Vijay on CAA implementation : ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ ಯನ್ನು ಜಾರಿಗೊಳಿಸಿದ ಬೆನ್ನಲ್ಲೆ, ಪರ-ವಿರೋಧ ಚರ್ಚೆಗಳು ನಡೆಯುತ್ತಿದೆ. ಈ ಪೈಕಿ ತಮಿಳು ಚಲನಚಿತ್ರ ನಟ, ತಮಿಳಿಗ ವೆಟ್ರಿ ಕಳಗಂ ಪಾರ್ಟಿ ಸ್ಥಾಪಕ ವಿಜಯ್‌ ಅವರು ಇದಕ್ಕೆ ತೀರ್ವ ವಿರೋಧ ವ್ಯಕ್ತಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು.. ಪರ-ವಿರೋಧದ ನಡುವೆ ಕೇಂದ್ರ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆ (CAA)ಯನ್ನು ಜಾರಿಗೊಳಿಸಿದೆ. ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಸೂಪರ್‌ ಸ್ಟಾರ್‌ ನಟ ವಿಜಯ್‌, ಈ ಕಾಯ್ದೆಯನ್ನು ತಮಿಳುನಾಡಿನಲ್ಲಿ ಜಾರಿಯಾಗದಂತೆ ನೋಡಿಕೊಳ್ಳಬೇಕು ಎಂದು ಅಭಿಪ್ರಾಯ ತಿಳಿಸಿದ್ದಾರೆ.


ಇದನ್ನೂ ಓದಿ: ಖ್ಯಾತ ನಟನೊಂದಿಗೆ ರಶ್ಮಿಕಾ ಮಂದಣ್ಣ ಡೇಟಿಂಗ್? ಹೊಸ ಫೋಟೋದಿಂದ ಸೀಕ್ರೇಟ್‌ ಲವ್ ರಿವೀಲ್‌ !!


ಈ ಕುರಿತು ಪಕ್ಷದ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ವಿಜಯ್​, ಸಿಎಎ ಜಾರಿಯನ್ನು ಒಪ್ಪಲು ಸಾಧ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಹಬಾಳ್ವೆಯಿಂದ ಬಾಳುತ್ತಿದ್ದು, ಇಂತಹ ಕಾನೂನಿನ ಅಗತ್ಯವಿಲ್ಲ. ಇದು ʼವಿಭಜಕʼ ಕಾಯ್ದೆ ಅಂತ ಕಿಡಿಕಾರಿದ್ದಾರೆ.  


ಸಿಎಎ ಅನ್ನು ಜಾರಿಗೊಳಿಸಲು ಕೇಂದ್ರವು ನಿನ್ನೆ ಅಧಿಸೂಚನೆಯನ್ನು ಹೊರಡಿಸಿತ್ತು. ಇದಕ್ಕೆ ನಟ ವಿಜಯ್ ಅಷ್ಟೇ ಅಲ್ಲ, ಮಮತಾ ಬ್ಯಾನರ್ಜಿ, ಪಿಣರಾಯಿ ವಿಜಯನ್, ಸೇರಿದಂತೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.​ ಅಲ್ಲದೆ, ತಮ್ಮ ತಮ್ಮ ರಾಜ್ಯದಲ್ಲಿ ಈ ಕಾಯ್ದೆಯನ್ನು ಜಾರಿಯಾಗಲು ಬಿಡುವುದಿಲ್ಲ ಎಂದಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.