುಳ ನೀಡಲು ಬಯಸಿದ್ದಾರೆ. ಹೀಗಾಗಿ ಎಫ್‌ಐಆರ್ ಗಳಿಗೆ ತಡೆಯಾಜ್ಞೆ ನೀಡಲು ಮನವಿ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.
ಇದನ್ನೂ ಓದಿ: ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಹೊಸ ಸಿನಿಮಾ ಘೋಷಣೆ
ಇನ್ನು ಗಾದೆ ಮಾತು ಹೇಳಿದ ಉಪೇಂದ್ರ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಹನುಮಂತನಗರ ಠಾಣೆಗೆ ಭೀಮ್ ಆರ್ಮಿ ದೂರು ನೀಡಿದೆ. ಬಸವನಗುಡಿ ವಿಧಾನಸಭಾ ಕ್ಷೇತ್ರದ ಭೀಮ್ ಆರ್ಮಿ ಅಧ್ಯಕ್ಷ ರಾಜಶೇಖರ್ ಜಾಪನೂರು ಅವರು ದೂರು ನೀಡಿದ್ದಾರೆ. SC, ST prevention of Atrocity act ಅಡಿ ಪ್ರಕರಣ ದಾಖಲಿಸಲು ಆಗ್ರಹಿಸಿದ್ದಾರೆ.
ಇನ್ನು ಪೊಲೀಸರು ನಟ ಉಪೇಂದ್ರಗಾಗಿ ಹುಡುಕಾಟ ನಡೆಸಿದ್ದಾರೆ. FIR ದಾಖಲಾಗುತ್ತಿದ್ದಂತೆ ಉಪೇಂದ್ರ ಮನೆಗೆ ಪೊಲೀಸರು ತೆರಳಿದ್ದರು. ಮಹಜರು ಮುಗಿಸಿ ಮನೆ ಸಿಬ್ಬಂದಿಗೆ ನೋಟಿಸ್ ನೀಡಿ ಬಂದಿದ್ದರು. ವಾಟ್ಸ್‌ಪ್ ಮೂಲಕವೂ ಪೊಲೀಸರು ನೋಟಿಸ್ ನೀಡಿದ್ದಾರೆ. ಆದ್ರೆ ಉಪೇಂದ್ರ ಅವರು ನೋಟಿಸ್ ವೀಕ್ಷಣೆ ಮಾಡಿ ಮೊಬೈಲ್ ಸ್ವಿಚ್ಡ್ ಆಫ್ ಮಾಡಿಕೊಂಡಿದ್ದಾರೆ. ತಕ್ಣಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. ಆದರೆ ಇನ್ನೂ ವಿಚಾರಣೆಗೆ ಉಪೇಂದ್ರ ಅವರು ಹಾಜರಾಗಿಲ್ಲ. ಈ ಹಿನ್ನೆಲೆಯಲ್ಲಿ ಲೋಕೆಷನ್ ಆಧರಿಸಿ ಉಪೇಂದ್ರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಇದನ್ನೂ ಓದಿ: ನಟ ಉಪೇಂದ್ರಗೆ ಬಂಧನ ಭೀತಿ! ರಿಯಲ್ ಸ್ಟಾರ್ ಮನೆಗೆ ಬಂತು ಪೊಲೀಸ್ ನೋಟಿಸ್?
ಕನ್ನಡ ಗಾದೆಯನ್ನು ಬಳಸಿದ್ದಕ್ಕಾಗಿ ಅರ್ಜಿದಾರರ ವಿರುದ್ಧ ಸುಳ್ಳು ದೂರು ನೀಡಲಾಗಿದೆ. ಕ್ಷುಲ್ಲಕ ಮತ್ತು ಪ್ರಚಾರಕ್ಕಾಗಿ ದೂರನ್ನು ದಾಖಲಿಸಲಾಗಿದೆ. ಅರ್ಜಿದಾರರು ದಲಿತರು ಅಥವಾ ಎಸ್‌ಸಿ ಮತ್ತು ಎಸ್‌ಟಿಎಸ್‌ಗೆ ಸೇರಿದ ವ್ಯಕ್ತಿಗಳನ್ನು ಅವಮಾನಿಸಿಲ್ಲ. ಪ್ರತಿವಾದಿಗಳಿಂದ ಅರ್ಜಿದಾರರಿಗೆ ಕಿರುಕುಳ ನೀಡುವ ಎಲ್ಲಾ ಸಾಧ್ಯತೆಗಳಿವೆ. ಅರ್ಜಿದಾರರು ಯಾವುದೇ ವ್ಯಕ್ತಿಯನ್ನು ಜಾತಿ, ಮತ, ಸಮುದಾಯ ಇತ್ಯಾದಿಗಳ ಆಧಾರದ ಮೇಲೆ ತಾರತಮ್ಯ ಮಾಡಿಲ್ಲ. ಉಪೇಂದ್ರ ಯಾವಾಗಲೂ ಜನರನ್ನು ಗೌರವಿಸುತ್ತಾರೆ. ಸಮಾಜ/ಸಮುದಾಯದ ಎಲ್ಲಾ ವರ್ಗಗಳ ನಡುವೆ ಸೌಹಾರ್ದತೆಯನ್ನು ಕಾಪಾಡಿಕೊಂಡಿದ್ದಾರೆ. ದೂರು ದುರುದ್ದೇಶಕ ಪ್ರೇರಿತವಾಗದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿ ಕೋರ್ಟ್‌ಗೆ ಮನವಿ ಮಾಡಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ