Actor Upendra Post : ನಟ ಉಪೇಂದ್ರ ಆಡಿದ ಒಂದು ಮಾತು ಸಾಕಷ್ಟು ವಿವಾದಗಳಿಗೆ ಕಾರಣವಾಗುತ್ತಿದೆ. ನಟ ಉಪೇಂದ್ರ ಸೋಶಿಯಲ್‌ ಮೀಡಿಯಾದಲ್ಲಿ ಲೈವ್‌ ಬಂದು ಮಾತನಾಡುವಾಗ ಹೇಳಿದ ಒಂದು ಮಾತು ಅವರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಅವರು ಆಡಿದ ಗಾದೆ ವಿವಾದಾತ್ಮಕ ತಿರುವು ಪಡೆದಿದೆ. ಉಪೇಂದ್ರ ಅವರು ವಿಡಿಯೋ ಸಂದೇಶದಲ್ಲಿ ಮಾತನಾಡುವಾಗ ಉಲ್ಲೇಖಿಸಿದ ಗಾದೆ ಮಾತು ದಲಿತ ಸಮುದಾಯದ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಇದರ ಬೆನ್ನಲ್ಲೇ ನಟ ಉಪೇಂದ್ರ ತಾವು ಆ ಮಾತನ್ನು ಬಾಯಿತಪ್ಪಿ ಹೇಳಿದ್ದು ಎಂದು ಕ್ಷಮೆಯಾಚಿಸಿದ್ದರು. ಆದರೆ ಉಪೇಂದ್ರ ಅವರ ವಿರುದ್ಧ ಅಟ್ರಾಸಿಟಿ ಪ್ರಕರಣ ದಾಖಲಿಸಲಾಯಿತು. ವಿವಾದದ ಬೆನ್ನಲ್ಲೆ ಉಪೇಂದ್ರ ಒಂದು ಪೋಸ್ಟ್‌ ಮಾಡಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ನಟ ಉಪೇಂದ್ರ ವಿರುದ್ದ 'ಅಟ್ರಾಸಿಟಿ ಕೇಸ್‌' ದಾಖಲು


ಇದೇ ವಿಚಾರವಾಗಿ ಫೇಸ್‌ಬುಕ್‌ನಲ್ಲಿ ಪೋಸ್ಟ್‌ ಮಾಡಿರುವ ನಟ ಉಪೇಂದ್ರ, "ಇಂದು ನನ್ನ ವಿರುಧ್ದ ಮಾತನಾಡುತ್ತಿರುವ ಹಲವರು ಅಂದು ಹುಟ್ಟೇ ಇರಲಿಲ್ಲ. 50 ವರ್ಷಗಳ ಹಿಂದೆ  ನನ್ನ ಬಾಲ್ಯ ನಾನು ಎಂತಹ ಪರಿಸರದಲ್ಲಿ ಬೆಳೆದೆ.. ಆ ಬಾಲ್ಯದಲ್ಲಿ ನಾನು ಕಂಡ ಆ ಕ್ರೂರ ಬಡತನ, ನನ್ನ ಕಣ್ಣ ಮುಂದೆಯೇ ಬೆಂಕಿ ಹಚ್ಚಿಕೊಂಡು ಆದ ಆತ್ಮಹತ್ಯೆಗಳು, ಹಸಿವು, ಅಪಮಾನ, ತುಳಿತ…. ಇದನ್ನು ಅನುಭವಿಸಿ ಬೆಳೆದ ನಾನು ಇಂದು ಒಂದು ವರ್ಗದ ಜನರ ಬಗ್ಗೆ ಅವಮಾನಕಾರಿಯಾಗಿ ಮಾತನಾಡುತ್ತೇನೆಯೇ ? ನನಗೆ ಹುಚ್ಚೇ ? ಅದಕ್ಕೆ ಕಾರಣವಾದರೂ ಏನು ? ಅದರಿಂದ ನನಗೆ ಸಿಗುವ ಲಾಭವಾದರೂ ಏನು ? ಇಷ್ಟಕ್ಕೂ ಕ್ಷಮೆಯನ್ನು ಸ್ವೀಕರಿಸುವ ದೊಡ್ಡತನವೂ ಇಲ್ಲವೇ ? ಯಾಕೆ ಇಷ್ಟೊಂದು ಧ್ವೇಷ?" ಎಂದು ಪ್ರಶ್ನಿಸಿದ್ದಾರೆ. 



ಉಪೇಂದ್ರ ಹೇಳಿಕೆ ವಿವಾದಾತ್ಮಕ ತಿರುವು ಪಡೆಯುತ್ತಿದ್ದಂತೆ ಬೆಂಗಳೂರು ದಕ್ಷಿಣ ವಿಭಾಗದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಮಧುಸೂದನ್ ಅವರು ಬೆಂಗಳೂರಿನ ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಸಾಮಾಜಿಕ ಜಾಲತಾಣದ ಲೈವ್‌ ಕಾರ್ಯಕ್ರಮದಲ್ಲಿ ಮಾತನಾಡುವಾಗ  'ಊರು ಅಂದ್ಮೇಲೆ ಹೊಲೆಗೇರಿ ಇರುತ್ತೆ' ಎಂದು ನಟ ಉಪೇಂದ್ರ ಹೇಳಿದ್ದರು. ಉಪೇಂದ್ರ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಟ ಉಪೇಂದ್ರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಅವರ ಹೇಳಿಕೆ ವಿವಾದವಾಗುತ್ತಿದ್ದಂತೆ, ಉಪೇಂದ್ರ ಸಾಮಾಜಿಕ ಜಾಲತಾಣಗಳಲ್ಲಿ ಕ್ಷಮೆಯಾಚಿಸಿದ್ದು, ಈ ಗಾದೆ ತಪ್ಪಿ ಬಾಯಿಯಿಂದ ಬಂದಿದೆ ಎಂದು ಹೇಳಿದ್ದಾರೆ. ಇದರಿಂದ ಹಲವರ ಭಾವನೆಗಳಿಗೆ ಧಕ್ಕೆಯಾಗಿರುವುದನ್ನು ಗಮನಿಸಿದ ತಕ್ಷಣ ಲೈವ್ ವಿಡಿಯೋ ಡಿಲೀಟ್ ಮಾಡಿದ್ದಾರೆ. ತಾವಾಡಿದ ಮಾತಿಗೆ ಉಪೇಂದ್ರ ಕ್ಷಮೆ ಕೇಳಿದ್ದಾರೆ. 


ಇದನ್ನೂ ಓದಿ:  ʼಹೊಲ್ಗೇರಿʼ ಕುರಿತು ನಟ ಉಪೇಂದ್ರ ಹೇಳಿಕೆಗೆ ನೆಟ್ಟಿಗರ ಆಕ್ರೋಶ..! ಕ್ಷಮೇ ಕೇಳಿದ ಬುದ್ದಿವಂತ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ